ಆರೋಗ್ಯ, ಶಿಕ್ಷಣ, ಉದ್ಯೋಗ ಯುವಜನರ ಪ್ರಮುಖ ಬೇಡಿಕೆಯಾಗಲಿ: ಇಮ್ತಿಯಾಜ್

ಕುಂದಾಪುರ: ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗ ಇಂದು ಜನಸಾಮಾನ್ಯರಿಗೆ ಕೈಗೆಟುಕದಂತಾಗಿದ್ದು, ಈ ಕ್ಷೇತ್ರಗಳಿಗಾಗಿ ಯುವಜನತೆ ಧ್ವನಿ ಎತ್ತಿ ಹೋರಾಟ ನಡೆಸಬೇಕು ಎಂದು ಡಿವೈಎಫ್‌ಐ ರಾಜ್ಯ ಮುಖಂಡ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಬಿ.ಕೆ. ಇಮ್ತಿಯಾಜ್ ಕರೆ ನೀಡಿದರು. ಆರೋಗ್ಯ

ಕುಂದಾಪುರ ಹಂಚು ಕಾರ್ಮಿಕರ ಭವನದಲ್ಲಿ ನಡೆದ ಡಿವೈಎಫ್‌ಐ 16ನೇ ಕುಂದಾಪುರ ತಾಲೂಕು ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಗಳು ಹೆಚ್ಚಾಗಿ ಖಾಸಗಿಯವರ ಹಿಡಿತದಲ್ಲಿವೆ. ಇದರಿಂದ ಸಾಮಾನ್ಯ ಜನರಿಗೆ ಉತ್ತಮ ಆರೋಗ್ಯ ಸೇವೆ ಮತ್ತು ಶಿಕ್ಷಣ ಪಡೆಯುವುದು ಕಷ್ಟವಾಗಿದೆ. ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳು ಪದವಿ ಪಡೆದು ಹೊರಬರುತ್ತಿದ್ದರೂ, ಅವರಿಗೆ ಸೂಕ್ತ ಉದ್ಯೋಗಾವಕಾಶಗಳು ದೊರೆಯುತ್ತಿಲ್ಲ. ಪದವಿ ಪ್ರಮಾಣಪತ್ರ ಹಿಡಿದು ಕಡಿಮೆ ವೇತನದ ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ವಯಸ್ಕರಾದ ಯುವಜನರನ್ನೂ ಪೋಷಕರು ಸಾಕಬೇಕಾದ ಸ್ಥಿತಿ ಇದೆ. ಈ ಸಮಸ್ಯೆಗಳ ವಿರುದ್ಧ ಜಿಲ್ಲೆಯ ಯುವಜನತೆ ಧ್ವನಿ ಎತ್ತಬೇಕು ಎಂದರು.

ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗವನ್ನು ಬಂಡವಾಳಶಾಹಿಗಳ ಕೈಗೆ ಒಪ್ಪಿಸಿರುವ ಪರಿಣಾಮ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಮಾನ್ಯ ವ್ಯಕ್ತಿಯೊಬ್ಬ ಗಂಭೀರ ಕಾಯಿಲೆಗೆ ತುತ್ತಾದರೆ ಚಿಕಿತ್ಸೆಗಾಗಿ ಸಾಮಾಜಿಕ ಜಾಲತಾಣಗಳ ಮೂಲಕ ನೆರವು ಕೋರುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯಗಳ ಕೊರತೆಯಿದ್ದು, ಗ್ರಾಮೀಣ ಪ್ರದೇಶಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಭೂಮಿ ಮತ್ತು ಕಟ್ಟಡಗಳಿದ್ದರೂ ಖಾಯಂ ವೈದ್ಯರ ಕೊರತೆ ಇದೆ ಎಂದು ಅವರು ಹೇಳಿದರು. ಆರೋಗ್ಯ

ಇದನ್ನೂ ಓದಿ : ಈದ್ ಮಿಲಾದ್ ಪೋಸ್ಟರ್‌ಗಳ ಕುರಿತು ವಿಡಿಯೊ: ಬಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ

ಯುವಜನರ ಶಕ್ತಿ ಹಾಗೂ ಪ್ರತಿಭೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರಗಳು ಕ್ರಮ ಕೈಗೊಳ್ಳುತ್ತಿಲ್ಲ. ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿರುವ ಯುವ ಪ್ರತಿಭೆಗಳಿಗೆ ಸೂಕ್ತ ಅವಕಾಶಗಳು ದೊರೆಯುತ್ತಿಲ್ಲ. ಬಹುತೇಕ ಯುವಕರು ತಮ್ಮ ಸ್ವಂತ ಪರಿಶ್ರಮದಿಂದಲೇ ಸಾಧನೆ ಮಾಡುತ್ತಿದ್ದಾರೆ. ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಡಿವೈಎಫ್‌ಐ ನೇತೃತ್ವದಲ್ಲಿ ತೀವ್ರ ಹೋರಾಟ ನಡೆಸಬೇಕು ಎಂದು ಇಮ್ತಿಯಾಜ್ ಹೇಳಿದರು.

ಸಮ್ಮೇಳನದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಕುಂದಾಪುರದ ಡಾ. ಸತೀಶ್ ಖಾರ್ವಿ, ಸ್ಥಳೀಯ ಖ್ಯಾತ ಕ್ರಿಕೆಟಿಗ ಮನೋಜ್ ನಾಯರ್ ಹಾಗೂ ರಕ್ತದಾನಿ ಸುಧಾಕರ ಕಾಂಚನ್ ಅವರನ್ನು ಗೌರವಿಸಲಾಯಿತು.ಆರೋಗ್ಯ

ಗಣೇಶ್ ದಾಸ್ ಅಧ್ಯಕ್ಷತೆ ವಹಿಸಿದ್ದರು. ನಿಸರ್ಗ ವರದಿ ಮಂಡಿಸಿದರು.

ಸಮ್ಮೇಳನದ ಪ್ರಮುಖ ನಿರ್ಣಯಗಳು

ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು, ಕುಂದಾಪುರ ಪುರಸಭೆಯ ಯುಜಿಡಿ ಕಾಮಗಾರಿ ಪೂರ್ಣಗೊಳಿಸಬೇಕು, ಸಿದ್ದಾಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರನ್ನು ನೇಮಿಸಿ ಮೇಲ್ದರ್ಜೆಗೇರಿಸಬೇಕು ಎಂಬ ನಿರ್ಣಯಗಳನ್ನು ಅಂಗೀಕರಿಸಲಾಯಿತು.

ಇದರೊಂದಿಗೆ ಹೆಮ್ಮಾಡಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ ಹಾಗೂ ಕುಂದಾಪುರ–ಗಂಗೊಳ್ಳಿ ಸಂಪರ್ಕ ಸೇತುವೆ ನಿರ್ಮಾಣಕ್ಕೂ ಆಗ್ರಹಿಸಿ ಹೋರಾಟ ನಡೆಸಲು ಸಮ್ಮೇಳನ ತೀರ್ಮಾನಿಸಿತು.

ಹೊಸ ತಾಲೂಕು ಸಮಿತಿ

ಡಿವೈಎಫ್‌ಐ ಕುಂದಾಪುರ ತಾಲೂಕು ಅಧ್ಯಕ್ಷರಾಗಿ ವಿಶ್ವನಾಥ್ ದಾರಿಮನೆ, ಕಾರ್ಯದರ್ಶಿಯಾಗಿ ಗಣೇಶ್ ದಾಸ್ ಹಾಗೂ ಕೋಶಾಧಿಕಾರಿಯಾಗಿ ಉದಯ ಟೈಲರ್ ಆಯ್ಕೆಯಾದರು.

ರಾಘವೇಂದ್ರ ದೋಣಿ ಮನೆ ಸ್ವಾಗತಿಸಿದರು. ಮಂಜುನಾಥ ಶೋಗನ್ ಕಾರ್ಯಕ್ರಮ ನಿರೂಪಿಸಿದರು. ರಾಜ ಬಿಟಿಆರ್ ವಂದಿಸಿದರು. ಆರೋಗ್ಯ

ಇದನ್ನೂ ನೋಡಿ : “ಎದ್ದಿದೆ ಕರ್ನಾಟಕ, ನಡೆಯದು ನಿಮ್ಮ ನಾಟಕ!” | SIR ವಿರುದ್ಧ ಸದ್ದು ಮಾಡುತ್ತಿರುವ ಜಾಗೃತಿ ಗೀತೆ Janashakthi Media

Donate Janashakthi Media

Leave a Reply

Your email address will not be published. Required fields are marked *