ಪ್ರಧಾನ್ ರಾಜೀನಾಮೆ ಬಳಿಕ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ನೇಮಕ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

ರಾಷ್ಟ್ರಪತಿ ಭವನದಿಂದ ಹೊರಡಿಸಲಾದ ಪ್ರಕಟಣೆಯ ಪ್ರಕಾರ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಲಹೆ ಮೇರೆಗೆ ರಾಷ್ಟ್ರಪತಿಗಳು ಪ್ರಧಾನ್ ಅವರ ರಾಜೀನಾಮೆಯನ್ನು ತಕ್ಷಣದಿಂದಲೇ ಅಂಗೀಕರಿಸಿದ್ದಾರೆ. ಜೊತೆಗೆ, ಕ್ಯಾಬಿನೆಟ್ ಸಚಿವರಾಗಿರುವ ಪ್ರಹ್ಲಾದ್ ಜೋಶಿ ಅವರಿಗೆ ಈಗಿರುವ ಗ್ರಾಹಕ ವ್ಯವಹಾರಗಳ ಸಚಿವಾಲಯದೊಂದಿಗೆ ಶಿಕ್ಷಣ ಸಚಿವಾಲಯದ ಹೊಣೆಗಾರಿಕೆಯನ್ನು ಕೂಡ ನೀಡಲಾಗಿದೆ.

ಇದನ್ನೂ ಓದಿ: ಅಸ್ಸಾಂನಲ್ಲಿ ಪ್ರವಾಹ ಸ್ಥಿತಿ ಗಂಭೀರ: 61 ಸಾವು, 7 ಲಕ್ಷಕ್ಕೂ ಹೆಚ್ಚು ಜನರಿಗೆ ಪರಿಣಾಮ

ಇದೇ ವೇಳೆ, ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆ ದೇಶದಾದ್ಯಂತ ಕಾಕ್ರೋಚ್ ಜನತಾ ಪಕ್ಷ ನೇತೃತ್ವದಲ್ಲಿ ವಿದ್ಯಾರ್ಥಿ ಪ್ರತಿಭಟನೆಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಪ್ರಧಾನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಧರ್ಮೇಂದ್ರ ಪ್ರಧಾನ್, ಇದು ವೈಯಕ್ತಿಕ ಗೌರವದ ಪ್ರಶ್ನೆಯಲ್ಲ ಎಂದು ಹೇಳಿ, ಕಳೆದ ಹತ್ತು ದಿನಗಳಲ್ಲಿ ನಡೆದ ಬೆಳವಣಿಗೆಗಳು ತಮ್ಮನ್ನು ಅತೀವ ಕಳವಳಗೊಳಿಸಿವೆ ಎಂದು ತಿಳಿಸಿದ್ದಾರೆ.

ಇದನ್ನೂ ನೋಡಿ: ನೀಟ್ ಹೋರಾಟಕ್ಕೆ ಕಲೆಯ ಧ್ವನಿ! ಸೋನಂ ವಾಂಗ್‌ಚುಕ್ ಬೆಂಬಲಕ್ಕೆ ಚಿತ್ರ ಬಿಡಿಸಿದ ಬಿ.ಎಸ್. ದೇಸಾಯಿ Janashakthi Media

Donate Janashakthi Media

Leave a Reply

Your email address will not be published. Required fields are marked *