ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ–4ರ ಪೀಣ್ಯ ಮೇಲ್ಸೇತುವೆಯಲ್ಲಿ ಡಾಂಬರೀಕರಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 5ರವರೆಗೆ ರಾತ್ರಿ ವೇಳೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರದ ದೃಷ್ಟಿಯಿಂದ ಪ್ರತಿದಿನ ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ಬೆಂಗಳೂರು ಕಡೆಗೆ ಬರುವ ಎಲ್ಲಾ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಇದನ್ನೂ ಓದಿ: NEET ವಿವಾದಕ್ಕೆ ಸಂಸತ್ತಿನಲ್ಲಿ ಗದ್ದಲ: ರಾಜ್ಯಸಭೆ ಎರಡು ಬಾರಿ ಸ್ಥಗಿತ
ಇನ್ನು ಜುಲೈ 25ರಂದು ಹಾಗೂ 26ರಂದು ರಾತ್ರಿ 12ರಿಂದ ಬೆಳಿಗ್ಗೆ 5ರವರೆಗೆ ಈ ನಿರ್ಬಂಧ ಜಾರಿಯಲ್ಲಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪರ್ಯಾಯ ಮಾರ್ಗಗಳು:
ತುಮಕೂರು–ನೆಲಮಂಗಲ ದಿಕ್ಕಿನಿಂದ ಬೆಂಗಳೂರು ಕಡೆಗೆ ಬರುವ ವಾಹನಗಳು ಕೆನ್ನಮೆಟಲ್ ಸಮೀಪದ ಮೇಲ್ಸೇತುವೆ ಕೆಳಭಾಗದ ಎನ್‌ಎಚ್–4 ಮತ್ತು ಸರ್ವೀಸ್ ರಸ್ತೆಯ ಮೂಲಕ 8ನೇ ಮೈಲಿ, ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಎಸ್‌ಆರ್‌ಎಸ್ ಜಂಕ್ಷನ್ ಹಾಗೂ ಗೊರಗುಂಟೆಪಾಳ್ಯ ಮಾರ್ಗವಾಗಿ ಸಂಚರಿಸಬಹುದು ಎಂದು ಪೀಣ್ಯ ಸಂಚಾರಿ ಠಾಣೆ ಪೊಲೀಸರು ತಿಳಿಸಿದ್ದಾರೆ.
ಸಾರ್ವಜನಿಕರು ಈ ಪರ್ಯಾಯ ಮಾರ್ಗಗಳನ್ನು ಬಳಸಿಕೊಂಡು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಇದನ್ನೂ ನೋಡಿ: ನೀಟ್ ಹಗರಣ | ವಿದ್ಯಾರ್ಥಿಗಳೇ ಎದ್ದೇಳಿ! ಹೋರಾಟಕ್ಕೆ ಜೊತೆಯಾಗಿ — ನಟ ಕಿಶೋರ್ ಮನವಿ Janashakthi Media
