ರಸ್ತೆ ಬದಿಯ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಿ: ಕೃಷ್ಣ ಬೈರೇಗೌಡರಿಗೆ ಸಿಪಿಐಎಂ ಆಗ್ರಹ

ಬೆಂಗಳೂರು: ನಗರದ ವಿವಿಧ ರಸ್ತೆ ಬದಿಗಳಲ್ಲಿ ದಿನಗಟ್ಟಲೆ ಬಿದ್ದಿರುವ ಕಸವನ್ನು ಕೂಡಲೇ ವಿಲೇವಾರಿ ಮಾಡಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)–ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ.ರಸ್ತೆ ಬದಿ

ಸಿಪಿಐಎಂ ರಾಜ್ಯ ಕಾರ್ಯದರ್ಶಿ ಡಾ. ಕೆ. ಪ್ರಕಾಶ್ ಅವರ ಹೆಸರಿನಲ್ಲಿ ಈ ಮನವಿ ಹೊರಡಿಸಲಾಗಿದೆ. ಈ ಕುರಿತು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡರಿಗೆ ಪ್ರಶ್ನಿಸಿರುವ ಸಿಪಿಐಎಂ, ರಸ್ತೆ ಬದಿಯಲ್ಲಿರುವ ಕಸವನ್ನು ತೆರವುಗೊಳಿಸುವ ಜವಾಬ್ದಾರಿ ಯಾರದ್ದು ಎಂದು ಪ್ರಶ್ನಿಸಿದೆ.

ನಗರದ ಅನೇಕ ರಸ್ತೆ ಬದಿಗಳಲ್ಲಿ ಕಸ ರಾಶಿ ಬಿದ್ದಿದ್ದರೂ ಅದನ್ನು ತೆರವುಗೊಳಿಸದೆ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಇದರಿಂದ ರೋಗರುಜಿನಗಳು ಹರಡುವ ಸಾಧ್ಯತೆ ಹೆಚ್ಚಿದ್ದು, ಸಾರ್ವಜನಿಕರ ಆರೋಗ್ಯದ ಮೇಲೂ ಪರಿಣಾಮ ಬೀರುವ ಅಪಾಯವಿದೆ ಎಂದು ಸಿಪಿಐಎಂ ತಿಳಿಸಿದೆ.

ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆ ನಡೆಸಲು ಅಧಿಕಾರ ವಹಿಸಿಕೊಂಡ ಒಂದೆರಡು ದಿನಗಳಲ್ಲೇ ಕ್ರಮ ಕೈಗೊಳ್ಳುವ ಸರ್ಕಾರ, ರಸ್ತೆ ಬದಿಗಳಲ್ಲಿ ಬಿದ್ದಿರುವ ಕಸವನ್ನು ವಿಲೇವಾರಿ ಮಾಡುವ ವಿಚಾರದಲ್ಲಿ ಏಕೆ ಗಮನಹರಿಸುತ್ತಿಲ್ಲ ಎಂದು ಸಿಪಿಐಎಂ ಪ್ರಶ್ನಿಸಿದೆ. ಇದು ಸರ್ಕಾರದ ದ್ವಂದ್ವ ನೀತಿಯನ್ನು ತೋರಿಸುತ್ತದೆ ಎಂದು ಟೀಕಿಸಿದೆ. ರಸ್ತೆ ಬದಿ

ಇದನ್ನೂ ಓದಿ : ‘ರಾಜಕೀಯ ಲಾಭ ಪಡೆದಾಗ ರಾಮಮಂದಿರ ರಾಜ್ಯದ ವಿಷಯವಾಗಿರಲಿಲ್ಲ’: ಪ್ರಿಯಾಂಕಾ ಗಾಂಧಿ

ಬೀದಿ ಬದಿ ವ್ಯಾಪಾರಿಗಳನ್ನು ಅನಾಥರನ್ನಾಗಿ ಮಾಡದೆ, ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ನಗರದ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಮಗ್ರ ಕ್ರಮ ಕೈಗೊಳ್ಳಬೇಕು ಎಂದು ಸಿಪಿಐಎಂ ಒತ್ತಾಯಿಸಿದೆ.

ರಸ್ತೆ ಬದಿಗಳಲ್ಲಿ ಬಿದ್ದಿರುವ ಕಸವನ್ನು ಕೂಡಲೇ ತೆರವುಗೊಳಿಸಿ, ಸಾರ್ವಜನಿಕರಿಗೆ ಆರೋಗ್ಯಕರ ಮತ್ತು ಸ್ವಚ್ಛ ಪರಿಸರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಿಪಿಐಎಂ ರಾಜ್ಯ ಸಮಿತಿ ಆಗ್ರಹಿಸಿದೆ.

ಇದನ್ನೂ ನೋಡಿ : ರೈತ–ಕಾರ್ಮಿಕರ ಜೈಲ್‌ ಭರೋ: ಕೇಂದ್ರದ ನೀತಿಗಳ ವಿರುದ್ಧ ದೇಶಾದ್ಯಂತ ಆಕ್ರೋಶ Janashakthi Media

 

Donate Janashakthi Media

Leave a Reply

Your email address will not be published. Required fields are marked *