ರೈತ ವಿರೋಧಿ ಕಾಯ್ದೆ ಖಂಡಿಸಿ ರಸ್ತೆ ತಡೆ  : ಅನ್ನದಾತರ ಆಕ್ರೋಶ

ನೂರಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ

ಬೆಂಗಳೂರು : ಕೋವಿಡ್ 19 ರ ಸಾಂಕ್ರಮಿಕ ರೋಗದ ಸಂಕಷ್ಟದಲ್ಲಿ ಜನರು ಜೀವನ ನಿರ್ವಹಿಸಲಾರದೆ ಆರ್ಥಿಕ ಸಂಕಷ್ಟ ಹೆದುರಿಸುತ್ತಿರುವಾಗ ಅವರ ಸಮಸ್ಯೆಗೆ ಸ್ಪಂದಿಸಬೇಕಾದ ಕೇಂದ್ರ ಸರ್ಕಾರ ಹಿಂಭಾಗಿಲಿನಿಂದ ಅಗತ್ಯವಸ್ತುಗಳ ಕಾಯ್ದೆ, ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗು ವಿದ್ಯುತ್ ಕಾಯ್ದೆಗಳಿಗೆ  ತಿದ್ದುಪಡಿ ತರುವ ಮೂಲಕ ಮಸೂದೆಯನ್ನು ಜಾರಿ ಮಾಡಲಾಗಿದೆ.

ಕೃಷಿಗೆ ಸಂಬಂಧಿಸಿದ ಈ ಮಸೂದೆಗಳನ್ನು ವಿರೋಧಿಸಿ 35ಕ್ಕೂ ಅಧಿಕ ರೈತ ಸಂಘಟನೆಗಳು ಇಂದು ರಾಜ್ಯಾದ್ಯಂತ ಹೆದ್ದಾರಿ ಬಂದ್ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.  ಬೆಂಗಳೂರಿನ ಹೊರವಲಯ ಮತ್ತು ರಾಜ್ಯದ ಪ್ರಮುಖ ಹೆದ್ದಾರಿಗಳಲ್ಲಿ ರಸ್ತೆ ತಡೆ ನಡೆಸಿ ರೈತರು ಪ್ರತಿಭಟನೆ ನಡೆದಿದ್ದು ಮೈಸೂರುಬ್ಯಾಂಕ್ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯು ಹೆಚ್ಚು ಕಾವು ಪಡೆಯುತ್ತಿದ್ದಂತೆ ಅಲ್ಲಿನ ಪ್ರಮುಖ ಮುಖಂಡರಾದ ಕರ್ನಾಟಕ ಪ್ರಾಂತ ರೈತ ಸಂಘಟನೆಯ ಮಾರುತಿ ಮಾನಪಡೆ, ಕರ್ನಾಟಕ ರಾಜ್ಯ ರೈತ ಸಂಘಟನೆಯ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ರಾಜ್ಯ ಕಬ್ಬು ಬೆಳೆಗಾರರ ಸಂಘದ ಕುರಬುರ ಶಾಂತಕುಮಾರ್, ಕವಿತಾ ಕುರಗುಂಟಿ, ಎನ್ ವೆಂಕಟೇಶ್, ಸಿಐಟಿಯುನ ರಾಜ್ಯಾಧ್ಯಕ್ಷರಾದ ಎಸ್ ವರಲಕ್ಷ್ಮಿ, ಎಸ್ ಎಫ್ ಐ ನ ರಾಜ್ಯ ಉಪಾಧ್ಯಕ್ಷರಾದ ಶಿವಕುಮಾರ್ ಮ್ಯಾಗಳಮನಿ, ಭೀಮನಗೌಡ ಸೇರಿದಂತೆ ಅನೇಕ ಕಾರ್ಯಕರ್ತರನ್ನು ಪೊಲೀಸರು ರಸ್ತೆ ತಡೆದು ಬಂಧಿಸಿದ್ದಾರೆ.

ಇದನ್ನು ಓದಿ : ಕಾರ್ಮಿಕರನ್ನು ಗುಲಾಮರಾಗಿಸುವ ಆಟ ಸಾಗದು

ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘಗಳು, ಕರ್ನಾಟಕ ಪ್ರಾಂತ ರೈತ ಸಂಘ, ರಾಜ್ಯ ಹಸಿರು ಸೇನೆ, ಅಖಿಲ ಭಾರತ ಕಿಸಾನ್ ಸಭ, ರೈತ ಕೃಷಿ ಕಾರ್ಮಿಕರ ಸಂಘ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಆಶಾ ಕಾರ್ಯಕರ್ತೆ ಸಂಘ, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ, ಸಿಐಟಿಯು, ಕಾರ್ಮಿಕ ಸಂಘಟನೆ ಮತ್ತುಇತರೆ ಸಂಘಟನೆಗಳು ಭಾಗವಹಿಸಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅನ್ನದಾತರು ನಡೆಸುತ್ತಿರುವ ಐದನೇ ದಿನದ ಅಹೋರಾತ್ರಿ  ಪ್ರತಿಭಟನೆಗೆ ಸ್ಪಂದಿಸದ ಸರ್ಕಾರದ ಈ ನಡೆಗೆ ಪ್ರತಿಭಟನಾಕಾರರು ಅಸಮಾಧಾನ ಹೊರಹಾಕಿದ್ದಾರೆ.

 

 

Donate Janashakthi Media

Leave a Reply

Your email address will not be published. Required fields are marked *