ಮೈಸೂರು ಗಣೇಶೋತ್ಸವ ಮೆರವಣಿಗೆ ವಿವಾದ: ಬಿಜೆಪಿಗೆಗೆ ಪೊಲೀಸರ ಎಚ್ಚರಿಕೆ

ಮೈಸೂರು: ಗಣೇಶೋತ್ಸವ ಮೆರವಣಿಗೆ ಸಾಗುವ ಮಾರ್ಗ ಮತ್ತು ಮಸೀದಿ ಬಳಿ ಪಟಾಕಿ ಸಿಡಿಸುವ ವಿಚಾರವಾಗಿ ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ವಿವಾದ ಉಂಟಾಗಿದೆ. ಮೆರವಣಿಗೆಯನ್ನು ಮಸೀದಿ ಬಳಿ ತೆಗೆದುಕೊಂಡು ಹೋಗಬಾರದು ಹಾಗೂ ಅಲ್ಲಿ ಪಟಾಕಿ ಸಿಡಿಸಿದರೆ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ಎಚ್ಚರಿಕೆ ನೀಡಿದರು. ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮೈಸೂರು 

ಪೊಲೀಸ್ ಅಧಿಕಾರಿ, ಮೆರವಣಿಗೆಯ ಮಾರ್ಗ ಸೂಕ್ಷ್ಮವಾಗಿದ್ದು, ಮಸೀದಿ ಮುಂಭಾಗದಲ್ಲಿ ಪಟಾಕಿ ಸಿಡಿಸುವುದನ್ನು ಸಹಿಸುವುದಿಲ್ಲ, ಇದು ಕೋಮುಗಲಭೆಗೆ ಅವಕಾಶ ನೀಡಿದಂತಾಗುತ್ತದೆ  ಎಂದು ಆಯೋಜಕರಿಗೆ ಎಚ್ಚರಿಕೆ ನೀಡಿರುವುದು ಕಂಡುಬಂದಿದೆ. ಈ ಹೇಳಿಕೆ ಇದೀಗ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.

ಬಿಜೆಪಿ ನಾಯಕರು, ಗಣೇಶೋತ್ಸವ ಆಚರಣೆಗೆ ಸರ್ಕಾರ ನಿರ್ಬಂಧ ಹೇರುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಾರ್ವಜನಿಕ ರಸ್ತೆಗಳು ಯಾವುದೇ ಒಂದು ಸಮುದಾಯಕ್ಕೆ ಸೇರಿದವುಗಳಲ್ಲ. ಎಲ್ಲರಿಗೂ ಸಾರ್ವಜನಿಕ ರಸ್ತೆಯಲ್ಲಿ ತಮ್ಮ ಧಾರ್ಮಿಕ ಆಚರಣೆ ನಡೆಸುವ ಹಕ್ಕಿದೆ. ಮೆರವಣಿಗೆಗೆ ಪೊಲೀಸರು ಮಾರ್ಗ ನಿರ್ಧರಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಯೋಧನಿಗೆ ಜಾತಿ ಪ್ರಮಾಣಪತ್ರ ನೀಡಲು ವಿಳಂಬ: ಅಧಿಕಾರಿಗಳಿಗೆ ಸುಧೀರ್ ಕುಮಾರ್ ಮುರೊಳ್ಳಿ ಫುಲ್ ಕ್ಲಾಸ್

ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಕೂಡ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಗಣೇಶೋತ್ಸವ ಸಂದರ್ಭದಲ್ಲಿ ಮೆರವಣಿಗೆ ನಡೆಸಬಾರದು, ಪಟಾಕಿ ಸಿಡಿಸಬಾರದು ಎಂಬಂತಹ ನಿರ್ಬಂಧಗಳನ್ನು ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಸಂಬಂಧಪಟ್ಟ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಟಿ ನರಸೀಪುರ ಠಾಣೆ ವ್ಯಾಪ್ತಿಯಲ್ಲಿ ಗಣೇಶೋತ್ಸವ ಮತ್ತು ಮೂರ್ತಿ ವಿಸರ್ಜನೆಗೆ ಸಂಬಂಧಿಸಿದಂತೆ ಸಾರ್ವಜನಿಕ ಶಾಂತಿ ಕಾಯ್ದುಕೊಳ್ಳಲು ಇನ್‌ಸ್ಪೆಕ್ಟರ್ ಧನಂಜಯ್ ಅವರು ಆಯೋಜಕರು ಮತ್ತು ಯುವಕರ ಸಭೆ ಕರೆದಿದ್ದರು. ಈ ವೇಳೆ ಮಾತನಾಡಿದ್ದ ಅವರು, “ಮೆರವಣಿಗೆಯನ್ನು ಪೊಲೀಸರು ನಿಗದಿಪಡಿಸಿದ ಮಾರ್ಗದಲ್ಲೇ ನಡೆಸಬೇಕು. ಟಿ. ನರಸೀಪುರ ಲಿಂಕ್ ರಸ್ತೆಯಲ್ಲಿ ಮೆರವಣಿಗೆಗೆ ಅವಕಾಶವಿಲ್ಲ. ಮಸೀದಿಗಳ ಮುಂಭಾಗದಲ್ಲಿ ಅನಗತ್ಯವಾಗಿ ಮೆರವಣಿಗೆ ತಡೆದು ನಿಲ್ಲಿಸುವುದು, ಪಟಾಕಿ ಸಿಡಿಸಿ ಪ್ರಚೋದನಕಾರಿ ಘೋಷಣೆ ಕೂಗುವುದನ್ನು ಸಹಿಸುವುದಿಲ್ಲ. ನಿಯಮ ಉಲ್ಲಂಘಿಸಿ ವಾತಾವರಣ ಕೆಡಿಸಿದರೆ ಕ್ರಮ ಜರುಗಿಸುವುದಾಗಿ ಮುಂಚೆಯೇ ಹೇಳಿದ್ದರೂ, ಬಿಜೆಪಿ ಕೋಮುಗಲಭೆ ಸೃಷ್ಟಿಸಲು ಈ ಪ್ರಕರಣವನ್ನು ಬಳಸಿಕೊಳ್ಳುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ನೋಡಿ : ಜಿಡಿಪಿ ಬೆಳವಣಿಗೆ ಎಂದರೆ ಅಸಮಾನತೆ, ನಿರುದ್ಯೋಗದ ಬೆಳವಣಿಗೆಯೇ? Janashakthi Media

Donate Janashakthi Media

Leave a Reply

Your email address will not be published. Required fields are marked *