ನಟ ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ

  • ಮೈಸೂರು ತಾಲ್ಲೂಕಿನ ಹಾಲಾಳು ಗ್ರಾಮದಲ್ಲಿ ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣಕ್ಕೆ ಯಡಿಯೂರಪ್ಪ ಶಂಕುಸ್ಥಾಪನೆ

ಮೈಸೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ಚಲನಚಿತ್ರ ನಟ ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣಕ್ಕೆ ಕೊನೆಗೂ ಮೂಹೂರ್ತ ಕೂಡಿಬಂದಿದೆ. ಮೈಸೂರು ತಾಲ್ಲೂಕಿನ ಹಾಲಾಳು ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ‘ಡಾ.ವಿಷ್ಣುವರ್ಧನ್ ಸ್ಮಾರಕ ಭವನ’ ಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ವರ್ಚುವಲ್ ವೇದಿಕೆ ಮೂಲಕ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿದರು.

ಭಾರತಿ ವಿಷ್ಣುವರ್ಧನ್, ಅನಿರುದ್ಧ್, ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪರಿಮಳಾ ಶ್ಯಾಂ, ಮುಡಾ ಆಧ್ಯಕ್ಷ ಎಚ್.ವಿ.ರಾಜೀವ್ ಪಾಲ್ಗೊಂಡರು ಐದು ಎಕರೆ ಜಮೀನಿನಲ್ಲಿ ಸ್ಮಾರಕ ಭವನ ನಿರ್ಮಾಣವಾಗಲಿದೆ. ಸರ್ಕಾರ 2010-11 ರ ಬಜೆಟ್ ನಲ್ಲಿ 11 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಜಾಗಕ್ಕೆ ಸಂಬಂಧಿಸಿದಂತೆ ತಕರಾರು ಇದ್ದ ಕಾರಣ ನಿರ್ಮಾಣ ಕಾರ್ಯ ತಡವಾಗಿದೆ.

ವರ್ಚ್ಯುವಲ್‌ ವೇದಿಕೆ ಮೂಲಕ ಉದ್ಘಾಟಿಸಿದ ಸಿಎಂ ಯಡಿಯೂರಪ್ಪ ಈ ಬಗ್ಗೆ ಟ್ವೀಟ್‌ ಮಾಡಿದ್ದು, “ ಕನ್ನಡನಾಡು ಕಂಡ ಅಪ್ರತಿಮ ಕಲಾವಿದ ದಿವಂಗತ ಡಾ. ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಇಂದು ಆನ್ ಲೈನ್ ಮೂಲಕ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಡಾ. ವಿಷ್ಣುವರ್ಧನ್ ತವರು ಜಿಲ್ಲೆ ಮೈಸೂರಿನಲ್ಲಿ, ಅವರ ಸ್ಮಾರಕ ನಿರ್ಮಾಣವಾಗುತ್ತಿರುವುದು ಔಚಿತ್ಯಪೂರ್ಣವಾಗಿದ್ದು, ಸುಸಜ್ಜಿತ ಸ್ಮಾರಕ ನಿರ್ಮಾಣಕ್ಕೆ ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *