ರಾಜ್ಯದ ಏಳು ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ: ಆಗಸ್ಟ್‌ 4ಕ್ಕೆ IMD ಮುನ್ಸೂಚನೆ

ಕರಾವಳಿ – ಮಲೆನಾಡಿನಲ್ಲಿ ಮಳೆ ಅಬ್ಬರ: ಯಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ಕೊಡಗು, ಶಿವಮೊಗ್ಗ ಸೇರಿದಂತೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಆಗಸ್ಟ್‌ 4ರಂದು ಭಾರಿಯಿಂದ ಅತಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ರಾಜ್ಯ

ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಪ್ರದೇಶಗಳಲ್ಲಿ 64.5 ಮಿ.ಮೀ. ರಿಂದ 204.4 ಮಿ.ಮೀ. ವರೆಗೆ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ರಾಜ್ಯ

ಹಾಸನ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೂಡ ಆಗಸ್ಟ್‌ 4ರಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಲ್ಲಿ 64.5 ಮಿ.ಮೀ. ರಿಂದ 115.4 ಮಿ.ಮೀ. ವರೆಗೆ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಇ20 ಪೆಟ್ರೋಲ್ ಬಗ್ಗೆ ಕಾಂಗ್ರೆಸ್ ಪ್ರಶ್ನೆ: ವಾಹನಗಳ ಮೇಲೆ ಪರಿಣಾಮದ ಬಗ್ಗೆ ಸ್ಪಷ್ಟತೆ ಎಲ್ಲಿದೆ?

ಆಗಸ್ಟ್‌ 5ರಿಂದ 7ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗಬಹುದು. ಆಗಸ್ಟ್‌ 8ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆಯ ಸಾಧ್ಯತೆ ಇದ್ದು, ಯಲ್ಲೋ ಅಲರ್ಟ್ ನೀಡಲಾಗಿದೆ.

ಕರಾವಳಿ ಭಾಗಗಳಲ್ಲಿ, ವಿಶೇಷವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ 30–40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಮಳೆ ಇನ್ನಷ್ಟು ತೀವ್ರಗೊಳ್ಳಬಹುದು. ಹಾಸನ ಜಿಲ್ಲೆಯಲ್ಲೂ ಇದೇ ರೀತಿಯ ಗಾಳಿಯ ಮುನ್ಸೂಚನೆ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಹ ಹಗುರ ಮಳೆಯ ನಿರೀಕ್ಷೆ ಇದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಹಗುರ ಮಳೆಯಾಗಬಹುದು. ಜೊತೆಗೆ 30–40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.

ಇದನ್ನೂ ನೋಡಿ: “ಮುತ್ತು ಬಂದಿದೆ ಕೇರಿಗೆ” — ಕನಕದಾಸರ ಕುರಿತ ನೃತ್ಯ ರೂಪಕ Janashakthi Media

Donate Janashakthi Media

Leave a Reply

Your email address will not be published. Required fields are marked *