ನ್ಯಾಯಬೆಲೆ ಅಂಗಡಿಗಳ ಕಾರ್ಯಾವಧಿ ವಿಸ್ತರಣೆ: ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಪಡಿತರ ವಿತರಣೆ

ಬೆಂಗಳೂರು: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಮತ್ತು ಅನ್ನಭಾಗ್ಯ ಯೋಜನೆಯಡಿ ಜುಲೈ ತಿಂಗಳ ಆಹಾರಧಾನ್ಯ ವಿತರಣೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳು (ರೇಷನ್ ಅಂಗಡಿಗಳು) ಇನ್ನು ಮುಂದೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕಾರ್ಯನಿರ್ವಹಿಸಲಿವೆ.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹೊರಡಿಸಿರುವ ಈ ಆದೇಶದ ಉದ್ದೇಶ, ಹೆಚ್ಚಿನ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಆಹಾರಧಾನ್ಯ ವಿತರಣೆಯನ್ನು ವೇಗಗೊಳಿಸುವುದಾಗಿದೆ. ಸಾಮಾನ್ಯ ಕೆಲಸದ ವೇಳೆಯಲ್ಲಿ ರೇಷನ್ ಪಡೆಯಲು ಸಾಧ್ಯವಾಗದ ಕೂಲಿ ಕಾರ್ಮಿಕರು, ಖಾಸಗಿ ಉದ್ಯೋಗಿಗಳು ಹಾಗೂ ಇತರ ಫಲಾನುಭವಿಗಳಿಗೆ ವಿಸ್ತರಿತ ಸಮಯದಿಂದ ಅನುಕೂಲವಾಗಲಿದೆ.

ಜುಲೈ ತಿಂಗಳ ವಿತರಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ರಾಜ್ಯದ ನ್ಯಾಯಬೆಲೆ ಅಂಗಡಿಗಳು ಪ್ರತಿದಿನ ಈ ವಿಸ್ತರಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಿಸಲಿವೆ. ಫಲಾನುಭವಿಗಳು ತಮ್ಮ ರೇಷನ್ ಕಾರ್ಡ್‌ ಮತ್ತು ಅಗತ್ಯ ದಾಖಲೆಗಳೊಂದಿಗೆ ಯಾವುದೇ ಅನುಕೂಲಕರ ಸಮಯದಲ್ಲಿ ತೆರಳಿ ಆಹಾರಧಾನ್ಯ ಪಡೆಯಬಹುದು ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ: 30 ಸಾವಿರ ಜನರಿಗೆ ಕೇವಲ ಒಂದು ಶೌಚಾಲಯ! ಬಿ.ಪ್ಯಾಕ್ ಅಧ್ಯಯನದಲ್ಲಿ ಆತಂಕಕಾರಿ

ರಾಜ್ಯದಲ್ಲಿ ಲಕ್ಷಾಂತರ ಕುಟುಂಬಗಳು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಹಾಗೂ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಸೇರಿದಂತೆ ಅಗತ್ಯ ಆಹಾರಧಾನ್ಯಗಳನ್ನು ಪಡೆಯುತ್ತಿವೆ. ತಿಂಗಳ ಕೊನೆಯ ದಿನಗಳಲ್ಲಿ ಫಲಾನುಭವಿಗಳ ದಟ್ಟಣೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಈ ಬಾರಿ ಕಾರ್ಯಾವಧಿಯನ್ನು ವಿಸ್ತರಿಸುವ ಮೂಲಕ ವಿತರಣೆಯನ್ನು ಸುಗಮಗೊಳಿಸಲು ಸರ್ಕಾರ ಮುಂದಾಗಿದೆ.

ಆಹಾರಧಾನ್ಯ ವಿತರಣೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಲು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದ್ದು, ನ್ಯಾಯಬೆಲೆ ಅಂಗಡಿಗಳಲ್ಲಿ ಸಾಕಷ್ಟು ಪ್ರಮಾಣದ ಆಹಾರಧಾನ್ಯ ಲಭ್ಯವಿರುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ನೋಡಿ : ನೀಟ್‌ ಹಗರಣ | ವಿದ್ಯಾರ್ಥಿಗಳೇ ಎದ್ದೇಳಿ! ಹೋರಾಟಕ್ಕೆ ಜೊತೆಯಾಗಿ — ನಟ ಕಿಶೋರ್‌ ಮನವಿ Janashakthi Media

Donate Janashakthi Media

Leave a Reply

Your email address will not be published. Required fields are marked *