ಶಾಸಕಿ ಅಂಜಲಿ ನಿಂಬಾಳ್ಕರ್‌ಗೆ ಆಹ್ವಾನ ನೀಡದೆ ಕಾರ್ಯಕ್ರಮ: ವಿರೋಧ

  • ಸಂಸದ ಅನಂತಕುಮಾರ್ ಹೆಗಡೆ ಕಾರಿಗೆ ಮುತ್ತಿಗೆ   
  • 50ಕ್ಕೂ  ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ

 

ಖಾನಾಪುರ (ಬೆಳಗಾವಿ): ಸ್ಥಳೀಯ ಶಾಸಕಿ ಅಂಜಲಿ ನಿಂಬಾಳ್ಕರ್‌ಗೆ ಆಃವಾನ ನೀಡದೆ ಅನಂತಕುಮಾರ್ ಹೆಗಡೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

 ‘ಕ್ಷೇತ್ರದ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಅವರು ಕೋವಿಡ್–19ನಿಂದಾಗಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಬರಲು ಸಾಧ್ಯವಾಗದಿರುವ ಸಮಯವನ್ನೇ ನೋಡಿಕೊಂಡು ಕಾರ್ಯಕ್ರಮ ಮಾಡಲಾಗುತ್ತಿದೆ. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ನೆರವೇರಿಸಲಾಗುತ್ತಿದೆ. ಇದಕ್ಕೆ ನಮ್ಮ ವಿರೋಧವಿದೆ. ಶಾಸಕರು ಗುಣಮುಖರಾಗುವವರೆಗೂ ಮುಂದೂಡಬೇಕು’ ಎಂದು ಒತ್ತಾಯಿಸಿದರು. ಜೊತೆಗೆ ‘ಭೂಮಿ ಪೂಜೆಗೆ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಆಹ್ವಾನ ನೀಡಿಲ್ಲ’ ಎಂದು ಆರೋಪಿಸಿದರು.

ಸಂಸದರು ಬರುವ ಮುನ್ನವೇ ಪ್ರತಿಭಟನೆ ಆರಂಭಿಸಿ ಸಂಸದರ ಕಾರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ  50ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಪೊಲೀಸ್ ಠಾಣೆ ಹಾಗೂ ತಹಶೀಲ್ದಾರ್‌ ಕಚೇರಿ ಆವರಣಕ್ಕೆ ಅವರನ್ನು ಕರೆದೊಯ್ದರು. ತಮ್ಮನ್ನು ವಶಕ್ಕೆ ಪಡೆದ ಪೊಲೀಸರ ಕ್ರಮದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Donate Janashakthi Media

Leave a Reply

Your email address will not be published. Required fields are marked *