– ಪುಸ್ತಕ ಬಿಡುಗಡೆ, ವಿಚಾರಗೋಷ್ಟಿಯಲ್ಲಿ ಸುಪ್ರೀಂಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ವಿ.ಗೋಪಾಲಗೌಡ
ಬೆಂಗಳೂರು: ಸಾರ್ವಜನಿಕ ಉದ್ಯಮಗಳನ್ನು ಖಾಸಗೀಕರಣ ಮಾಡುವುದು ಸಂವಿಧಾನ ವಿರೋಧಿ ಕ್ರಮ ಎಂದು ಸುಪ್ರೀಂಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ವಿ.ಗೋಪಾಲಗೌಡ ಆರೋಪಿಸಿದರು.
ಸೋಮವಾರ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಹೊರತಂದಿರುವ ಭಾರತದ ಸ್ವಾವಲಂಬನೆ ಮಾರುವುದನ್ನು ಆತ್ಮನಿರ್ಭರ ಎನ್ನಬಹುದೇ? ಪುಸ್ತಕವನ್ನು ವರ್ಚುವಲ್ ವೇದಿಕೆಯಲ್ಲಿ ಬಿಡುಗಡೆ ಮಾಡಿ ಮಾತನಾಡಿದ ನ್ಯಾಯಮೂರ್ತಿ ಗೋಪಾಲಗೌಡರು, ಸಾರ್ವಜನಿಕ ಉದ್ಯಮಗಳನ್ನು ಖಾಸಗೀಕರಿಸುವುದು ಸಂವಿಧಾನ ವಿರೋಧಿ ಕ್ರಮ ಎಂದು ಆರೋಪಿಸಿದರು.
ಪುಸ್ತಕ ಬಿಡುಗಡೆ ಕಾರ್ಯಕ್ರಮದ ಭಾಗವಾಗಿ ನಡೆದ ವಿಚಾರ ಗೋಷ್ಠಿಯಲ್ಲಿ ಪ್ರಾಸ್ತಾವಿಕವಾಗಿ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಮಾಡಿದರು. ಬಿಎಸ್ಎನ್ಎಲ್ ಎಂಪ್ಲಾಯೀಸ್ ಯೂನಿಯನ್ ವಲಯ ಕಾರ್ಯದರ್ಶಿ ಹೆಚ್.ವಿ.ಸುದರ್ಶನ್, ವಿಮಾ ನೌಕರರ ಮುಖಂಡರಾದ ಎಸ್.ಕೆ.ಗೀತಾ, ಬ್ಯಾಂಕ್ ನೌಕರರ ಜಂಟಿ ಕಾರ್ಯದರ್ಶಿ ನಾಗರಾಜ ಶಾನಬಾಗ್, ಬೆಮೆಲ್ ನೌಕರರ ಸಂಘದ ಅಧ್ಯಕ್ಷ ದೊಮ್ಮಲೂರು ಶ್ರೀನಿವಾಸರೆಡ್ಡಿ, ಜನಪರ ವೈದ್ಯರಾದ ಡಾ ಅನಿಲ್, ರೈತ ಮುಖಂಡರಾದ ಟಿ.ಯಶವಂತ ಹಾಗೂ ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಎನ್ ಉಮೇಶ್ ಗೋಷ್ಟಿ ಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.
ಸಭೆಯ ಅಧ್ಯಕ್ಷತೆಯನ್ನು ಸಿಐಟಿಯು ರಾಜ್ಯ ಉಪಾಧ್ಯಕ್ಷ ಹೆಚ್.ಎನ್ ಗೋಪಾಲಗೌಡ ವಹಿಸಿದ್ದರು. ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ ಸ್ವಾಗತಿಸಿ ಮತ್ತೊರ್ವ ರಾಜ್ಯ ಕಾರ್ಯದರ್ಶಿ ಪ್ರತಾಪಸಿಂಹ ವಂದನೆಗಳನ್ನು ಸಲ್ಲಿಸಿದರು.