ಎಸ್ಸಿ–ಎಸ್ಟಿ ಉಪ ವರ್ಗೀಕರಣ: ರಾಜ್ಯಗಳಿಗೆ ಅಧಿಕಾರ- ಸುಪ್ರೀಂ ಅಭಿಪ್ರಾಯ

  • ಪಂಜಾಬ್‌ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ

 

 

ನವದೆಹಲಿ:  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪ ವರ್ಗೀಕರಣವನ್ನು ಮತ್ತಷ್ಟು ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇಲ್ಲ ಎನ್ನುವ ತೀರ್ಪನ್ನು ಮರುಪರಿಶೀಲಿಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪ ವರ್ಗೀಕರಣಗೊಳಿಸಲು ಸರ್ಕಾರಕ್ಕೆ ಅಧಿಕಾರ ನೀಡುವ ಕಾನೂನನ್ನು ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ ರದ್ದುಪಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಪಂಜಾಬ್‌ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಅರುಣ ಮಿಶ್ರಾ ನೇತೃತ್ವದ ಇಂದಿರಾ ಬ್ಯಾನರ್ಜಿ, ವಿನೀತ್‌ ಶರಣ್‌, ಎಂ.ಆರ್‌. ಶಾ ಮತ್ತು ಅನಿರುದ್ಧ ಬೋಸ್ ಇದ್ದ ಪೀಠವು ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ.

ಈ ವಿಷಯದ ಬಗ್ಗೆ ಸರಿಯಾದ ನಿರ್ಧಾರ ಕೈಗೊಂಡಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪವರ್ಗೀಕರಣವನ್ನು ಕೈಗೊಳ್ಳಲು ರಾಜ್ಯ ಸರ್ಕಾರಗಳು ಕಾನೂನು ರೂಪಿಸಿಕೊಳ್ಳಬಹುದು. ಹೀಗಾಗಿ, ಮುಂದಿನ ನಿರ್ದೇಶನಕ್ಕಾಗಿ ಮರುಪರಿಶೀಲಿಸಲು ಮುಖ್ಯ ನ್ಯಾಯಮೂರ್ತಿ ಅವರ ಮುಂದೆ ಈ ವಿಷಯವನ್ನು ಮಂಡಿಸುವಂತೆ ನ್ಯಾಯಾಲಯ ಹೇಳಿದೆ.

ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕೆ ಮೀಸಲಾತಿ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ 2004ರಲ್ಲಿ ಸಂವಿಧಾನ ಪೀಠವು ಈ ಬಗ್ಗೆ ತೀರ್ಪು ನೀಡಿತ್ತು.

Donate Janashakthi Media

Leave a Reply

Your email address will not be published. Required fields are marked *