ಎಂಎಲ್‌ಸಿ ಸದಸ್ಯತ್ವ ರದ್ದು ಪ್ರಶ್ನೆ: ಎಂಕೆ ಪ್ರಾಣೇಶ್ ಅರ್ಜಿ ಸುಪ್ರೀಂ ಕೋರ್ಟ್ ವಜಾ

ನವದೆಹಲಿ: ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಆಯ್ಕೆಯಾಗಿದ್ದ ವಿಧಾನ ಪರಿಷತ್ ಸದಸ್ಯ ಎಂಕೆ ಪ್ರಾಣೇಶ್ ಅವರ ಸದಸ್ಯತ್ವ ರದ್ದು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರಿಗೆ ಮೇಲುಗೈ ಸಿಕ್ಕಿದೆ. ಸದಸ್ಯತ್ವ

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ ಪೀಠವು ಈ ತೀರ್ಪು ನೀಡಿದೆ.

2021ರ ಡಿಸೆಂಬರ್‌ನಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಎಂಕೆ ಪ್ರಾಣೇಶ್ ಹಾಗೂ ಕಾಂಗ್ರೆಸ್‌ನಿಂದ ಗಾಯತ್ರಿ ಶಾಂತೇಗೌಡ ಸ್ಪರ್ಧಿಸಿದ್ದರು. ಒಟ್ಟು ಚಲಾವಣೆಯಾಗಿದ್ದ 2,410 ಮತಗಳಲ್ಲಿ 39 ಮತಗಳು ಅಸಿಂಧುವಾಗಿದ್ದು, ಪ್ರಾಣೇಶ್ 1,188 ಮತಗಳನ್ನು ಪಡೆದು ಕೇವಲ ಆರು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಗಾಯತ್ರಿ ಶಾಂತೇಗೌಡ 1,182 ಮತಗಳನ್ನು ಪಡೆದಿದ್ದರು.

ಇದನ್ನೂ ಓದಿ: ದ್ವೇಷಕೋರತನದ ಈ ಕರಾಳ ದಿನಗಳಲ್ಲಿ ನ್ಯಾಯಾಂಗ

ಚುನಾವಣೆಯಲ್ಲಿ ನಿಯಮ ಉಲ್ಲಂಘನೆ ನಡೆದಿದೆ ಎಂದು ಆರೋಪಿಸಿ ಗಾಯತ್ರಿ ಶಾಂತೇಗೌಡ ನ್ಯಾಯಾಲಯದ ಮೊರೆ ಹೋಗಿದ್ದರು. ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಮೂಡಿಗೆರೆ ಪಟ್ಟಣ ಪಂಚಾಯತ್‌ಗಳ 12 ನಾಮನಿರ್ದೇಶಿತ ಸದಸ್ಯರು ಮತದಾನದಲ್ಲಿ ಭಾಗವಹಿಸಿರುವುದು ನಿಯಮಬಾಹಿರ ಎಂದು ಅವರು ವಾದಿಸಿದ್ದರು.

ಈ ಹಿನ್ನೆಲೆಯಲ್ಲಿ ಆ ಸದಸ್ಯರ ಮತಗಳನ್ನು ಪ್ರತ್ಯೇಕವಾಗಿ ಇರಿಸಿ ಮರು ಎಣಿಕೆ ನಡೆಸುವಂತೆ ಹೈಕೋರ್ಟ್ ಜಿಲ್ಲಾಧಿಕಾರಿಗೆ ಸೂಚನೆ ನೀಡಿತ್ತು. ಅದರಂತೆ 2025ರ ಫೆಬ್ರವರಿ 28ರಂದು ಚಿಕ್ಕಮಗಳೂರಿನಲ್ಲಿ ಮತಗಳ ಮರು ಎಣಿಕೆ ನಡೆದಿತ್ತು. ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದರು.

ಹೈಕೋರ್ಟ್‌ನ ಮರು ಎಣಿಕೆ ಆದೇಶವನ್ನು ಪ್ರಶ್ನಿಸಿ ಎಂಕೆ ಪ್ರಾಣೇಶ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರೂ, ನ್ಯಾಯಾಲಯವು ಅದನ್ನು ವಜಾಗೊಳಿಸಿದೆ. ಇದರೊಂದಿಗೆ ಪ್ರಕರಣದಲ್ಲಿ ಗಾಯತ್ರಿ ಶಾಂತೇಗೌಡ ಅವರಿಗೆ ಸ್ಪಷ್ಟ ಮುನ್ನಡೆ ಸಿಕ್ಕಂತಾಗಿದೆ.

ಇದನ್ನೂ ನೋಡಿ: ಉಸಿರಾಡುವ ಗಾಳಿಯೇ ವಿಷ! ಆಯುಷ್ಯ ಕಸಿಯುತ್ತಿರುವ ‘ಸೈಲೆಂಟ್ ಕಿಲ್ಲರ್’ | ಗುರುರಾಜ ದೇಸಾಯಿ Janashakthi Media

Donate Janashakthi Media

Leave a Reply

Your email address will not be published. Required fields are marked *