ಕೇರಳ : ಎಸ್‌ಎಫ್‌ಐ ಪ್ರತಿಭಟನೆ ಮೇಲೆ ಲಾಠಿಚಾರ್ಜ್,ವಿದ್ಯಾರ್ಥಿಗಳ ತಲೆಗೆ ಮೊಳೆಗಳ ಲಾಠಿ

ವಂದೇ ಮಾತರಂ ಮೂಲಕ ವಿಶ್ವವಿದ್ಯಾಲಯಗಳಲ್ಲಿ ಸಂಘಪರಿವಾರೀಕರಣಕ್ಕೆ ಯತ್ನ
ತಿರುವನಂತಪುರಂ: ‘ವಂದೇ ಮಾತರಂ’ ಗಾಯನದ ಮೂಲಕ ಶಿಕ್ಷಣ ಸಂಸ್ಥೆಗಳಲ್ಲಿ ಸಂಘಪರಿವಾರದ ಸಿದ್ಧಾಂತವನ್ನು ನುಸುಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ ಹಾಗೂ ಅದನ್ನು ಬೆಂಬಲಿಸುತ್ತಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರದ ಕ್ರಮವನ್ನು ಖಂಡಿಸಿ ಭಾರತ ವಿದ್ಯಾರ್ಥಿ ಫೆಡರೇಷನ್‌ (ಎಸ್‌ಎಫ್‌ಐ) ಕೇರಳ ವಿಶ್ವವಿದ್ಯಾಲಯದತ್ತ ಪ್ರತಿಭಟನಾ ಮೆರವಣಿಗೆ ನಡೆಸಿತು. ಕೇರಳ 

ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಪಿ.ಎಸ್. ಸಂಜೀವ್ ಪ್ರತಿಭಟನಾ ಮೆರವಣಿಗೆಯನ್ನು ಉದ್ಘಾಟಿಸಿದರು. ವಿಶ್ವವಿದ್ಯಾಲಯಗಳಲ್ಲಿ ಧಾರ್ಮಿಕ ಹಾಗೂ ರಾಜಕೀಯ ಸಿದ್ಧಾಂತಗಳನ್ನು ಹೇರುವ ಪ್ರಯತ್ನಗಳಿಗೆ ಅವಕಾಶ ನೀಡಬಾರದು. ಶಿಕ್ಷಣ ಸಂಸ್ಥೆಗಳು ವೈಜ್ಞಾನಿಕ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ ಆಧಾರದಲ್ಲಿ ಕಾರ್ಯನಿರ್ವಹಿಸಬೇಕು ಎಂದು ಅವರು ಒತ್ತಾಯಿಸಿದರು.

ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಕೇರಳ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ವಂದೇ ಮಾತರಂ’ನ ಪೂರ್ಣರೂಪದ ಗಾಯನಕ್ಕೆ ಸಂಬಂಧಿಸಿದಂತೆ ವಿವಾದ ಉಂಟಾಗಿತ್ತು. ಇದನ್ನು ವಿರೋಧಿಸಿ ಎಸ್‌ಎಫ್‌ಐ ಪ್ರತಿಭಟನೆಗೆ ಮುಂದಾಗಿದ್ದು, ವಿಶ್ವವಿದ್ಯಾಲಯದತ್ತ ಮೆರವಣಿಗೆ ನಡೆಸಿತು.

ಮೆರವಣಿಗೆ ವೇಳೆ ಪೊಲೀಸರು ಪ್ರತಿಭಟನಾಕಾರರ ಮೇಲೆ ಏಕಪಕ್ಷೀಯವಾಗಿ ಬಲಪ್ರಯೋಗ ನಡೆಸಿದ್ದಾರೆ ಎಂದು ಎಸ್‌ಎಫ್‌ಐ ಆರೋಪಿಸಿದೆ. ಪ್ರತಿಭಟನಾಕಾರರನ್ನು ತಡೆಯುವ ಸಂದರ್ಭದಲ್ಲಿ ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, ಎಸ್‌ಎಫ್‌ಐ ಕೇಂದ್ರ ಸಮಿತಿ ಸದಸ್ಯೆ ಆರ್ಯ ಪ್ರಸಾದ್, ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯೆ ವೈಷ್ಣವಿ ಶಾಜಿ ಸೇರಿದಂತೆ ಹಲವು ವಿದ್ಯಾರ್ಥಿ ಮುಖಂಡರು ಗಾಯಗೊಂಡಿದ್ದಾರೆ ಎಂದು ಸಂಘಟನೆ ತಿಳಿಸಿದೆ.

ಆರ್ಯ ಪ್ರಸಾದ್ ಅವರ ತಲೆಗೆ ಗಾಯವಾಗಿದ್ದು, ವೈಷ್ಣವಿ ಶಾಜಿ ಅವರ ಮುಖದ ಭಾಗಕ್ಕೂ ಗಾಯವಾಗಿದೆ ಎಂದು ಎಸ್‌ಎಫ್‌ಐ ಆರೋಪಿಸಿದೆ. ಮಹಿಳಾ ವಿದ್ಯಾರ್ಥಿ ಮುಖಂಡರ ಮೇಲೂ ಪೊಲೀಸರು ಬಲಪ್ರಯೋಗ ನಡೆಸಿರುವುದು ಖಂಡನೀಯ ಎಂದು ಸಂಘಟನೆ ಹೇಳಿದೆ.

ಇದನ್ನೂ ಓದಿ : ಕೆಪಿಎಸ್‌ಸಿ ನೇಮಕಾತಿ ಅಕ್ರಮ ತನಿಖೆಗೆ ಆಗ್ರಹಿಸಿ ಎಸ್‌ಎಫ್‌ಐ ಪ್ರತಿಭಟನೆ

ಇದನ್ನೂ ಓದಿ : ಕೆಪಿಎಸ್‌ಸಿ ನೇಮಕಾತಿ ಅಕ್ರಮ ತನಿಖೆಗೆ ಆಗ್ರಹಿಸಿ ಎಸ್‌ಎಫ್‌ಐ ಪ್ರತಿಭಟನೆ

 

ಎಸ್‌ಎಫ್‌ಐ ಪ್ರಕಾರ, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಮೊದಲು ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದರು. ಪ್ರತಿಭಟನಾಕಾರರು ಮುಂದೆ ಸಾಗಲು ಯತ್ನಿಸಿದ ಸಂದರ್ಭದಲ್ಲಿ ಪೊಲೀಸರು ಜಲಫಿರಂಗಿ ಬಳಸಿದ್ದು, ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡಿತು. ನಂತರ ಲಾಠಿಚಾರ್ಜ್ ನಡೆಸಲಾಗಿದೆ ಎಂದು ಸಂಘಟನೆ ಆರೋಪಿಸಿದೆ.

ಪೊಲೀಸರ ಕ್ರಮವನ್ನು ಖಂಡಿಸಿರುವ ಎಸ್‌ಎಫ್‌ಐ, ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕುವ ಪ್ರಯತ್ನವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದೆ. ಗಾಯಗೊಂಡ ವಿದ್ಯಾರ್ಥಿ ಮುಖಂಡರಿಗೆ ಚಿಕಿತ್ಸೆ ನೀಡಲಾಗಿದ್ದು, ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

‘ವಂದೇ ಮಾತರಂ’ ವಿಚಾರವನ್ನು ಮುಂದಿಟ್ಟುಕೊಂಡು ಶಿಕ್ಷಣ ಸಂಸ್ಥೆಗಳ ವಾತಾವರಣವನ್ನು ಸಂಘಪರಿವಾರದ ರಾಜಕೀಯ ಸಿದ್ಧಾಂತಕ್ಕೆ ಅನುಗುಣವಾಗಿ ಬದಲಿಸುವ ಪ್ರಯತ್ನ ನಡೆಯುತ್ತಿದೆ ಎಂಬುದು ಎಸ್‌ಎಫ್‌ಐನ ಪ್ರಮುಖ ಆರೋಪವಾಗಿದೆ. ಈ ಪ್ರಕ್ರಿಯೆಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವೂ ಅವಕಾಶ ನೀಡುತ್ತಿದೆ ಎಂದು ಸಂಘಟನೆ ಟೀಕಿಸಿದೆ.

ವಿಶ್ವವಿದ್ಯಾಲಯಗಳ ಸ್ವಾಯತ್ತತೆ, ವಿದ್ಯಾರ್ಥಿಗಳ ಹಕ್ಕುಗಳು ಮತ್ತು ಶಿಕ್ಷಣದ ಜಾತ್ಯತೀತ ಸ್ವರೂಪವನ್ನು ರಕ್ಷಿಸಲು ಹೋರಾಟ ಮುಂದುವರಿಸುವುದಾಗಿ ಎಸ್‌ಎಫ್‌ಐ ತಿಳಿಸಿದೆ. ವಿದ್ಯಾರ್ಥಿ ಮುಖಂಡರ ಮೇಲಿನ ಪೊಲೀಸ್ ಕ್ರಮದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳನ್ನು ತೀವ್ರಗೊಳಿಸುವುದಾಗಿಯೂ ಸಂಘಟನೆ ಎಚ್ಚರಿಕೆ ನೀಡಿದೆ.

ಈ ಘಟನೆ ಹಿನ್ನೆಲೆಯಲ್ಲಿ ಕೇರಳದಲ್ಲಿ ಎಸ್‌ಎಫ್‌ಐ ಮತ್ತು ರಾಜ್ಯ ಸರ್ಕಾರದ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಕಂಡುಬಂದಿದೆ. ಒಂದೆಡೆ ಎಸ್‌ಎಫ್‌ಐ ಪೊಲೀಸ್ ಕ್ರಮವನ್ನು ಖಂಡಿಸಿ ಪ್ರತಿಭಟನೆ ತೀವ್ರಗೊಳಿಸುತ್ತಿದೆ.

ಇದನ್ನೂ ನೋಡಿ : ‘ನಾವು ಕಳ್ಳರಲ್ಲ… ಈ ದೇಶದ ನಾಗರಿಕರು; ನಮ್ಮ ಮತದ ಹಕ್ಕು ಕಸಿಯಲು ಬಿಡಲ್ಲ’ Janashakthi Media

Donate Janashakthi Media

Leave a Reply

Your email address will not be published. Required fields are marked *