ನವದೆಹಲಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳು, ಜನಪರ ಚಳುವಳಿಗಳು ಹಾಗೂ ಸಿಜೆಪಿ ಪಕ್ಷ ತಿಂಗಳಿಂದ ಹೋರಾಟ ನಡೆಸುತ್ತಿದ್ದೂ,ತೀವ್ರ ಒತ್ತಡ ತಂದುಕೊಡುತ್ತಿತ್ತು. “ರಾಜೀನಾಮೆ ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಸಾಧ್ಯವಿಲ್ಲ” ಎಂದು ಪಕ್ಷದ ವಕ್ತಾರರು ಸ್ಪಷ್ಟಪಡಿಸಿದ್ದರು.
ಜೊತೆಗೆ, ನೀಟ್ ಹಗರಣದ ಪರಿಣಾಮವಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು ಹಾಗೂ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿದ್ದರು.
ಇದನ್ನೂ ಓದಿ: ಜಂತರ್ ಮಂತರ್ನಲ್ಲಿ CJP ಪ್ರತಿಭಟನೆ 36ನೇ ದಿನಕ್ಕೂ ಮುಂದುವರಿಕೆ
ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಕ್ರೋಚ್ ಜನತಾ ಪಾರ್ಟಿಯೂ ಕೇಂದ್ರ ಸರ್ಕಾರದ ಮುಂದೆ ಮೂರು ಪ್ರಮುಖ ಬೇಡಿಕೆಗಳನ್ನು ಮಂಡಿಸಿತ್ತು.

ಪ್ರಮುಖ ಬೇಡಿಕೆಗಳು:
1. ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ಬಿಡುಗಡೆ ಮಾಡಿ, ಅವರ ಸ್ವತಂತ್ರ ಚಟುವಟಿಕೆಗಳಿಗೆ ಅವಕಾಶ ನೀಡಬೇಕು
2. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು
3. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು
ಈ ಬೆಳವಣಿಗೆಗಳು ದೇಶದ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ನೀಟ್ ಹಗರಣದ ಪರಿಣಾಮಗಳು ಇನ್ನಷ್ಟು ಗಂಭೀರವಾಗುತ್ತಿವೆ ಎಂಬುದನ್ನು ತೋರಿಸುತ್ತಿವೆ.
ಇದನ್ನೂ ನೋಡಿ: ನೀಟ್ ಹಗರಣಕ್ಕೆ ದೇಶಾದ್ಯಂತ ಆಕ್ರೋಶ! ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ Janashakthi Media
