ರಾಜಸ್ಥಾನ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಒಡಿಶಾದಲ್ಲಿ ಭಾರಿ ಮಳೆ: ಆರೆಂಜ್ ಅಲರ್ಟ್

ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಚುರುಕುಗೊಂಡಿದೆ. ರಾಜಸ್ಥಾನ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮತ್ತು ಒಡಿಶಾದಲ್ಲಿ ಭಾರಿ ಮಳೆಯಿಂದ ಅತಿಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.ಮಳೆ

ಪೂರ್ವ ರಾಜಸ್ಥಾನ, ಗಂಗಾ ತೀರದ ಪಶ್ಚಿಮ ಬಂಗಾಳ, ಮಧ್ಯ ಮಹಾರಾಷ್ಟ್ರ ಹಾಗೂ ಒಡಿಶಾದ ಕೆಲವು ಭಾಗಗಳಲ್ಲಿ 115.6ರಿಂದ 204.4 ಮಿಲಿಮೀಟರ್‌ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ವಾಯುಭಾರ ಕುಸಿತ ಮುಂದಿನ 48 ಗಂಟೆಗಳಲ್ಲಿ ಮತ್ತಷ್ಟು ಬಲಗೊಳ್ಳುವ ಸಾಧ್ಯತೆಯಿದ್ದು, ಇದರ ಪರಿಣಾಮ ಹಲವು ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ನಿರೀಕ್ಷೆಯಿದೆ.

ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಛತ್ತೀಸ್‌ಗಢ, ಗುಜರಾತ್‌, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ, ಲಡಾಖ್‌, ಕೊಂಕಣ ಮತ್ತು ಗೋವಾ, ನಾಗಾಲ್ಯಾಂಡ್‌, ಮಣಿಪುರ, ಮಿಜೋರಾಂ, ತ್ರಿಪುರ, ಪಂಜಾಬ್‌, ಉತ್ತರಾಖಂಡ ಹಾಗೂ ಪಶ್ಚಿಮ ಮಧ್ಯಪ್ರದೇಶದಲ್ಲೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಮಳೆ

ಇದನ್ನೂ ಓದಿ : ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಚರ್ಚೆಗೆ ಅಮಿತ್‌ ಶಾ ಷರತ್ತು: ರಾಹುಲ್‌ ಗಾಂಧಿ ವಿರೋಧ

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಭಾರಿ ಮಳೆಯೊಂದಿಗೆ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಕರ್ನಾಟಕ ಸೇರಿದಂತೆ ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಭಾರಿ ಮಳೆಯ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಹಾಗೂ ಕೆಲವೆಡೆ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಯಿದ್ದು, ಜನರು ಸ್ಥಳೀಯ ಆಡಳಿತದ ಮುನ್ನೆಚ್ಚರಿಕೆ ಸೂಚನೆಗಳನ್ನು ಪಾಲಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

ರೈತರು ಕೊಯ್ಲು ಮಾಡಿದ ಬೆಳೆಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವುದು, ಜಮೀನುಗಳಲ್ಲಿ ನೀರು ನಿಲ್ಲದಂತೆ ಒಳಚರಂಡಿ ವ್ಯವಸ್ಥೆ ಮಾಡಿಕೊಳ್ಳುವುದು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳದಲ್ಲಿಡುವಂತೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲೂ ದೇಶದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ಇದನ್ನೂ ನೋಡಿ : ರೈತ–ಕಾರ್ಮಿಕರ ಜೈಲ್‌ ಭರೋ: ಕೇಂದ್ರದ ನೀತಿಗಳ ವಿರುದ್ಧ ದೇಶಾದ್ಯಂತ ಆಕ್ರೋಶ Janashakthi Media

Donate Janashakthi Media

Leave a Reply

Your email address will not be published. Required fields are marked *