ಕೆಪಿಎಸ್‌ಸಿ ನೇಮಕಾತಿ ಹಗರಣ: ಮಧ್ಯವರ್ತಿ ಬಸವರಾಜ ಕನ್ನಾಳೆ ಬಂಧನ, ಸೆ.9ರವರೆಗೆ ಸಿಐಡಿ ಕಸ್ಟಡಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಕ್ರಮಗಳ ಪ್ರಕರಣದಲ್ಲಿ ಸಿಐಡಿ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಪ್ರಕರಣದಲ್ಲಿ ಮಧ್ಯವರ್ತಿಯಾಗಿ ಶಂಕಿಸಲಾಗಿರುವ ಬಸವರಾಜ ಕನ್ನಾಳೆ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದು, ನ್ಯಾಯಾಲಯವು ಸೆಪ್ಟೆಂಬರ್ 9ರವರೆಗೆ ಸಿಐಡಿ ಕಸ್ಟಡಿಗೆ ಒಪ್ಪಿಸಿದೆ. ಕೆಪಿಎಸ್‌ಸಿ

ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಡೋಣಗಾಪುರ ಗ್ರಾಮದ ನಿವಾಸಿಯಾಗಿರುವ ಕನ್ನಾಳೆ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಅವರು ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿರುವುದರ ಜೊತೆಗೆ ವಿವಿಧ ವ್ಯವಹಾರಗಳಲ್ಲೂ ತೊಡಗಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಒಎಂಆರ್‌ ಉತ್ತರ ಪತ್ರಿಕೆಗಳಲ್ಲಿ ಅಕ್ರಮ ತಿದ್ದುಪಡಿ ನಡೆದಿರುವ ಬಗ್ಗೆ ಸಿಐಡಿ ತನಿಖೆ ನಡೆಸುತ್ತಿದೆ. ಅಭ್ಯರ್ಥಿಗಳಿಂದ ಹಣ ಪಡೆದು ನೇಮಕಾತಿಯಲ್ಲಿ ಅನುಕೂಲ ಮಾಡಿಕೊಡುವ ಜಾಲದ ಭಾಗವಾಗಿ ಕನ್ನಾಳೆ ಕಾರ್ಯನಿರ್ವಹಿಸಿದ್ದಾರೆಯೇ ಎಂಬುದನ್ನು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ : ಐಐಎಸ್‌ಸಿ ಪರಿಸರ ಸ್ನೇಹಿ ಫೋಮ್‌: ಪ್ರಯೋಗಾಲಯದಿಂದ ಮಾರುಕಟ್ಟೆಗೆ

ತನಿಖೆಯ ಪ್ರಕಾರ, ಒಂದು ಪ್ರಶ್ನೆಪತ್ರಿಕೆಗೆ ₹40 ಲಕ್ಷದವರೆಗೆ ಹಣ ಪಡೆಯಲಾಗುತ್ತಿತ್ತು ಎಂಬ ಆರೋಪವೂ ಕೇಳಿಬಂದಿದೆ. ಅಭ್ಯರ್ಥಿಗಳ ಅಂಕಗಳನ್ನು ಹೆಚ್ಚಿಸುವ ಉದ್ದೇಶದಿಂದ ಒಎಂಆರ್‌ ಶೀಟ್‌ಗಳಲ್ಲಿ ತಿದ್ದುಪಡಿ ಮಾಡಲಾಗಿದೆ ಎಂಬ ಅನುಮಾನವನ್ನು ಸಿಐಡಿ ವ್ಯಕ್ತಪಡಿಸಿದೆ. ಈ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ. ಕೆಪಿಎಸ್‌ಸಿ

ಈ ಪ್ರಕರಣದಲ್ಲಿ ಈಗಾಗಲೇ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ಸಿಐಡಿ ಬಂಧಿಸಿದೆ. ಅವರು ಕೆಪಿಎಸ್‌ಸಿಯಲ್ಲಿ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದ ಅವಧಿಯಲ್ಲಿನ ಪರೀಕ್ಷಾ ಅಕ್ರಮಗಳ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಕನ್ನಾಳೆ ಮತ್ತು ಗಂಗ್ವಾರ್ ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆ ಹಾಗೂ ಸಾಕ್ಷ್ಯ ಸಂಗ್ರಹಕ್ಕಾಗಿ ಸೆಪ್ಟೆಂಬರ್ 9ರವರೆಗೆ ಸಿಐಡಿ ವಶಕ್ಕೆ ನೀಡಲಾಗಿದೆ. ಪ್ರಕರಣದಲ್ಲಿ ಇನ್ನಷ್ಟು ಮಂದಿಯ ಪಾತ್ರ ಬಹಿರಂಗವಾಗುವ ಸಾಧ್ಯತೆ ಇದ್ದು, ತನಿಖೆ ಮುಂದುವರಿದಿದೆ. ಕೆಪಿಎಸ್‌ಸಿ

ಇದನ್ನೂ ನೋಡಿ : ಪ್ರಕಾಶ್ ರಾಜ್ ಕಾರ್ಯಕ್ರಮಕ್ಕೆ ಅಡ್ಡಿ: ‘ಗೋ ಬ್ಯಾಕ್’ ಘೋಷಣೆ, ಮತೀಯವಾದಿಗಳ ಕೆಟ್ಟ ನಡೆ Janashakthi Media

Donate Janashakthi Media

Leave a Reply

Your email address will not be published. Required fields are marked *