ನೀಟ್ ವಿವಾದಕ್ಕೆ ಹೊಸ ತಿರುವು: ವಾಂಗ್ಚುಕ್ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ

ನವದೆಹಲಿ: ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ಜುಲೈ 17ರಂದು ಜಂತರ್ ಮಂತರ್‌ನಲ್ಲಿ ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚುಕ್ ಮತ್ತು ಕಾಕ್ರೋಚ್ ಜನತಾ ಪಾರ್ಟಿ (CJP) ಸದಸ್ಯರನ್ನು ಭೇಟಿ ಮಾಡಿ, ನೀಟ್ ಪರೀಕ್ಷೆಯಲ್ಲಿ ನಡೆದಿರುವುದಾಗಿ ಹೇಳಲಾಗುತ್ತಿರುವ ಅಕ್ರಮಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು. ನೀಟ್

ಕಳೆದ 25 ದಿನಗಳಿಗಿಂತ ಹೆಚ್ಚು ಕಾಲದಿಂದ CJP ಪ್ರತಿಭಟನೆ ನಡೆಸುತ್ತಿದ್ದು, ಪ್ರಶ್ನೆಪತ್ರ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತಿದೆ.

ವಾಂಗ್ಚುಕ್ ಜೂನ್ 28ರಂದು ಈ ಹೋರಾಟಕ್ಕೆ ಸೇರ್ಪಡೆಯಾಗಿದ್ದು, ಆಗಿನಿಂದ ಅನಿರ್ದಿಷ್ಟಾವಧಿಯ ಉಪವಾಸ ಸತ್ಯಾಗ್ರಹದಲ್ಲಿದ್ದಾರೆ.

ಇದನ್ನೂ ಓದಿ: ಎರಡು ತಿಂಗಳಲ್ಲೇ ಬಿರುಕು ಬಿಟ್ಟ ಬಾಸ್ಕೆಟ್‌ಬಾಲ್‌ ಕ್ರೀಡಾಂಗಣ; ಕಳಪೆ ಕಾಮಗಾರಿಗೆ ಕ್ರಮಕ್ಕೆ ಆಗ್ರಹ

ಇದಕ್ಕೂ ಮೊದಲು ಕಾಂಗ್ರೆಸ್ ಪಕ್ಷವು ಅವರ ಆರೋಗ್ಯದ ಬಗ್ಗೆ ಚಿಂತೆಯನ್ನು ವ್ಯಕ್ತಪಡಿಸಿ, ಉಪವಾಸ ಮುಕ್ತಾಯಗೊಳಿಸುವಂತೆ ಮನವಿ ಮಾಡಿತ್ತು.

ಪವನ್ ಖೇರಾ ಅವರ ಭೇಟಿ, ಮಾಜಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಸಮಾಜವಾದಿ ಪಕ್ಷದ ನಾಯಕಿ ಡಿಂಪಲ್ ಯಾದವ್ ಅವರು ವಾಂಗ್ಚುಕ್ ಮತ್ತು ಪ್ರತಿಭಟನಾಕಾರರನ್ನು ಭೇಟಿಯಾದ ಒಂದು ದಿನದ ನಂತರ ನಡೆದಿದೆ.

ಡಿಂಪಲ್ ಯಾದವ್ ಅವರು ಕೇಂದ್ರ ಸರ್ಕಾರವು ವಾಂಗ್ಚುಕ್ ಅವರೊಂದಿಗೆ ಮಾತುಕತೆ ನಡೆಸಿ, CJPಯ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ನೀಟ್ ಪ್ರಶ್ನೆಪತ್ರ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಸಾವು ಸಂಭವಿಸಿದ್ದರೂ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಗುರುವಾರ, ಕಳೆದ ಒಂದು ತಿಂಗಳಿನಿಂದಲೇ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯಿಸುತ್ತಿದೆ ಎಂದು ತಿಳಿಸಿದ್ದಾರೆ.

“ಮೋದಿ ಸರ್ಕಾರದ ಜವಾಬ್ದಾರಿಯ ಕೊರತೆ, ವಿಶೇಷವಾಗಿ ಪರೀಕ್ಷಾ ವ್ಯವಸ್ಥೆಯ ಕುಸಿತದ ಬಗ್ಗೆ ವಾಂಗ್ಚುಕ್ ಅವರ ಆಕ್ರೋಶವನ್ನು ನಾವು ಹಂಚಿಕೊಳ್ಳುತ್ತೇವೆ,” ಎಂದು ಅವರು ತಿಳಿಸಿದ್ದಾರೆ.

“ಅವರ ಆರೋಗ್ಯದ ಹಿನ್ನಲೆಯಲ್ಲಿ ಉಪವಾಸವನ್ನು ನಿಲ್ಲಿಸಲು ನಾವು ಮನವಿ ಮಾಡುತ್ತೇವೆ. ಅವರ ಸಮಸ್ಯೆಗಳು ನಮ್ಮ ಸಮಸ್ಯೆಗಳೇ ಆಗಿವೆ. ನಾವು ಶಿಕ್ಷಣ ಸಚಿವರ ರಾಜೀನಾಮೆಗಾಗಿ ಹೋರಾಟ ಮುಂದುವರಿಸುತ್ತೇವೆ,” ಎಂದು ವೇಣುಗೋಪಾಲ್ X ನಲ್ಲಿ ಪ್ರಕಟಿಸಿದ ಸಂದೇಶದಲ್ಲಿ ಹೇಳಿದ್ದಾರೆ.

ಇದನ್ನೂ ನೋಡಿ: “ಭೂಗಳ್ಳರ ಸರ್ಕಾರ!” ಜನಾಕ್ರೋಶ ಸಮಾವೇಶದಲ್ಲಿ ಜಿ.ಎನ್. ನಾಗರಾಜರ ಆಕ್ರೋಶ Janashakthi Media

Donate Janashakthi Media

Leave a Reply

Your email address will not be published. Required fields are marked *