ಎಸ್‌ಐಆರ್‌ಗೆ ಬೂತ್ ಮಟ್ಟದಲ್ಲಿ ತ್ವರಿತ ಹೆಲ್ಪ್‌ಡೆಸ್ಕ್ ಆರಂಭಿಸಿ: ನಾಗರಿಕ ಮತಕಾವಲು ಸಮಿತಿ ಆಗ್ರಹ

ಬೆಂಗಳೂರು: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರಿಗೆ ನೆರವಾಗಲು ರಾಜ್ಯ ಸರ್ಕಾರ ಕೂಡಲೇ ಬೂತ್ ಮಟ್ಟದಲ್ಲಿ ಹೆಲ್ಪ್‌ಡೆಸ್ಕ್‌ಗಳನ್ನು ಆರಂಭಿಸಬೇಕು ಎಂದು ನಾಗರಿಕ ಮತಕಾವಲು ಸಮಿತಿ ಒತ್ತಾಯಿಸಿದೆ. ಎಸ್‌ಐಆರ್‌

ಈ ಕುರಿತು ಶನಿವಾರ ಪತ್ರಿಕಾ ಹೇಳಿಕೆ ನೀಡಿರುವ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್, ರೈತ ಸಂಘದ ಜೆ.ಎಂ. ವೀರಸಂಗಯ್ಯ, ಎದ್ದೇಳು ಕರ್ನಾಟಕದ ಅಮ್ಜದ್ ಪಾಷಾ ಹಾಗೂ ವಿಚಾರವಾದಿಗಳ ವೇದಿಕೆಯ ನಾಗೇಶ್ ಅರಳಕುಪ್ಪೆ, ನಾಗರಿಕ ಸಂಘಟನೆಗಳ ಒತ್ತಾಯದ ಮೇರೆಗೆ ಬೂತ್ ಮಟ್ಟದಲ್ಲಿ ಹೆಲ್ಪ್‌ಡೆಸ್ಕ್‌ಗಳನ್ನು ಸ್ಥಾಪಿಸುವುದಾಗಿ ಸರ್ಕಾರ ತೀರ್ಮಾನಿಸಿದ್ದರೂ, ಅವು ಇನ್ನೂ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಎಸ್‌ಐಆರ್ ಪ್ರಕ್ರಿಯೆಯ ಮೊದಲ ಹಂತದಲ್ಲಿ ಪ್ರತಿದಿನವೂ ಮತದಾರರಿಗೆ ಮಹತ್ವದ್ದಾಗಿದ್ದು, 2002ರ ಮತದಾರರ ಪಟ್ಟಿಯಲ್ಲಿ ಹೆಸರು ಹುಡುಕುವುದು, ಗಣತಿ ನಮೂನೆ ಭರ್ತಿ ಮಾಡುವುದು ಸೇರಿದಂತೆ ಹಲವು ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಸಾರ್ವಜನಿಕರು ಎದುರಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ಗ್ರೌಂಡ್ ರಿಪೋರ್ಟ್‌: ಒಬ್ಬ BLOಗೆ ನೂರಾರು ಮನೆಗಳು; ಮತದಾರರ ಪಟ್ಟಿ ಪರಿಷ್ಕರಣೆಯ ಸವಾಲುಗಳೇನು?

ಆದ್ದರಿಂದ ರಾಜ್ಯ ಸರ್ಕಾರ ರಾಜ್ಯಾದ್ಯಂತ ಎಸ್‌ಐಆರ್ ಸಹಾಯವಾಣಿ ಕೇಂದ್ರಗಳು (ಹೆಲ್ಪ್‌ಡೆಸ್ಕ್‌ಗಳು) ಆರಂಭಿಸಿ, ಅಗತ್ಯ ದಾಖಲೆಗಳನ್ನು ತ್ವರಿತವಾಗಿ ದೊರಕಿಸಿಕೊಡುವ ವ್ಯವಸ್ಥೆ ಕಲ್ಪಿಸಬೇಕು. ಶಾಶ್ವತ ನಿವಾಸಿ ಪ್ರಮಾಣಪತ್ರ ಸೇರಿದಂತೆ ವಿವಿಧ ದಾಖಲೆಗಳನ್ನು ಪಡೆಯಲು ಬೂತ್ ಮಟ್ಟದಲ್ಲಿಯೇ ವಿಶೇಷ ಶಿಬಿರಗಳನ್ನು ಆಯೋಜಿಸಿ, ದಾಖಲೆಗಳ ಕೊರತೆಯಿಂದ ಯಾವುದೇ ನಾಗರಿಕರು ಸಂಕಷ್ಟಕ್ಕೀಡಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆಯಿಂದ ಮತದಾರರು ಗೊಂದಲ ಮತ್ತು ಸಂಕಷ್ಟಕ್ಕೆ ಒಳಗಾಗಿರುವ ಸಂದರ್ಭದಲ್ಲಿ, ರಾಜ್ಯ ಸರ್ಕಾರ ಹೊರಡಿಸಿರುವ ಶಾಶ್ವತ ನಿವಾಸಿ ಪ್ರಮಾಣಪತ್ರ ಕುರಿತ ಅಧಿಸೂಚನೆಯನ್ನು ಪ್ರಶ್ನಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರ ಬರೆದಿರುವುದು ವಿಷಾದನೀಯ ಎಂದು ನಾಗರಿಕ ಮತಕಾವಲು ಸಮಿತಿ ಟೀಕಿಸಿದೆ.

ಜನರು ಅಗತ್ಯ ದಾಖಲೆಗಳ ಕೊರತೆ, ಮಾಹಿತಿ ಅಭಾವ ಹಾಗೂ ಆಡಳಿತಾತ್ಮಕ ತೊಂದರೆಗಳಿಂದ ಪರದಾಡುತ್ತಿರುವ ಸಂದರ್ಭದಲ್ಲಿ, ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಡುವ ಬದಲು ರಾಜಕೀಯ ಮಾಡುವ ಪ್ರಯತ್ನ ಖಂಡನೀಯ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಜನರಿಗೆ ಅಗತ್ಯ ನೆರವು ನೀಡಲು ಸರ್ಕಾರ ಹಾಗೂ ರಾಜಕೀಯ ಪಕ್ಷಗಳು ಮುಂದಾಗಬೇಕು ಎಂದು ಹೋರಾಟಗಾರರು ಒತ್ತಾಯಿಸಿದ್ದಾರೆ.

ಇದನ್ನೂ ನೋಡಿ : “ವೋಟ್ ಬೇಕಾದಾಗ ನಾವು ಬೇಕು, ವ್ಯಾಪಾರಕ್ಕೆ ಜಾಗ ಕೇಳಿದರೆ ಬೇಡವೇ?” Janashakthi Media

Donate Janashakthi Media

Leave a Reply

Your email address will not be published. Required fields are marked *