ಕಬ್ಬು ಬೆಳೆಗಾರರ ಹೋರಾಟ ತೀವ್ರ: ಅಹೋರಾತ್ರಿ ಧರಣಿ, ರಾಷ್ಟ್ರೀಯ ಹೆದ್ದಾರಿಗಳು ಸ್ತಬ್ಧ

ಬೆಳಗಾವಿ: ಕಬ್ಬಿಗೆ ಲಾಭದಾಯಕ ಬೆಲೆ ನಿಗದಿಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ಕೇಂದ್ರ ಸರ್ಕಾರದ ಪ್ರತಿನಿಧಿಗಳೊಂದಿಗೆ ದೆಹಲಿಯಲ್ಲಿ ನಡೆದ ಮಾತುಕತೆ ಯಾವುದೇ ನಿರ್ದಿಷ್ಟ ತೀರ್ಮಾನವಿಲ್ಲದೆ ಅಂತ್ಯಗೊಂಡ ಹಿನ್ನೆಲೆಯಲ್ಲಿ, ಬೆಳಗಾವಿ ಜಿಲ್ಲೆಯ ಹಲವು ಕಡೆ ರೈತರು ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಇದರಿಂದ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಕಬ್ಬು

ಕರ್ನಾಟಕ–ಮಹಾರಾಷ್ಟ್ರ ಗಡಿಯ ಕೊಗನೊಳ್ಳಿ, ಹುಕ್ಕೇರಿ ತಾಲ್ಲೂಕಿನ ಹಟ್ಟರಗಿ ಟೋಲ್‌ಗೇಟ್‌ ಹಾಗೂ ಹಿರೇಬಾಗೇವಾಡಿ ಟೋಲ್‌ಗೇಟ್‌ ಬಳಿ ರೈತರು ಜಮಾಯಿಸಿ ರಸ್ತೆ ತಡೆ ನಡೆಸಿದ್ದಾರೆ. ಟ್ರ್ಯಾಕ್ಟರ್‌ಗಳನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ, ಘೋಷಣೆಗಳನ್ನು ಕೂಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವು ಕಡೆ ರೈತರು ರಸ್ತೆಯಲ್ಲೇ ಕುಳಿತು ಊಟ ಮಾಡುತ್ತಾ, ಬೇಡಿಕೆ ಈಡೇರುವವರೆಗೆ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ. ಕಬ್ಬು

ಇದನ್ನೂ ನೋಡಿ : SIR ಅಕ್ರಮ: ಕುಂಬಳಕಾಯಿ ಕಳ್ಳ ಅಂದ್ರೆ ಬಿಜೆಪಿ ಹೆಗಲು ಮುಟ್ಕೊಳೋದ್ಯಾಕೆ? Janashakthi Media

ಕಬ್ಬಿಗೆ ಟನ್‌ಗೆ ₹5,500 ಬೆಲೆ ನಿಗದಿಗೆ ಆಗ್ರಹ

ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನಿಗದಿಪಡಿಸಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಮಾರಾಟ ಬೆಲೆ ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂಬುದು ರೈತರ ಪ್ರಮುಖ ಬೇಡಿಕೆಗಳಾಗಿವೆ. ಕರ್ನಾಟಕದಲ್ಲಿ ಉತ್ಪಾದನೆಯಾಗುವ ಎಥನಾಲ್‌ ಖರೀದಿ ಮತ್ತು ಬೆಲೆ ನಿಗದಿ ವಿಚಾರದಲ್ಲಿಯೂ ರೈತರು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ರೈತ ಸಂಘಟನೆಗಳ ಪ್ರತಿನಿಧಿಗಳು ದೆಹಲಿಗೆ ತೆರಳಿ ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸಿದ್ದರೂ, ಕಬ್ಬಿನ ಬೆಲೆ ಮತ್ತು ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯ ಕುರಿತು ಸ್ಪಷ್ಟ ಭರವಸೆ ದೊರೆತಿಲ್ಲ ಎಂದು ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇವಲ ಸಭೆಗಳನ್ನು ನಡೆಸಿ ಭರವಸೆ ನೀಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ; ಸರ್ಕಾರ ನಿರ್ದಿಷ್ಟ ನಿರ್ಧಾರ ಪ್ರಕಟಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಪರ್ಯಾಯ ಮಾರ್ಗಗಳ ಮೂಲಕ ವಾಹನಗಳನ್ನು ಕಳುಹಿಸುತ್ತಿದ್ದಾರೆ. ಮಹಾರಾಷ್ಟ್ರದಿಂದ ಬೆಳಗಾವಿ ಮತ್ತು ಬೆಂಗಳೂರಿನತ್ತ ಪ್ರಯಾಣಿಸುವ ವಾಹನ ಸವಾರರು ಸಂಚಾರದ ಪರಿಸ್ಥಿತಿಯನ್ನು ಗಮನಿಸಿ ಪರ್ಯಾಯ ಮಾರ್ಗ ಬಳಸುವಂತೆ ಸೂಚಿಸಲಾಗಿದೆ. ಹೆದ್ದಾರಿ ತಡೆ ಮುಂದುವರಿದಿರುವುದರಿಂದ ಪ್ರಯಾಣಿಕರು, ಬಸ್‌ಗಳು ಮತ್ತು ಸರಕು ಸಾಗಣೆ ವಾಹನಗಳು ತೊಂದರೆ ಅನುಭವಿಸುತ್ತಿವೆ.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಪೂರೈಕೆ ಪ್ರಕರಣ: ಮೂವರ ಜಾಮೀನು ಅರ್ಜಿ ವಜಾ

Donate Janashakthi Media

Leave a Reply

Your email address will not be published. Required fields are marked *