ಮಾಸ್ಕ್ ದಂಡ ಪ್ರಮಾಣವನ್ನು ಒಂದು ಸಾವಿರದಿಂದ  250 ರೂ.ಗೆ ಇಳಿಸಿದ ಸರ್ಕಾರ 

ಬೆಂಗಳೂರು: ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿರುವವರಿಗೆ ಭಾರಿ ದಂಡ ವಿಧಿಸುವುದಾಗಿ ಆದೇಶ ಹೊರಡಿಸಿದ್ದ ಸರ್ಕಾರ ಇದೀಗ ದಂಡದ ಪ್ರಮಾಣವನ್ನು ಇಳಿಸಿದೆ.

ಮಾಸ್ಕ್ ಧರಿಸದವರಿಗೆ ವಿಧಿಸಿದ್ದ ದಂಡ ಪ್ರಮಾಣವನ್ನು ಒಂದು ಸಾವಿರದಿಂದ  250ರೂ. ಗೆ ಕಡಿತಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ನಗರ ಪ್ರದೇಶಗಳಲ್ಲಿ 250 ರೂ. ಹಾಗೂ ಗ್ರಾಮೀಣ ಭಾಗದಲ್ಲಿ  100 ರೂ. ದಂಡ ವಿಧಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಕೋವಿಡ್-19 ಮಾಸ್ಕ್ ದುಬಾರಿ ದಂಡ ಲೂಟಿ ನಿಲ್ಲಿಸಲು ಸಿಪಿಐಎಂ ಒತ್ತಾಯ

ಇತ್ತೀಚಿನ ಆದೇಶದಲ್ಲಿ ಸರ್ಕಾರವು ಮಾಸ್ಕ್ ಧರಿಸದಿದ್ದರೆ ನಗರ ಪ್ರದೇಶದಲ್ಲಿ 1000 ರೂ. ಮತ್ತು ಗ್ರಾಮೀಣ ಪ್ರದೇಶದಲ್ಲಿ 500 ರೂ. ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗಿತ್ತು. ಆದರೆ ಸಾರ್ವಜನಿಕರ ವಿರೋಧ ಮತ್ತು ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ದಂಡದ ಪ್ರಮಾಣವನ್ನು ನಗರ ಪ್ರದೇಶದಲ್ಲಿ 250 ರೂ.ಮತ್ತು ಗ್ರಾಮೀಣ ಪ್ರದೇಶದಲ್ಲಿ 100 ರೂ.ಗೆ ಇಳಿಸಲು ತೀರ್ಮಾನಿಸಲಾಗಿದೆ. ಇದು ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *