ಸೆ.21 ರಿಂದ 30ರ ವರೆಗೆ  ರಾಜ್ಯ ವಿಧಾನಮಂಡಲ ಅಧಿವೇಶನ

  • ಬೆಂಗಳೂರು ಗಲಭೆ, ಅತಿವೃಷ್ಟಿ ಹಾನಿ ಚರ್ಚೆ
  • ಎಪಿಎಂಸಿ, ಭೂಸುಧಾರಣೆ ತಿದ್ದುಪಡಿ ಸುಗ್ರೀವಾಜ್ಞೆಗಳಿಗೆ ಅಂಗೀಕಾರ

 

ಬೆಂಗಳೂರು: ರಾಜ್ಯ ಮುಂಗಾರು ಅಧಿವೇಶನ ಸೆಪ್ಟೆಂಬರ್ 21 ರಿಂದ 30 ವರೆಗೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. 

ಕೊರೊನಾ ಸೋಂಕು ಕಾರಣದಿಂದಾಗಿ ಕಳೆದ ಬಾರಿ ಬೇಸಿಗೆ ಅಧಿವೇಶನವನ್ನು ರಾಜ್ಯದಲ್ಲಿ ಮುಂದೂಡಲಾಗಿತ್ತು. ವೇಳೆ ಸುಗ್ರೀವಾಜ್ಞೆ ಮೂಲಕ ಬಿ.ಎಸ್. ಯಡಿಯೂರಪ್ಪ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆ ಮತ್ತು ಭೂ ಸುಧಾರಣಾ ಕಾಯ್ದೆಯನ್ನು ಅಂಗೀಕಾರ ಪಡೆದಿತ್ತು. ಇದು ಸಾಮಾನ್ಯವಾಗಿ ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ವಿರೋಧ ಪಕ್ಷಗಳ ಅಭಿಪ್ರಾಯ ಕೇಳದೆ ಚರ್ಚೆಯಾಗದೆ ಈ ಎರಡೂ ಕಾಯ್ದೆಯನ್ನು ಕೊರೋನಾ ಸಂದರ್ಭದಲ್ಲಿ ಸುಗ್ರೀವಾಜ್ಞೆ ಮೂಲಕ ಅಂಗೀಕಾರಪಡೆಯುವ ಅಗತ್ಯ ಏನಿತ್ತು? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಕಟುವಾಗಿ ವಿಮರ್ಶೆ ಮಾಡಿದ್ದರು. ಅಲ್ಲದೆ ಶೀಘ್ರದಲ್ಲೇ ಅಧಿವೇಶನ ಕರೆಯುವಂತೆ ಒತ್ತಾಯಿಸಿದ್ದರು.

ಹೀಗಾಗಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧಾನಸಭೆ ಅಧಿವೇಶನ ನಡೆಸುವ ಕುರಿತು ಚರ್ಚೆ ನಡೆಸಲಾಗಿತ್ತು. ಈ ವೇಳೆ ಎಲ್ಲಾ ಸಚಿವರುಗಳ ಅಭಿಪ್ರಾಯ ಪಡೆದು ಕೊನೆಗೆ ಸೆಪ್ಟೆಂಬರ್‌ 21 ರಿಂದ 30ರ ವರೆಗೆ ಮುಂಗಾರು ಅಧಿವೇಶನ ನಡೆಸಲು ಒಮ್ಮತದಿಂದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

 

Donate Janashakthi Media

Leave a Reply

Your email address will not be published. Required fields are marked *