- ಎಸ್ ಬಿಐ ಗ್ರಾಹಕರೆ ಗಮನಿಸಿ 18 ರಿಂದ ವಿತ್ ಡ್ರಾಗೆ ಹೊಸ ನಿಯಮ
ನವದೆಹಲಿ : ಎಸ್ ಬಿ ಐ ದೇಶದ ಅತಿದೊಡ್ಡ ಬ್ಯಾಂಕ್ ಜಾಲ ಹೊಂದಿರುವ ಬ್ಯಾಂಕ್. ತನ್ನ ಗ್ರಾಹಕರು ಹಣ ಪಡೆಯಲು ಹೊಸ ನಿಯಮಗಳನ್ನು ಜಾರಿಗೊಳಿಸುವುದಾಗಿ ತಿಳಿಸಿದೆ.
ಎಸ್ ಬಿಐ ತನ್ನ ಗ್ರಾಹಕರಿಗೆ ದೇಶದ ಎಲ್ಲಾ ಎಟಿಎಂಗಳಲ್ಲಿ ತಮ್ಮ ಖಾತೆಯಲ್ಲಿನ ಹಣವನ್ನು ಒಟಿಪಿ ಆಧಾರಿತವಾಗಿ ಪಡೆಯಲು ಹೊಸ ನಿಯಮವನ್ನು ಇದೇ 18ರಿಂದ ಜಾರಿಗೊಳಿಸಲಿದೆ.
ಗ್ರಾಹಕರು ತಮ್ಮ ಖಾತೆಯಲ್ಲಿನ ಹಣವನ್ನು ಎಂಟಿಎಂ ಮೂಲಕ 10,ಸಾವಿರ ರೂ ಮತ್ತು ಅದಕ್ಕಿಂತ ಹೆಚ್ಚಿನ ಮೊತ್ತವನ್ನು ಪಡೆಯಲು ಈ ಹೊಸ ನಿಯಮವನ್ನು ಪಾಲಿಸಬೇಕು ಎಂದು ಎಸ್ ಬಿಐ ತಿಳಿಸಿದೆ. ಡೆಬಿಟ್ ಕಾರ್ಡ್ ಪಿನ್ನೊಂದಿಗೆ ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಬರುವ ಒಟಿಪಿಯನ್ನು ಇನ್ನು ಮುಂದೆ ಪ್ರತಿ ಬಾರಿ ನಮೂದಿಸಬೇಕಾಗುತ್ತದೆ .
ಎಟಿಎಂನಿಂದ ನಗದು ಹಿಂಪಡೆಯುವಿಕೆಯಲ್ಲಿ ಭದ್ರತಾ ಮತ್ತು ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸಲು ಈ ಸೌಲಭ್ಯವನ್ನು ಜಾರಿಗೊಳಿಸುವುದಾಗಿ ತಿಳಿಸಿದೆ. ಅಲ್ಲದೆ ಎಸ್ ಬಿಐ ಡೆಬಿಟ್ ಕಾರ್ಡ್ದಾರರು ವಂಚಕರಿಗೆ ಬಲಿಯಾಗುವ ಅಪಾಯ ತಪ್ಪಿಸಬಹುದಾಗಿದೆ ಎಂದು ಬ್ಯಾಂಕ್ ಹೇಳಿಕೆಯಲ್ಲಿ ತಿಳಿಸಿದೆ.
ರಾಷ್ಟ್ರೀಯ ಹಣಕಾಸು ಸ್ವಿಚ್ (ಎನ್ಎಫ್ಎಸ್) ಎಸ್ಬಿಐ ಅಲ್ಲದ ಎಟಿಎಂಗಳಲ್ಲಿ ಈ ಕಾರ್ಯವನ್ನು ಅಭಿವೃದ್ಧಿಪಡಿಸಿಲ್ಲ. ಹಾಗಾಗಿ ಒಟಿಪಿ ಆಧಾರಿತ ನಗದು ಹಿಂತೆಗೆದುಕೊಳ್ಳುವ ಸೌಲಭ್ಯವು ಎಸ್ಬಿಐ ಎಟಿಎಂಗಳಲ್ಲಿ ಮಾತ್ರ ಲಭ್ಯವಿರಲಿದೆ.