ರಾಜಸ್ಥಾನದಲ್ಲಿ ಬಿಜೆಪಿಗೆ ಮರ್ಮಾಘಾತ: ರಾಜಸ್ಥಾನ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಬ್ಬರ!

Please follow and like us:

ರಾಜಸ್ಥಾನ: ರಾಜಸ್ಥಾನದ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ಭಾರೀ ಹಿನ್ನಡೆಯಾಗಿದ್ದು, ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸಿದೆ. ಶುಕ್ರವಾರ ನಡೆದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದತ್ತ ಸಾಗಿದ್ದು, ರಾಜ್ಯದಲ್ಲಿ ಬಿಜೆಪಿಯ ಜನಪ್ರಿಯತೆ ಕುಸಿಯುತ್ತಿರುವ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ. ಸ್ವತಂತ್ರ ಅಭ್ಯರ್ಥಿಗಳೂ ಗಮನಾರ್ಹ ಸಾಧನೆ ಮಾಡಿದ್ದಾರೆ.  ಕಾಂಗ್ರೆಸ್ 

ಸಂಜೆ 7 ಗಂಟೆಯ ವೇಳೆಗೆ ಪ್ರಕಟವಾದ ಫಲಿತಾಂಶದ ಪ್ರಕಾರ, ಒಟ್ಟು 7,543 ಪಂಚಾಯತ್ ಸಮಿತಿ ಸ್ಥಾನಗಳ ಪೈಕಿ ಕಾಂಗ್ರೆಸ್ 3,712 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ 2,193 ಸ್ಥಾನಗಳಿಗೆ ತೃಪ್ತಿಪಟ್ಟಿದೆ. ಇನ್ನು 1,257 ಜಿಲ್ಲಾ ಪರಿಷತ್ ಸ್ಥಾನಗಳಲ್ಲಿ ಕಾಂಗ್ರೆಸ್ 637 ಸ್ಥಾನಗಳನ್ನು ತನ್ನದಾಗಿಸಿಕೊಂಡಿದ್ದು, ಬಿಜೆಪಿ 308 ಸ್ಥಾನಗಳನ್ನು ಮಾತ್ರ ಗೆದ್ದಿದೆ. ಮತ ಎಣಿಕೆ ಮುಂದುವರಿದಿದ್ದ ಸಂದರ್ಭದಲ್ಲಿ ಸ್ವತಂತ್ರ ಅಭ್ಯರ್ಥಿಗಳೂ ಉತ್ತಮ ಸಾಧನೆ ಮಾಡಿದ್ದರು.

ಇದಕ್ಕೂ ಮೊದಲು ಸೆಪ್ಟೆಂಬರ್‌ನಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಬಿಜೆಪಿ ನಿರೀಕ್ಷಿತ ಸಾಧನೆ ಮಾಡಿರಲಿಲ್ಲ. ಒಟ್ಟಾರೆ ಮುನ್ನಡೆ ಕಾಯ್ದುಕೊಂಡಿದ್ದರೂ ಹಲವು ಪ್ರಮುಖ ಕ್ಷೇತ್ರಗಳಲ್ಲಿ ಸೋಲು ಕಂಡಿತ್ತು. ಇದರ ಬೆನ್ನಲ್ಲೇ ವಿಧಾನ ಪರಿಷತ್ ಚುನಾವಣೆಗಳಲ್ಲೂ ವಾರಾಣಸಿ ಮತ್ತು ನಾಗಪುರದಂತಹ ಬಿಜೆಪಿಯ ಭದ್ರಕೋಟೆಗಳಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿತ್ತು.

ರಾಜಸ್ಥಾನದ ಗ್ರಾಮೀಣ ಚುನಾವಣೆಯ ಫಲಿತಾಂಶ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರ ಆಡಳಿತದ ಮೇಲೆಯೂ ಪ್ರಶ್ನೆಗಳನ್ನು ಎತ್ತುವ ಸಾಧ್ಯತೆಯಿದೆ. 2023ರ ವಿಧಾನಸಭಾ ಚುನಾವಣೆಯ ಬಳಿಕ ಬಿಜೆಪಿ ಹೈಕಮಾಂಡ್ ಹಿರಿಯ ನಾಯಕಿ ವಸುಂಧರಾ ರಾಜೆ ಸೇರಿದಂತೆ ಹಲವು ಪ್ರಮುಖ ನಾಯಕರನ್ನು ಬದಿಗಿಟ್ಟು, ಮೊದಲ ಬಾರಿಗೆ ಶಾಸಕರಾಗಿದ್ದ ಭಜನ್ ಲಾಲ್ ಶರ್ಮಾ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಿತ್ತು. ಆದರೆ, ರಾಜ್ಯದಲ್ಲಿ ಆಡಳಿತ ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ ಎಂಬ ಆತಂಕವನ್ನು ಬಿಜೆಪಿಯ ಕೆಲವು ನಾಯಕರು ಖಾಸಗಿಯಾಗಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಈ ರಾಜಕೀಯ ಬೆಳವಣಿಗೆಗಳು 2028ರ ವಿಧಾನಸಭಾ ಚುನಾವಣೆಗೂ ಮಹತ್ವ ಪಡೆದುಕೊಂಡಿವೆ. ರಾಜಸ್ಥಾನ ಮಾತ್ರವಲ್ಲದೆ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲೂ 2028ರಲ್ಲಿ ಚುನಾವಣೆ ನಡೆಯಲಿದ್ದು, ಈ ರಾಜ್ಯಗಳ ಫಲಿತಾಂಶ 2029ರ ಲೋಕಸಭಾ ಚುನಾವಣೆಯ ಮುನ್ನ ರಾಜಕೀಯ ವಾತಾವರಣದ ಸೂಚಕವಾಗಲಿದೆ.

ಇದನ್ನೂ ಓದಿ: ಪಂಜಾಬ್ ರೈತರ ಪರ ಶಿವರಾಜ್ ಸಿಂಗ್ ಬ್ಯಾಟಿಂಗ್: ಬಿಜೆಪಿ-ಕಾಂಗ್ರೆಸ್‌ಗೆ ಕೇಜ್ರಿವಾಲ್ ತಿರುಗೇಟು! | Arvind Kejriwa

ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಗ್ರಾಮೀಣ ಭಾಗಗಳಲ್ಲಿ ಜನರು ತೀವ್ರ ಅಸಮಾಧಾನಗೊಂಡಿದ್ದಾರೆ ಎಂದು ಹೇಳಿದ್ದಾರೆ. ಗ್ರಾಮಗಳಲ್ಲೂ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ, ಭ್ರಷ್ಟಾಚಾರ ಹೆಚ್ಚಾಗಿದೆ ಮತ್ತು ಬಿಜೆಪಿ ಸುಳ್ಳು ಭರವಸೆಗಳನ್ನು ನೀಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಕಾಂಗ್ರೆಸ್ ಕೂಡ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ, ಬಿಜೆಪಿಯ ಭ್ರಷ್ಟಾಚಾರ ಮತ್ತು ಕಾನೂನು ಸುವ್ಯವಸ್ಥೆಯ ವೈಫಲ್ಯದಿಂದ ಬೇಸತ್ತ ಜನರು ಕಾಂಗ್ರೆಸ್‌ಗೆ ಭರ್ಜರಿ ಗೆಲುವು ನೀಡಿದ್ದಾರೆ ಎಂದು ಹೇಳಿದೆ. ಈ ಫಲಿತಾಂಶ ಬಿಜೆಪಿಯ ರಾಜ್ಯ ನಾಯಕತ್ವದ ಬದಲಾವಣೆಗೆ ಒತ್ತಡ ಹೆಚ್ಚಿಸುವ ಸಾಧ್ಯತೆಯೂ ಇದೆ.

ಇದನ್ನೂ ನೋಡಿ: ಚುನಾವಣಾ ಭರವಸೆಗಳ ಜಾರಿಗೆ ಪಟ್ಟು: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಅಲ್ಪಸಂಖ್ಯಾತರು, ಶೋಷಿತರ ಆಕ್ರೋಶ

Please follow and like us:
Donate Janashakthi Media

Leave a Reply

Your email address will not be published. Required fields are marked *