ಜಗತ್ತಿನಾದ್ಯಂತ ಪ್ರಜಾಪ್ರಭುತ್ವಕ್ಕೆ ಕಂಟಕ; ಮೋದಿ ವಿರುದ್ಧವೂ ವಾಗ್ದಾಳಿ ನಡೆಸಿದ ಸ್ಯಾಮ್ ಪಿತ್ರೋಡಾ!

Please follow and like us:
ಚಿಕಾಗೊ: ಜಗತ್ತಿನ ಹಲವು ದೇಶಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಪ್ರಜಾಸತ್ತಾತ್ಮಕ ಸಂಸ್ಥೆಗಳು ದುರ್ಬಲವಾಗುತ್ತಿವೆ. ಚುನಾವಣಾ ಪ್ರಕ್ರಿಯೆಯ ದುರ್ಬಳಕೆ, ನಾಗರಿಕ ಸಮಾಜದ ಮೇಲಿನ ನಿರ್ಬಂಧಗಳು ಹಾಗೂ ಮಾಧ್ಯಮಗಳ ಮೇಲಿನ ಪ್ರಭಾವದಿಂದ ಪ್ರಜಾಪ್ರಭುತ್ವದ ಮೂಲ ಆಶಯವೇ ಅಪಾಯದಲ್ಲಿದೆ ಎಂದು ಭಾರತೀಯ ಸಾಗರೋತ್ತರ ಕಾಂಗ್ರೆಸ್ (IOC) ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಆತಂಕ ವ್ಯಕ್ತಪಡಿಸಿದ್ದಾರೆ. ಸ್ಯಾಮ್

ಹೈದರಾಬಾದ್‌ನ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿರುವ ಭಾರತ್ ಶೃಂಗಸಭೆ 2026ರಲ್ಲಿ ಜಾಗತಿಕ ಪ್ರಜಾಪ್ರಭುತ್ವದ ಸ್ಥಿತಿ ಮತ್ತು ಅದರ ಮುಂದಿರುವ ಸವಾಲುಗಳ ಕುರಿತು ಚರ್ಚೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ಸುಮಾರು 70 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿರುವ ಈ ಶೃಂಗಸಭೆಯಲ್ಲಿ 600ರಿಂದ 700 ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಯುವಜನರು, ಮಹಿಳೆಯರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ಆರ್ಥಿಕವಾಗಿ ದುರ್ಬಲವಾಗಿರುವವರ ಹಕ್ಕುಗಳಿಗೂ ಪ್ರಜಾಪ್ರಭುತ್ವದಲ್ಲಿ ಸಮಾನ ಆದ್ಯತೆ ಸಿಗಬೇಕು ಎಂದು ಅವರು ಹೇಳಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯನ್ನೂ ಮರುರೂಪಿಸಬೇಕು

ಕೃತಕ ಬುದ್ಧಿಮತ್ತೆ (AI) ಬೆಳವಣಿಗೆಯಿಂದ ಮುಂದಿನ ದಿನಗಳಲ್ಲಿ ಹಲವು ಬದಲಾವಣೆಗಳಾಗಲಿದ್ದು, ಅದಕ್ಕೆ ತಕ್ಕಂತೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೂ ಮರುರೂಪಿಸಬೇಕಾಗಬಹುದು ಎಂದು ಪಿತ್ರೋಡಾ ಅಭಿಪ್ರಾಯಪಟ್ಟಿದ್ದಾರೆ. ಪ್ರಜಾಪ್ರಭುತ್ವ ಎಂದರೆ ಕೇವಲ ಚುನಾವಣೆಗಳಲ್ಲ. ಸಮಾನತೆ, ಅಭಿವ್ಯಕ್ತಿ ಸ್ವಾತಂತ್ರ್ಯ, ಮಹಿಳಾ ಸಮಾನತೆ ಮತ್ತು ಪರಸ್ಪರ ಗೌರವಕ್ಕೆ ಅವಕಾಶ ನೀಡುವ ವ್ಯವಸ್ಥೆಯಾಗಬೇಕು ಎಂದು ಒತ್ತಿಹೇಳಿದ್ದಾರೆ. ಸ್ಯಾಮ್

ಇದನ್ನೂ ಓದಿ: 2024ರ ಚುನಾವಣೆಯಲ್ಲಿ 51 ಕ್ಷೇತ್ರಗಳಲ್ಲಿ ಮತದಾನ–ಮತ ಎಣಿಕೆ ನಡುವೆ ವ್ಯತ್ಯಾಸ: ದಿ ರಿಪೋರ್ಟರ್ಸ್‌ ಕಲೆಕ್ಟೀವ್‌ ತನಿಖೆಯಲ್ಲಿ ಬಹಿರಂಗ

ಪ್ರಧಾನಿ ಮೋದಿ ವಿರುದ್ಧವೂ ಕಿಡಿ

ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿರುವುದಕ್ಕೆ ಪಿತ್ರೋಡಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜಕೀಯ ವಿರೋಧಿಗಳ ಬಗ್ಗೆಯೂ ಗೌರವ, ಸಹನೆ ಮತ್ತು ಘನತೆಯಿಂದ ನಡೆದುಕೊಳ್ಳುವುದು ನಾಯಕತ್ವದ ಲಕ್ಷಣವಾಗಬೇಕು ಎಂದಿದ್ದಾರೆ. ರಾಹುಲ್ ಗಾಂಧಿ ಸಾರ್ವಜನಿಕವಾಗಿ ಮುಕ್ತ ಚರ್ಚೆಗೆ ಪ್ರಧಾನಿ ಅವರಿಗೆ ನೀಡಿರುವ ಸವಾಲನ್ನು ಬೆಂಬಲಿಸಿರುವ ಅವರು, ಸಂಸತ್ತಿನಲ್ಲಿ ಅಥವಾ ಸಾರ್ವಜನಿಕ ವೇದಿಕೆಯಲ್ಲಿ ಇಂತಹ ಚರ್ಚೆ ನಡೆಯಲು ಏನು ತೊಂದರೆ ಎಂದು ಪ್ರಶ್ನಿಸಿದ್ದಾರೆ.

ಜನರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಬೇಕು

ದೆಹಲಿ ವಾಯುಮಾಲಿನ್ಯ, ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಸಮಸ್ಯೆಗಳನ್ನು ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ ಬಳಸುವ ಬದಲು, ಎಲ್ಲ ಪಕ್ಷಗಳೂ ಒಟ್ಟಾಗಿ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. ಹಿಂದಿನ ಸರ್ಕಾರಗಳ ಆಡಳಿತವನ್ನು ಮುಂದಿಟ್ಟುಕೊಂಡು ಇಂದಿನ ಸಮಸ್ಯೆಗಳಿಂದ ಗಮನ ಬೇರೆಡೆ ಸೆಳೆಯಬಾರದು. ದೇಶದ ಅಭಿವೃದ್ಧಿ ಮತ್ತು ಜನರ ಸಮಸ್ಯೆಗಳ ಬಗ್ಗೆ ಅರ್ಥಪೂರ್ಣ ಚರ್ಚೆ ನಡೆಯಬೇಕು ಎಂದು ಸ್ಯಾಮ್ ಪಿತ್ರೋಡಾ ಅಭಿಪ್ರಾಯಪಟ್ಟಿದ್ದಾರೆ. ಸ್ಯಾಮ್

ಇದನ್ನೂ ನೋಡಿ: ಟಿಪ್ಪು ಇತಿಹಾಸ ಅಳಿಸಲು ಸಾಧ್ಯವಿಲ್ಲ: ಬಿಜೆಪಿಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *