ಸಾಲಮನ್ನಾ, ಕಾರ್ಖಾನೆಗಳ ಬಾಕಿ ಪಾವತಿಗೂ ಆಗ್ರಹ; ಅ. 26ರಂದು ಸಭೆ ನಡೆಸುವುದಾಗಿ ಸಚಿವರ ಭರವಸೆ
ಮಂಡ್ಯ: ಕಬ್ಬಿಗೆ ಪ್ರತಿ ಟನ್ಗೆ ₹5,500 ಬೆಲೆ ನಿಗದಿಪಡಿಸಬೇಕು, ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕಿರುವ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಕೃಷಿ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ರೈತರು ಶುಕ್ರವಾರ (ಅ. 23) ಬೆಂಗಳೂರು–ಮೈಸೂರು ಎಕ್ಸ್ಪ್ರೆಸ್ವೇಯ ಗಣಂಗೂರು ಟೋಲ್ ಬಳಿ ರಸ್ತೆ ತಡೆ ನಡೆಸಿದರು. ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ರೈತ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಟನ್ಗೆ
ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ಭಾಗದ ಕಬ್ಬು ಬೆಳೆಗಾರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕಬ್ಬು ಬೆಳೆಯಲು ತಗಲುವ ಉತ್ಪಾದನಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಬೆಲೆ ನೀಡಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿತ್ತು. ಬರ ಪರಿಸ್ಥಿತಿಯಿಂದ ಕೃಷಿ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಾಲ ಮನ್ನಾ ಮಾಡಬೇಕು ಮತ್ತು ಸಕ್ಕರೆ ಕಾರ್ಖಾನೆಗಳಿಂದ ಬರಬೇಕಿರುವ ಬಾಕಿ ಹಣವನ್ನು ವಿಳಂಬವಿಲ್ಲದೆ ಪಾವತಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಟನ್ಗೆ

ಇದನ್ನೂ ಓದಿ : ಸುರತ್ಕಲ್ ಎಚ್ಪಿಸಿಎಲ್ನಲ್ಲಿ 4 ಮಹಿಳಾ ಕಾರ್ಮಿಕರ ವಜಾ: 50 ದಿನಗಳಿಂದ ಧರಣಿ, ನ್ಯಾಯಕ್ಕೆ ಡಿವೈಎಫ್ಐ ಆಗ್ರಹ

ಸುಮಾರು ಎರಡು ಗಂಟೆಗಳ ಕಾಲ ನಡೆದ ರಸ್ತೆ ತಡೆಯಿಂದ ಹೆದ್ದಾರಿಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತವು. ಹಲವು ಕಿಲೋಮೀಟರ್ಗಳಷ್ಟು ವಾಹನ ದಟ್ಟಣೆ ಉಂಟಾಗಿ ಪ್ರಯಾಣಿಕರು ತೊಂದರೆ ಅನುಭವಿಸಿದರು. ಪೊಲೀಸರು ವಾಹನಗಳನ್ನು ಪರ್ಯಾಯ ಮಾರ್ಗಗಳ ಮೂಲಕ ಸಂಚರಿಸಲು ವ್ಯವಸ್ಥೆ ಮಾಡಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರು ರೈತರೊಂದಿಗೆ ಮಾತುಕತೆ ನಡೆಸಿ, ಅವರ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು. ಬಳಿಕ ರೈತರು ಪ್ರತಿಭಟನೆ ಹಿಂಪಡೆದರು.
ಅಕ್ಟೋಬರ್ 26ರಂದು ಬೆಳಗಾವಿಯಲ್ಲಿ ರೈತರ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಬೇಡಿಕೆಗಳ ಕುರಿತು ಚರ್ಚಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ. ಕಬ್ಬಿನ ಬೆಲೆ ಹೆಚ್ಚಳ, ಕಾರ್ಖಾನೆಗಳ ಬಾಕಿ ಪಾವತಿ ಮತ್ತು ಕೃಷಿ ಸಾಲ ಮನ್ನಾ ಕುರಿತಂತೆ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದರ ಮೇಲೆ ರೈತರ ಮುಂದಿನ ಹೋರಾಟದ ನಡೆ ನಿರ್ಧಾರವಾಗಲಿದೆ.
ಇದನ್ನೂ ನೋಡಿ : ಎಸ್ಐಆರ್ | ತಿರಂಗ ಹಿಡಿದು ರಸ್ತೆಗಿಳಿದ ಹೋರಾಟಗಾರರು: ಹತ್ತಿಕ್ಕಿದಷ್ಟೂ ಹುಟ್ಟಲಿವೆ ಸಾವಿರಾರು ಜಂತರ್ ಮಂತರ್!
