ಸಾರ್ವಜನಿಕ ಅರೋಗ್ಯ ಕ್ಷೇತ್ರವನ್ನು ಬಲಪಡಿಸಲು ಜನವಾದಿ ಮಹಿಳಾ ಸಂಘಟನೆಯಿಂದ ಪ್ರತಿಭಟನೆ

ಸಾರ್ವಜನಿಕ ಅರೋಗ್ಯ ಕ್ಷೇತ್ರವನ್ನು ಬಲಪಡಿಸಲು ಒತ್ತಾಯಿಸಿ ಜುಲೈ 23 ನ್ನು ರಾಷ್ಟ್ರೀಯ ಬೇಡಿಕೆ ದಿನವನ್ನಾಗಿ ಆಚರಿಸಲಾಗಿದೆ ಎಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷರಾದ ದೇವಿಯವರು ತಿಳಿಸಿದ್ದಾರೆ.

ಕೋವಿಡ್ 19 ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮತ್ತು ಅದರಿಂದ ಜನಸಾಮಾನ್ಯರು ಅದರಲ್ಲಿಯೂ ಮಹಿಳೆಯರು ತೀವ್ರ ತೊಂದರೆಗೆ ಒಳಗಾಗಿದ್ದಾರೆ.
ಕೊವಿಡ್ ಬಾಧೆಯ ಜೊತೆಗೆ ಕೊವಿಡೇತರ ಸಮಸ್ಯೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ.
ಈಗ ಸರಕಾರವು ಗಂಭೀರವಾದ ಕ್ರಮಗಳನ್ನು ಕೈಗೊಳ್ಳದಿದ್ದರೆ ಬಹು ಸಂಖ್ಯಾತ ಮಹಿಳೆಯರು ತೀವ್ರವಾದ ಆರೋಗ್ಯ ಸಮಸ್ಯೆಗಳಿಗೆ ಸಿಲುಕುತ್ತಾರೆ. ಇದಕ್ಕೆ ಸರಕಾರದ ವೈಫಲ್ಯವೆ ಕಾರಣ ಎಂದು ದೇವಿಯವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಕೋವಿಡ್ ಚಿಕಿತ್ಸೆಗಳನ್ನು ಉಚಿತವಾಗಿ ಸಾರ್ವತ್ರಿಕ ವಾಗಿ ನೀಡಬೇಕು. ಕೋವಿಡೇತರ ಅರೋಗ್ಯದ ಸಮಸ್ಯೆಗಳ ಚಿಕಿತ್ಸೆಗೆ ಪರ್ಯಾಯ ವ್ಯವಸ್ಥೆ ಮಾಡಬೇಕು. ಕೋವಿಡ್ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆ ಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಪ್ರದೇಶವಾರು ವೈದ್ಯಕೀಯ ಸೌಲಭ್ಯಕ್ಕಾಗಿ ಸಂಚಾರಿ ಆರೋಗ್ಯ ವ್ಯವಸ್ಥೆ ಕಲ್ಪಿಸಬೇಕು. ವೈದ್ಯಕೀಯ ಸಿಬ್ಬಂದಿಗಳು ಮತ್ತು ಮುಂಚೂಣಿಯ ಕೋವಿಡ್ ವಾರಿಯರ್ಸ್‌ ಗಳಿಗೆ ಸುರಕ್ಷ ಸೌಲಭ್ಯ ನೀಡಬೇಕು. ಆಶಾ ಅಂಗನವಾಡಿ ಸಿಬ್ಬಂದಿಗಳಿಗೆ ಸೂಕ್ತ ವ್ಯವಸ್ಥೆ ಮತ್ತು ವಿಶೇಷ ವೇತನ ನೀಡಬೇಕು. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವೈದ್ಯಕೀಯ ಸಿಬ್ಬಂದಿ ನೇಮಕ ಮಾಡಬೇಕು. ಗರ್ಭಿಣಿ ಬಾಣಂತಿಯರು ಮಕ್ಕಳ ಪಾಲನೆಗೆ ಅಗತ್ಯವಾದ ಮಾತೃಶ್ರಿ ಯೋಜನೆ ಮುಂದುವರೆಸಬೇಕು. ಮಹಿಳೆಯರ ಹೆರಿಗೆ ಸಂಬಂಧಿತ ಸಮಸ್ಯೆಗಳಿಗೆ ಪ್ರತ್ಯೇಕ ಅಂಬ್ಯಲೆನ್ಸ್ ವ್ಯವಸ್ಥೆ ಮಾಡಬೇಕು. ಸುರಕ್ಷಿತ ಸಂಚಾರಿ ಕೋವಿಡ್ ಟೆಸ್ಟ್ ವ್ಯವಸ್ಥೆ ಮಾಡಬೇಕು. ಸುರಕ್ಷಾ ಕ್ರಮಗಳನ್ನು ಅನುಸರಿಸಿ ಪೌಷ್ಟಿಕ ಆಹಾರ ಪೂರೈಕೆಯ ಮೂಲಕ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಮುಂದಾಗಬೇಕು ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಕಾರ್ಯದರ್ಶಿ ಗೌರಮ್ಮ ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *