ನವದೆಹಲಿ: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ತಡೆದು ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರನ್ನು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಿಂದ ಗುರುಗ್ರಾಮದ ಮೆಡಾಂಟಾ ಆಸ್ಪತ್ರೆಗೆ ಸ್ಥಳಾಂತರಿಸಲು ದೆಹಲಿ ಹೈಕೋರ್ಟ್ ಮಂಗಳವಾರ ಅನುಮತಿ ನೀಡಿದೆ. ಈ ಸ್ಥಳಾಂತರಕ್ಕೆ ಕೇಂದ್ರ ಸರ್ಕಾರ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ. ಸೋನಂ
ವಾಂಗ್‌ಚುಕ್ ಅವರ ಪತ್ನಿ ಗೀತಾಂಜಲಿ ಆಂಗ್ಮೋ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರಿದ್ದ ವಿಭಾಗೀಯ ಪೀಠ, ವಾಂಗ್‌ಚುಕ್ ಅವರ ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ ಅವರನ್ನು ಮೆಡಾಂಟಾ ಆಸ್ಪತ್ರೆಗೆ ಸ್ಥಳಾಂತರಿಸಲು ಆದೇಶಿಸಿತು.
ವಿಚಾರಣೆ ವೇಳೆ ಕೇಂದ್ರದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಮೆಡಾಂಟಾ ಆಸ್ಪತ್ರೆಗೆ ಸ್ಥಳಾಂತರಿಸುವುದಕ್ಕೆ ಕೇಂದ್ರ ಸರ್ಕಾರಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಆದರೆ, ವೈದ್ಯರ ಸಲಹೆಗೆ ವಿರುದ್ಧವಾಗಿ ವಾಂಗ್‌ಚುಕ್ ಆಸ್ಪತ್ರೆಯಿಂದ ಬಿಡುಗಡೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯವನ್ನು ಕೋರಿದರು. ಸೋನಂ
ಇದನ್ನೂ ಓದಿ : ಮಹಿಳಾ ಮೀಸಲಾತಿ ತಕ್ಷಣ ಜಾರಿ ಮಾಡಿ: ಫ್ರೀಡಂಪಾರ್ಕ್‌ನಲ್ಲಿ ಮಹಿಳಾ ಸಂಘಟನೆಗಳ ಪ್ರತಿಭಟನೆ
ಸ್ಥಳಾಂತರದ ವೇಳೆ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿರುವ ಎಲ್ಲಾ ವೈದ್ಯಕೀಯ ದಾಖಲೆಗಳು, ಪರೀಕ್ಷಾ ವರದಿಗಳು ಹಾಗೂ ಚಿಕಿತ್ಸೆಗೆ ಸಂಬಂಧಿಸಿದ ದಾಖಲೆಗಳನ್ನು ಮೆಡಾಂಟಾ ಆಸ್ಪತ್ರೆಗೆ ಹಸ್ತಾಂತರಿಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ. ಇದರಿಂದ ಚಿಕಿತ್ಸೆಯ ನಿರಂತರತೆ ಕಾಪಾಡಲು ಸಾಧ್ಯವಾಗಲಿದೆ ಎಂದು ನ್ಯಾಯಪೀಠ ತಿಳಿಸಿತು.
ಸೋನಂ ವಾಂಗ್‌ಚುಕ್ ಅವರು ಜೂನ್ 28ರಿಂದ ದೆಹಲಿಯ ಜಂತರ್‌ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧ ಕಠಿಣ ಕ್ರಮ, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಉಪವಾಸದ ವೇಳೆ ಆರೋಗ್ಯ ತೀವ್ರವಾಗಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿದ್ದರು.
ಇದೀಗ ವಾಂಗ್‌ಚುಕ್ ಅವರ ಆರೋಗ್ಯದ ಕುರಿತು ಕುಟುಂಬ ಸದಸ್ಯರು ವ್ಯಕ್ತಪಡಿಸಿದ್ದ ಆತಂಕದ ಹಿನ್ನೆಲೆಯಲ್ಲಿ, ಉತ್ತಮ ಚಿಕಿತ್ಸೆಗಾಗಿ ಅವರನ್ನು ಖಾಸಗಿ ಮೆಡಾಂಟಾ ಆಸ್ಪತ್ರೆಗೆ ಸ್ಥಳಾಂತರಿಸಲು ದೆಹಲಿ ಹೈಕೋರ್ಟ್ ಅನುಮತಿ ನೀಡಿರುವುದು ಮಹತ್ವದ ಬೆಳವಣಿಗೆಯಾಗಿದೆ. ಸೋನಂ
ಇದನ್ನೂ ನೋಡಿ : LIC | ವಿಮಾ ಪಿಂಚಣಿದಾರರ ಸಂಘದ ಸರ್ವ ಸದಸ್ಯರ ಸಭೆ |AIIPA |ICPA
