ಹಬ್ಬದ ವೇಳೆಯ ಬೆಲೆ ಏರಿಕೆ: ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನವದೆಹಲಿ: ಹಬ್ಬದ ಋತುವಿನಲ್ಲೇ ಗೃಹೋಪಯೋಗಿ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವುದನ್ನು ಪ್ರಶ್ನಿಸಿರುವ ಕಾಂಗ್ರೆಸ್, “ದೇಶದ ಅತ್ಯಂತ ಗಂಭೀರ ಸಮಸ್ಯೆಯಾಗಿರುವ ಹಣದುಬ್ಬರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಯಾವಾಗ ಮಾತನಾಡುತ್ತಾರೆ?” ಎಂದು ಪ್ರಶ್ನಿಸಿದೆ. ಹಬ್ಬದ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂವಹನ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್, ಅಕ್ಟೋಬರ್‌ 1ರಿಂದ ಎಲ್‌ಇಡಿ ಟಿವಿ, ತೊಳೆಯುವ ಯಂತ್ರ ಸೇರಿದಂತೆ ಹಲವು ಎಲೆಕ್ಟ್ರಾನಿಕ್‌ ವಸ್ತುಗಳ ಬೆಲೆ ಕಚ್ಚಾ ವಸ್ತುಗಳ ವೆಚ್ಚ ಹೆಚ್ಚಳದಿಂದಾಗಿ ಶೇ.5ರಿಂದ 10ರವರೆಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂಬ ಮಾಧ್ಯಮ ವರದಿಯನ್ನು ಉಲ್ಲೇಖಿಸಿದ್ದಾರೆ. ಹಬ್ಬದ ಸಂದರ್ಭದಲ್ಲಿ ಜನರ ಮೇಲಿನ ಬೆಲೆ ಏರಿಕೆಯ ಹೊರೆ ಮುಂದುವರಿದಿದೆ ಎಂದು ಅವರು ಆರೋಪಿಸಿದ್ದಾರೆ.

ತರಕಾರಿ ಸೇರಿದಂತೆ ಅಡುಗೆಮನೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಜತೆಗೆ ಹವಾನಿಯಂತ್ರಕ, ಟಿವಿ, ಫ್ರಿಜ್‌ನಂತಹ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚುತ್ತಿದೆ. ಕುಟುಂಬಗಳ ಉಳಿತಾಯ ಕಡಿಮೆಯಾಗುತ್ತಿದ್ದು, ಸಾಲದ ಪ್ರಮಾಣ ಹೆಚ್ಚುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸಾಮಾನ್ಯ ಕುಟುಂಬಗಳು ತಮ್ಮ ಖರ್ಚುಗಳನ್ನು ಹೇಗೆ ನಿರ್ವಹಿಸಬೇಕು? ಎಂದು ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಆಗ್ರಹ – ರಾಷ್ಟ್ರಪತಿ ಮುರ್ಮು ಮಧ್ಯಪ್ರವೇಶಕ್ಕೆ ಒತ್ತಾಯ

ಪ್ರಧಾನಿ ಮೋದಿ ತಮ್ಮ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ವಿವಿಧ ವಿಚಾರಗಳ ಕುರಿತು ಮಾತನಾಡುತ್ತಾರೆ. ಆದರೆ ದೇಶದ ಜನರು ಎದುರಿಸುತ್ತಿರುವ ಅತ್ಯಂತ ಪ್ರಮುಖ ಸಮಸ್ಯೆಯಾದ ಹಣದುಬ್ಬರದ ಬಗ್ಗೆ ಅವರು ಯಾವಾಗ ಮಾತನಾಡುತ್ತಾರೆ? ಜನರ ಸಂಕಷ್ಟಗಳ ಬಗ್ಗೆ ಯಾವಾಗ ಕಾಳಜಿ ವಹಿಸುತ್ತಾರೆ ಎಂದು ರಮೇಶ್ ಪ್ರಶ್ನಿಸಿದ್ದಾರೆ.

ಬೆಲೆ ಏರಿಕೆಯಿಂದ ತೊಂದರೆಗೊಳಗಾಗಿರುವ ಜನರಿಗೆ ಸರ್ಕಾರದಿಂದ ಯಾವುದೇ ಪರಿಹಾರ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ. ಮಧ್ಯಮ ವರ್ಗ ಮತ್ತು ಬಡವರು ಹೆಚ್ಚುತ್ತಿರುವ ಆರ್ಥಿಕ ಹೊರೆಯನ್ನು ಹೇಗೆ ನಿಭಾಯಿಸಬೇಕು ಎಂದೂ ಪ್ರಶ್ನಿಸಿದೆ. ಅಗತ್ಯ ವಸ್ತುಗಳು ಹಾಗೂ ಗೃಹೋಪಯೋಗಿ ವಸ್ತುಗಳ ಬೆಲೆ ಏರಿಕೆಯನ್ನು ಕಾಂಗ್ರೆಸ್ ನಿರಂತರವಾಗಿ ಟೀಕಿಸುತ್ತಿದ್ದು, ಗ್ರಾಹಕರ ಮೇಲಿನ ಹೊರೆ ಕಡಿಮೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತಿದೆ.

ಆದರೆ ಕಾಂಗ್ರೆಸ್‌ನ ಆರೋಪಗಳನ್ನು ಸರ್ಕಾರ ತಿರಸ್ಕರಿಸುತ್ತಿದ್ದು, ದೇಶದ ಜಿಡಿಪಿ ಬೆಳವಣಿಗೆ ಹಾಗೂ ಆರ್ಥಿಕತೆಯ ವಿಸ್ತರಣೆಯನ್ನು ಉಲ್ಲೇಖಿಸುತ್ತಿದೆ.

ಇದನ್ನೂ ನೋಡಿ : ಎಸ್ಐಆರ್ ರದ್ದುಪಡಿಸಿ, ಜ್ಞಾನೇಶ್ ಕುಮಾರ್ ವಜಾಗೊಳಿಸಿ: ಎಡಪಕ್ಷಗಳ ಪ್ರತಿಭಟನೆ Janashakthi Media

Donate Janashakthi Media

Leave a Reply

Your email address will not be published. Required fields are marked *