ನವದೆಹಲಿ: ಕೇಂದ್ರ ಸರ್ಕಾರವು ಜುಲೈ 25ರಂದು ಯುವಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಿದೆ.ಸೆ. 5
ಸೆಪ್ಟೆಂಬರ್ 5ರ ಶಿಕ್ಷಕರ ದಿನದಂದು ನಡೆಯಲಿರುವ ಮೆರವಣಿಗೆ ಇಂಡಿಯಾ ಗೇಟ್ನಿಂದ ಆರಂಭವಾಗಿ ದೆಹಲಿ ಪೊಲೀಸ್ ಪ್ರಧಾನ ಕಚೇರಿವರೆಗೆ ಸಾಗಲಿದೆ. ನೀಟ್ ಪರೀಕ್ಷೆಗೆ ಸಂಬಂಧಿಸಿದ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಸ್ಥರು ಹಾಗೂ ಜುಲೈ 20ರಂದು ಸಂಸತ್ ಭವನದತ್ತ ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಕ್ರಮಕ್ಕೆ ಒಳಗಾದವರು ಮೆರವಣಿಗೆಯ ನೇತೃತ್ವ ವಹಿಸಲಿದ್ದಾರೆ ಎಂದು ಸಿಜೆಪಿ ತಿಳಿಸಿದೆ. ವಿದ್ಯಾರ್ಥಿಗಳು, ಯುವಜನರು ಹಾಗೂ ಯುವ ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಲಾಗಿದೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮಗಳ ವಿರುದ್ಧ ಸಿಜೆಪಿ ನೇತೃತ್ವದಲ್ಲಿ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆದಿತ್ತು. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ನಡೆದಿದ್ದ ಈ ಹೋರಾಟವನ್ನು ಜುಲೈ 25ರಂದು ಸರ್ಕಾರದೊಂದಿಗೆ ಮಾತುಕತೆ ಬಳಿಕ ತಾತ್ಕಾಲಿಕವಾಗಿ ಹಿಂಪಡೆಯಲಾಗಿತ್ತು. ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರಿಂದ ಹೋರಾಟ ಸ್ಥಗಿತಗೊಳಿಸಲಾಗಿತ್ತು ಎಂದು ಸಿಜೆಪಿ ಹೇಳಿದೆ.
ಆದರೆ, ನೀಡಿದ್ದ ಭರವಸೆಗಳ ಅನುಷ್ಠಾನದಲ್ಲಿ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಸಿಜೆಪಿ ಆರೋಪಿಸಿದೆ. ಪ್ರತಿಭಟನಾಕಾರರ ವಿರುದ್ಧ ದೇಶದ ವಿವಿಧೆಡೆ ದಾಖಲಿಸಿರುವ ಎಫ್ಐಆರ್ಗಳನ್ನು ಹಿಂಪಡೆಯುವ ವಿಚಾರದಲ್ಲೂ ಸರ್ಕಾರ ಸ್ಪಷ್ಟ ಕ್ರಮ ಕೈಗೊಂಡಿಲ್ಲ ಎಂದು ಸಂಘಟನೆ ಹೇಳಿದೆ. ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ಬೇಡಿಕೆಗಳನ್ನು ಮುಂದೂಡಲಾಗುತ್ತಿದೆ ಎಂಬುದು ಸಿಜೆಪಿಯ ಆರೋಪವಾಗಿದೆ. ಸೆ. 5
ಇದನ್ನೂ ಓದಿ : ಜಾರ್ಖಂಡ್ ಪರೀಕ್ಷಾ ಅಕ್ರಮ: 100ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಪ್ರಶ್ನಿಸಿದ ಸಿಐಡಿ–ಎಸ್ಐಟಿ
ಜುಲೈ 20ರಂದು ಸಂಸತ್ ಭವನದತ್ತ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರು ಲಾಠಿಚಾರ್ಜ್ ಸೇರಿದಂತೆ ಬಲಪ್ರಯೋಗ ನಡೆಸಿದ್ದಾರೆ ಎಂಬ ಆರೋಪವೂ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರ ವಿರುದ್ಧದ ಪೊಲೀಸ್ ಕ್ರಮದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಇದೀಗ ಸೆಪ್ಟೆಂಬರ್ 5ರ ಮೆರವಣಿಗೆಯಲ್ಲಿ ಆ ಘಟನೆಯಿಂದ ತೊಂದರೆಗೊಳಗಾದವರನ್ನೂ ಒಳಗೊಂಡು ಸರ್ಕಾರದ ಮುಂದೆ ತಮ್ಮ ಬೇಡಿಕೆಗಳನ್ನು ಮತ್ತೊಮ್ಮೆ ಮಂಡಿಸಲು ಸಿಜೆಪಿ ಮುಂದಾಗಿದೆ.
ಜುಲೈ 25ರಂದು ನೀಡಿದ್ದ ಭರವಸೆಗಳನ್ನು ಸರ್ಕಾರ ಪ್ರಾಮಾಣಿಕವಾಗಿ ಜಾರಿಗೊಳಿಸಬೇಕು, ವಿದ್ಯಾರ್ಥಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಬೇಕು ಹಾಗೂ ಯುವಜನರ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂಬುದು ಸೆಪ್ಟೆಂಬರ್ 5ರ ಮೆರವಣಿಗೆಯ ಪ್ರಮುಖ ಉದ್ದೇಶವಾಗಿದೆ.
ಸಿಜೆಪಿ ತನ್ನ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯ ಬಳಿಕ ಹೊಸ ಪ್ರತಿಭಟನೆಯ ಘೋಷಣೆ ಮಾಡಿದ್ದು, ದೇಶದಾದ್ಯಂತ ವಿದ್ಯಾರ್ಥಿಗಳು ಮತ್ತು ಯುವಜನರು ದೆಹಲಿಗೆ ಆಗಮಿಸಿ ಶಾಂತಿಯುತವಾಗಿ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದೆ. ಸೆ. 5
ಇದನ್ನೂ ನೋಡಿ : ಉಚಿತ ಯುಪಿಐಗೆ ಶುಲ್ಕ ಬೀಳುತ್ತಾ? ಕಾರ್ಪೊರೇಟ್ ಲಾಭದ ಸಾಧನವಾಯ್ತೆ ಯುಪಿಐ? Janashakthi Media ಸಿಜೆಪಿ
