ನವದೆಹಲಿ: ಕೇವಲ ಪ್ರತಿಭಟನೆ ನಡೆಸಿದ ಕಾರಣಕ್ಕೆ ಲಾಠಿಚಾರ್ಜ್ ಮಾಡುವುದು ಸಮರ್ಥನೀಯವಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.
‘ಸಂಸತ್ ಚಲೋ’ ಪ್ರತಿಭಟನೆ ವೇಳೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಬಲಪ್ರಯೋಗ ನಡೆಸಿದರೆಂಬ ಆರೋಪಗಳ ಹಿನ್ನೆಲೆಯಲ್ಲಿ ಈ ವಿಚಾರಣೆ ನಡೆಯಿತು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಪ್ರತಿಭಟನೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಬಲ ಬಳಸಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಇದನ್ನೂ ಓದಿ: ಪೆಲೆಟ್ ಗನ್, ವಿದ್ಯುತ್ ಶಾಕ್ ಆಯುಧ ಬಳಕೆ: 57 ಸಂಘಟನೆಗಳ ಖಂಡನೆ; ನಿಷೇಧಕ್ಕೆ ಜಂಟಿ ಹೇಳಿಕೆ ಕರೆ
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನ್ ಅವರನ್ನೊಳಗೊಂಡ ಪೀಠ, ಶಾಂತಿಯುತ ಮತ್ತು ಕಾನೂನುಬದ್ಧ ಪ್ರತಿಭಟನೆ ನಡೆಸುವುದು ಸಂವಿಧಾನ ನೀಡಿದ ಹಕ್ಕು ಎಂದು ಸ್ಪಷ್ಟಪಡಿಸಿದೆ.
“ಕೇವಲ ಪ್ರತಿಭಟನೆ ನಡೆಸಲಾಗಿದೆ ಎಂಬ ಕಾರಣಕ್ಕೆ ಲಾಠಿಚಾರ್ಜ್ ನಡೆಸುವುದು ನ್ಯಾಯಸಮ್ಮತವಲ್ಲ,” ಎಂದು ಪೀಠ ಹೇಳಿದೆ.
ಪೊಲೀಸರು ಕೈಗೊಂಡಿರುವ ಬಲವಂತದ ಕ್ರಮಗಳ ಕುರಿತು ಸ್ವತಂತ್ರವಾಗಿ ಪರಿಶೀಲನೆ ನಡೆಯಬೇಕು ಎಂದು ಕೋರ್ಟ್ ಸೂಚಿಸಿದ್ದು, ದೇಶಾದ್ಯಂತ ಪ್ರತಿಭಟನೆಗಳನ್ನು ನಿರ್ವಹಿಸಲು ಪೊಲೀಸರಿಗೆ ಏಕರೂಪದ ಮಾರ್ಗಸೂಚಿಗಳು ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ.
ಇದನ್ನೂ ನೋಡಿ: ನೀಟ್ ಹೋರಾಟಕ್ಕೆ ಕಲೆಯ ಧ್ವನಿ! ಸೋನಂ ವಾಂಗ್ಚುಕ್ ಬೆಂಬಲಕ್ಕೆ ಚಿತ್ರ ಬಿಡಿಸಿದ ಬಿ.ಎಸ್. ದೇಸಾಯಿ Janashakthi Media
