ನವದೆಹಲಿ: ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರು ತಮ್ಮ ನಿರಾಹಾರ ಸತ್ಯಾಗ್ರಹವನ್ನು ಮುಕ್ತಾಯಗೊಳಿಸಿದ್ದಾರೆ ಎಂದು ಲೇಹ್ ಏಪೆಕ್ಸ್ ಬಾಡಿ ಸಹ ಸಂಯೋಜಕ ಚೆರಿಂಗ್ ದೋರ್ಜೈ ಲಕ್ರುಕ್ ಜುಲೈ 23ರ ತಡರಾತ್ರಿ ತಿಳಿಸಿದ್ದಾರೆ. ವಾಂಗ್ಚುಕ್
ಎರಡು ಕೇಂದ್ರ ಸಚಿವರ ಸಮ್ಮುಖದಲ್ಲಿ ಕೆಲ ಶರತ್ತುಗಳ ಮೇರೆಗೆ ವಾಂಗ್ಚುಕ್ ಉಪವಾಸ ಮುರಿದಿದ್ದಾರೆ. ಹಿಂಸಾಚಾರದಲ್ಲಿ ತೊಡಗಿಸಿಕೊಳ್ಳದ ವಿದ್ಯಾರ್ಥಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲಾಗುವುದು ಎಂದು ಸರ್ಕಾರ ಲಿಖಿತ ಭರವಸೆ ನೀಡಿದೆ ಎಂದು ಅವರು ಹೇಳಿದರು. ಅಲ್ಲದೆ, NEET ಪರೀಕ್ಷೆಗೆ ಸಂಬಂಧಿಸಿದಂತೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಪರಿಹಾರ ನೀಡುವ ವಿಷಯವನ್ನೂ ಪರಿಗಣಿಸಲಾಗುವುದು ಎಂಬುದಾಗಿ ಸರ್ಕಾರ ಭರವಸೆ ನೀಡಿದೆ ಎಂದು ತಿಳಿಸಿದರು.
ಇದೇ ವೇಳೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದ ಮೂಲಕ NEET ಪ್ರಶ್ನೆಪತ್ರಿಕೆ ಸೋರಿಕೆ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. “ಪ್ರಶ್ನೆಪತ್ರಿಕೆ ಸೋರಿಕೆ ಒಂದು ಸಾಮಾನ್ಯ ತಪ್ಪಲ್ಲ; ಇದು ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳಿಗೆ ತೀವ್ರ ಅನ್ಯಾಯ ಉಂಟುಮಾಡುತ್ತದೆ,” ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ₹25 ಕೋಟಿ ಕಪ್ಪುಹಣ, 17 ಚೀಲಗಳು, ಸಿಸಿಟಿವಿ ಆಫ್! ಕೇರಳ ಬಿಜೆಪಿಯ ವಿರುದ್ಧ ಮಾಜಿ ಸದಸ್ಯನ ಸ್ಫೋಟಕ ಆರೋಪ
ಕಳೆದ ಎರಡು ತಿಂಗಳುಗಳಿಂದ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಮೋದಿ ತಿಳಿಸಿದ್ದಾರೆ.
ಇದಕ್ಕೂ ಮುನ್ನ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ವೇಗವಾಗಿ ಶಿಕ್ಷೆ ವಿಧಿಸಲು ಫಾಸ್ಟ್-ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಮೋದಿ ಘೋಷಿಸಿದ್ದರು. ಇದೇ ಸಂದರ್ಭದಲ್ಲಿ ದೆಹಲಿ ಹೈಕೋರ್ಟ್, ಸಾರ್ವಜನಿಕ ಪರೀಕ್ಷೆಗಳಲ್ಲಿನ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ವಿಚಾರಣೆ ಮಾಡಲು ನ್ಯಾಯಮೂರ್ತಿ ಅನು ಗ್ರೋವರ್ ಬಾಲಿಗಾ ಅವರನ್ನು ವಿಶೇಷ ನ್ಯಾಯಾಧೀಶರಾಗಿ ನೇಮಕ ಮಾಡಿದೆ.
ಇನ್ನೊಂದೆಡೆ, ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿನಿಧಿ ಮಂಡಳಿ ಶುಕ್ರವಾರ (ಜುಲೈ 24, 2026) ಕೇಂದ್ರ ಸಚಿವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಮಧ್ಯಾಹ್ನ 12.30ಕ್ಕೆ ಸಭೆ ನಡೆಯಲಿದ್ದು, ಸ್ಥಳವನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ. ಈ ಬಗ್ಗೆ CJP ಇನ್ನೂ ಪ್ರತಿಕ್ರಿಯಿಸಿಲ್ಲ.
ಇದನ್ನೂ ನೋಡಿ: ಯುವಜನತೆ ಪ್ರತಿಭಟನೆ: ಜೆನ್ ಜಿಫಿಕೇಶನ್ Janashakthi Media
