ಬೆಂಗಳೂರು : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಪ್ರಸಾರವಾಗಿರುವ ವಿವಾದಾತ್ಮಕ ಸ್ಟಿಂಗ್ ಆಪರೇಷನ್ ವಿಡಿಯೊ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ತನ್ನನ್ನು ಬ್ಲ್ಯಾಕ್ಮೇಲ್ ಮಾಡುವ ಮತ್ತು ಸಾರ್ವಜನಿಕವಾಗಿ ತೇಜೋವಧೆ ಮಾಡುವ ಉದ್ದೇಶದಿಂದ ಈ ವಿಡಿಯೊ ಸೃಷ್ಟಿಸಲಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಸಂಬಂಧ ತಾವು ಪೊಲೀಸರಿಗೆ ದೂರು ನೀಡಿದ್ದು, ವಿಡಿಯೊ ಪ್ರಸಾರಕ್ಕೆ ತಡೆಯಾಜ್ಞೆಯನ್ನೂ ನ್ಯಾಯಾಲಯದಿಂದ ಪಡೆದಿರುವುದಾಗಿ ತಿಳಿಸಿದ್ದಾರೆ. ಬ್ಲ್ಯಾಕ್ಮೇಲ್
ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ವಿಡಿಯೊದಲ್ಲಿನ ಆರೋಪಗಳನ್ನು ನಿರಾಕರಿಸಿದರು. ಸತ್ಯಾಂಶ ಹೊರಬರಬೇಕು ಮತ್ತು ಇದರ ಹಿಂದೆ ಯಾರಿದ್ದಾರೆ ಎಂಬುದು ಬಹಿರಂಗವಾಗಬೇಕು ಎಂಬ ಉದ್ದೇಶದಿಂದ ದೂರು ನೀಡಿರುವುದಾಗಿ ಹೇಳಿದರು. ತಮ್ಮ ರಾಜಕೀಯ ಜೀವನದಲ್ಲಿ ಇಂತಹ ಘಟನೆ ಎದುರಾಗಿರಲಿಲ್ಲ; ಈಗ ಅಧಿಕಾರದಲ್ಲಿಲ್ಲದ ಸಂದರ್ಭದಲ್ಲಿ ತಮ್ಮ ವಿರುದ್ಧ ಇಂತಹ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.
ಕಾಂಗ್ರೆಸ್ನವರೇ ಪಿತೂರಿಯಲ್ಲಿ ಭಾಗಿಯಾಗಿದ್ದಾರೆಯೇ?
ಈ ವಿವಾದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಕೂಡ ಪ್ರತಿಕ್ರಿಯಿಸಿದ್ದು, ತಮ್ಮ ತಂದೆಯ ಹೆಸರಿಗೆ ಧಕ್ಕೆ ತರಲು ಕಾಂಗ್ರೆಸ್ನ ಕೆಲವರೇ ಸ್ಟಿಂಗ್ ಆಪರೇಷನ್ನಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ವಿಡಿಯೊದಲ್ಲಿರುವ ಮಹಿಳೆ 2023ರ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಪಡೆಯಲು ಬಯಸಿದ್ದರು ಎಂಬ ಅಂಶವನ್ನು ಉಲ್ಲೇಖಿಸಿದ ಯತೀಂದ್ರ, ಈ ಉದ್ದೇಶದಿಂದಲೇ ಕಾರ್ಯಾಚರಣೆ ನಡೆದಿರುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಆದರೆ, ಇಡೀ ಕಾಂಗ್ರೆಸ್ ಪಕ್ಷವನ್ನು ಇದಕ್ಕೆ ಹೊಣೆ ಮಾಡಲಾಗದು ಎಂದೂ ಸ್ಪಷ್ಟಪಡಿಸಿದ್ದಾರೆ. ಬ್ಲ್ಯಾಕ್ಮೇಲ್
ಇದನ್ನೂ ಓದಿ : ಮಣಿಪುರದಲ್ಲಿ ಹತ್ಯೆ, ಹಿಂಸಾಚಾರಕ್ಕೆ ಜನರ ಆಕ್ರೋಶ: ಪಾತ್ರೆ ಬಡಿದು, ಡೋಲು ಬಾರಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ
ವಿಡಿಯೊ ಪ್ರಸಾರಕ್ಕೆ ನ್ಯಾಯಾಲಯದ ತಡೆಯಾಜ್ಞೆ
ವಿವಾದಾತ್ಮಕ ವಿಡಿಯೊ ಪ್ರಸಾರ ಮತ್ತು ಹಂಚಿಕೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಸಿವಿಲ್ ನ್ಯಾಯಾಲಯ ಅಕ್ಟೋಬರ್ 13ರಂದು ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳು ಮತ್ತು ಡಿಜಿಟಲ್ ವೇದಿಕೆಗಳಲ್ಲಿ ಆ ವಿಡಿಯೊವನ್ನು ಪ್ರಕಟಿಸುವುದು, ಪ್ರಸಾರ ಮಾಡುವುದು ಅಥವಾ ಹಂಚಿಕೊಳ್ಳುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ನಡುವೆ, ವಿಡಿಯೊ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ ಅವರು ನಿರೀಕ್ಷಣಾ ಜಾಮೀನು ಕೋರಿದ್ದು, ಸ್ಥಳೀಯ ನ್ಯಾಯಾಲಯ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. ಪ್ರಕರಣದ ಸತ್ಯಾಸತ್ಯತೆ ಮತ್ತು ಇದರ ಹಿಂದೆ ಯಾರಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದಲೇ ಬಹಿರಂಗವಾಗಬೇಕಿದೆ. ಬ್ಲ್ಯಾಕ್ಮೇಲ್
ಇದನ್ನೂ ನೋಡಿ : ಎಸ್ಐಆರ್ | ತಿರಂಗ ಹಿಡಿದು ರಸ್ತೆಗಿಳಿದ ಹೋರಾಟಗಾರರು: ಹತ್ತಿಕ್ಕಿದಷ್ಟೂ ಹುಟ್ಟಲಿವೆ ಸಾವಿರಾರು ಜಂತರ್ ಮಂತರ್!
