ಕೆಪಿಎಸ್‌ಸಿ ಯನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಿ: ರಾಜ್ಯವ್ಯಾಪಿ ಚಳುವಳಿ – AIDYO

ಬೆಂಗಳೂರು: ಲಕ್ಷಾಂತರ ಯುವಜನರ ಕನಸುಗಳಿಗೆ ಬೆಳಕಾಗಬೇಕಿದ್ದ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಇಂದು ಒಂದರ ಹಿಂದೆ ಒಂದರಂತೆ ಹೊರಬರುತ್ತಿರುವ ಅಕ್ರಮಗಳಿಂದ ಪ್ರಶ್ನಾರ್ಹವಾಗಿದೆ ಎಂದು AIDYO ಜಿಲ್ಲಾ ಕಾರ್ಯದರ್ಶಿ ಜಯಣ್ಣ. ಕೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಭ್ರಷ್ಟಾಚಾರ

1998–99ರ ನೇಮಕಾತಿ ವಿವಾದಗಳಿಂದ ಆರಂಭವಾಗಿ, 2011ರ ಪರೀಕ್ಷಾ ಅಕ್ರಮಗಳು, 2014ರ ಎಫ್‌ಡಿಎ ಪ್ರಶ್ನೆಪತ್ರಿಕೆ ಸೋರಿಕೆ, 2019ರ ಅಂಕಗಳ ತಿರುಚುವಿಕೆಯ ಆರೋಪಗಳು, ಇತ್ತೀಚಿನ ವರ್ಷಗಳಲ್ಲಿ ಪಿಡಿಓ ನೇಮಕಾತಿಯಲ್ಲಿನ ಅಕ್ರಮಗಳು, ಕೆಎಎಸ್ ಪರೀಕ್ಷೆಯಲ್ಲಿ ಪ್ರಿಲಿಮಿನರಿ ಹಾಗೂ ಮುಖ್ಯ ಪರೀಕ್ಷೆಗಳಲ್ಲಿ ನಡೆದ ಅಕ್ರಮಗಳು, ಕೆಪಿಎಸ್‌ಸಿ ಅಧ್ಯಕ್ಷರ ಸ್ವಜನ ಪಕ್ಷಪಾತ, ಪಶು ವೈದ್ಯಾಧಿಕಾರಿಗಳ ನೇಮಕದಲ್ಲಿ ಅವ್ಯವಹಾರ ಸೇರಿದಂತೆ ಪ್ರತಿಯೊಂದು ಪರೀಕ್ಷೆಗಳಲ್ಲಿ ನೇಮಕಾತಿ ಪ್ರಕ್ರಿಯೆಯ ಪಾರದರ್ಶಕತೆಯ ಕೊರತೆ ಮತ್ತು ಭ್ರಷ್ಟಾಚಾರದ ಆರೋಪಗಳು—ಇವೆಲ್ಲವೂ ಉದ್ಯೋಗಾಕಾಂಕ್ಷಿಗಳ ನಂಬಿಕೆಯನ್ನು ಅಲುಗಾಡಿಸಿವೆ.

ಪ್ರತಿ ಹಗರಣವೂ ಸಾವಿರಾರು ಯುವಜನರ ಶ್ರಮ, ಸಮಯ ಮತ್ತು ಭವಿಷ್ಯದ ಮೇಲೆ ಹೊಡೆತ ನೀಡಿದೆ. ಅರ್ಹತೆಗಿಂತ ಹಣ, ಪ್ರಭಾವ ಮತ್ತು ಲಂಚ ನೀಡಿದವರಿಗೆ ಉದ್ಯೋಗಾವಕಾಶ ಸಿಗುತ್ತಿದೆ ಎಂಬ ಭಾವನೆ ಸಮಾಜದಲ್ಲಿ ಬೇರೂರಿದೆ.

ಇದನ್ನೂ ಓದಿ: ಬ್ರಿಜ್ ಭೂಷಣ್ ಸಿಂಗ್ ಖುಲಾಸೆ-ಅಸಮಾನ ಸಮರದ ಪರಾಕಾಷ್ಠೆ: ಬೃಂದಾ ಕಾರಟ್

ಕೆಪಿಎಸ್‌ಸಿಯಲ್ಲಿನ ಭ್ರಷ್ಟಾಚಾರ ಮತ್ತು ಅಕ್ರಮಗಳು ಕೇವಲ ಕೆಲವೇ ಅಭ್ಯರ್ಥಿಗಳ ಸಮಸ್ಯೆಯಲ್ಲ; ಅದು ರಾಜ್ಯದ ಲಕ್ಷಾಂತರ ಯುವಜನರ ಭವಿಷ್ಯದ ಪ್ರಶ್ನೆಯಾಗಿದೆ. ಈ ಪರಿಸ್ಥಿತಿಗೆ ತೆರೆ ಬೀಳಬೇಕು.

ಭ್ರಷ್ಟಾಚಾರದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು.

ಪಿ.ಸಿ. ಹೋಟಾ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತಂದು, ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕ, ತಂತ್ರಜ್ಞಾನ ಆಧಾರಿತ ಹಾಗೂ ಜನರ ವಿಶ್ವಾಸ ಗಳಿಸುವ ರೀತಿಯಲ್ಲಿ ರೂಪಿಸಬೇಕು.

ಆದ್ದರಿಂದ ಕೆಪಿಎಸ್‌ಸಿಯನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಲು ಹಾಗೂ ಅರ್ಹರಿಗೆ ನ್ಯಾಯ ಒದಗಿಸಲು ತಾವು ತಕ್ಷಣವೇ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗಸ್ಟ್‌ 6ರಂದು AIDYO ರಾಜ್ಯದಾದ್ಯಂತ ಹೋರಾಟವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಹೋರಾಟದ ಭಾಗವಾಗಿ ಬೆಂಗಳೂರು ಜಿಲ್ಲಾ ಸಮಿತಿಯಿಂದ ನಿಯೋಗದೊಂದಿಗೆ ಡಿಸಿ ಕಚೇರಿ ಕಾರ್ಯದರ್ಶಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ನಿಯೋಗದಲ್ಲಿ AIDYO ನ ರಾಜ್ಯ ಉಪಾಧ್ಯಕ್ಷರಾದ ಕೃಷ್ಣ, ಜಿಲ್ಲಾ ಅಧ್ಯಕ್ಷರಾದ ವಿನಯ್ ಸಾರಥಿ , ಜಿಲ್ಲಾ ಕಾರ್ಯದರ್ಶಿ ಜಯಣ್ಣ, ಕಾರ್ಯದರ್ಶಿ ಮಂಡಳಿ ಸದಸ್ಯ ಕಲಾವತಿ, ಸದಸ್ಯರಾದ ಸೋಮಶೇಖರ್, ಶಶಿ, ಪ್ರತೀಕ, ಸಿದ್ದೇಶ್ ಭಾಗವಹಿಸಿದ್ದರು.

ಇದನ್ನೂ ನೋಡಿ: ನಾಲ್ಕು ದಶಕಗಳ ಕೋಮುವಾದ: ಕಾನೂನು ಸುವ್ಯವಸ್ಥೆಯ ವೈಫಲ್ಯ ಮತ್ತು ಮುಂದಿನ ದಾರಿ | ನವೀನ್ ಸೂರಿಂಜೆ, ಪತ್ರಕರ್ತರು

Donate Janashakthi Media

Leave a Reply

Your email address will not be published. Required fields are marked *