ರಾಜ್ಯದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳೇ ಇಲ್ಲ! ತ್ರಿಪುರ ಸರ್ಕಾರದ ವಿರುದ್ಧ ಮಾಜಿ ಸಿಎಂ ಮಾಣಿಕ್ ಸರ್ಕಾರ್ ವಾಗ್ದಾಳಿ | Manik Sarkar

Please follow and like us:

ಅಗರ್ತಲಾ: ತ್ರಿಪುರದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಐ(ಎಂ) ಹಿರಿಯ ನಾಯಕ ಮಾಣಿಕ್ ಸರ್ಕಾರ್ (Manik Sarkar) ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಜನರಿಗೆ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಹಕ್ಕುಗಳು ಸಿಗುತ್ತಿಲ್ಲ. ಸರ್ಕಾರ ಸರ್ವಾಧಿಕಾರಿ ಧೋರಣೆಯಿಂದ ಆಡಳಿತ ನಡೆಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಇಂದು ಅಗರ್ತಲಾದ ಓರಿಯಂಟ್ ಚೌಮೌಹನಿಯಲ್ಲಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU) ತ್ರಿಪುರ ರಾಜ್ಯ ಸಮಿತಿಯ ನೇತೃತ್ವದಲ್ಲಿ ಕಾರ್ಮಿಕರ ಬೃಹತ್ ರ‍್ಯಾಲಿ ಆಯೋಜಿಸಲಾಗಿತ್ತು. ಕಾರ್ಮಿಕರ ಸಮಸ್ಯೆಗಳು, ಪ್ರಜಾಪ್ರಭುತ್ವದ ಹಕ್ಕುಗಳು ಹಾಗೂ ರಾಜ್ಯದ ರಾಜಕೀಯ ಪರಿಸ್ಥಿತಿ ಕುರಿತು ರ‍್ಯಾಲಿಯಲ್ಲಿ ಚರ್ಚಿಸಲಾಯಿತು.

ಕಾರ್ಯಕ್ರಮದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಜಿತೇಂದ್ರ ಚೌಧರಿ, ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್, ಸಿಐಟಿಯು ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಎ. ಕರೀಂ, ಅಧ್ಯಕ್ಷ ಸುದೀಪ್ ದತ್ತಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಶಂಕರ್ ದತ್ತಾ ಹಾಗೂ ಮಹಿಳಾ ಕಾರ್ಮಿಕ ನಾಯಕಿ ಪಂಚಾಲಿ ಭಟ್ಟಾಚಾರ್ಯ ಸೇರಿದಂತೆ ಹಲವು ಗಣ್ಯರು ಮಾತನಾಡಿದರು. ಸಿಐಟಿಯು ರಾಜ್ಯಾಧ್ಯಕ್ಷ ಮಾಣಿಕ್ ಡೇ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: ಸಂವಿಧಾನವನ್ನು ಜಾರಿಗೆ ತರುವಲ್ಲಿ ಶಾಸಕಾಂಗ, ಕಾರ್ಯಾಂಗ ಎಡವಿವೆ: ಹಿರಿಯ ವಕೀಲ ರಂಜನ್ ರಾವ್

ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಣಿಕ್ ಸರ್ಕಾರ್, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು. ಜನರ ಮೇಲೆ ನಡೆಯುತ್ತಿರುವ ದಾಳಿಗಳು ಭ್ರಷ್ಟ ಮತ್ತು ಸರ್ವಾಧಿಕಾರಿ ಸರ್ಕಾರದ ಆಡಳಿತ ವೈಖರಿಯನ್ನು ತೋರಿಸುತ್ತಿವೆ. ಈ ಪರಿಸ್ಥಿತಿ ಹೆಚ್ಚು ದಿನ ಮುಂದುವರಿಯಲು ಸಾಧ್ಯವಿಲ್ಲ ಎಂದು ಹೇಳಿದರು.

ಇದನ್ನೂ ನೋಡಿ: ಚುನಾವಣಾ ಭರವಸೆಗಳ ಜಾರಿಗೆ ಪಟ್ಟು: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಅಲ್ಪಸಂಖ್ಯಾತರು, ಶೋಷಿತರ ಆಕ್ರೋಶ

ಜನರಿಗೆ ಈಗಿನ ಪರಿಸ್ಥಿತಿಯ ಅರಿವಿದೆ. ಸರ್ಕಾರದ ಆಡಳಿತದ ಬಗ್ಗೆ ಜನರಲ್ಲಿ ಜಾಗೃತಿ ಹೆಚ್ಚುತ್ತಿರುವುದೇ ಆಡಳಿತ ಪಕ್ಷದ ಆತಂಕಕ್ಕೆ ಕಾರಣವಾಗಿದೆ. ಅಧಿಕಾರದಲ್ಲಿ ಮುಂದುವರಿಯಲು ಸರ್ಕಾರ ಚುನಾವಣಾ ಪ್ರಕ್ರಿಯೆಯನ್ನೇ ಅಣಕಿಸುವ ಪ್ರಯತ್ನ ಮಾಡುತ್ತಿದೆ. ಆದರೆ ಜನರೇ ಇಂತಹ ಪ್ರಯತ್ನಗಳನ್ನು ವಿರೋಧಿಸಿ ಅದಕ್ಕೆ ಅಂತ್ಯ ಹಾಡಲಿದ್ದಾರೆ ಎಂದು ಮಾಣಿಕ್ ಸರ್ಕಾರ್ ಹೇಳಿದರು.

Please follow and like us:
Donate Janashakthi Media

Leave a Reply

Your email address will not be published. Required fields are marked *