ಮುನಿರತ್ನಂ ವಿರುದ್ಧ ಕ್ರಾಂಗ್ರೆಸ್ ನಾಯಕರ ಪ್ರತಿಭಟನೆ

ಬೆಂಗಳೂರು : ನವೆಂಬರ್ 3 ರಂದು ನಡೆಯಲಿರುವ ಆರ್ ಆರ್ ನಗರದ ವಿಧಾನ ಸಭಾ  ಕ್ಷೇತ್ರದ ಉಪಚುನಾವಣೆಯಲ್ಲಿ ಆಡಳಿತ ಮತ್ತು ವಿರೋಧಪಕ್ಷದ ಪ್ರಚಾರ ಜೋರಾಗಿ ನಡೆಯುತಿದೆ. ಗೆಲುಗಿವಾಗಿ ಸಾಕಷ್ಟು ಕಸರತ್ತು ನಡೆಸುತ್ತಿರುವ ಪಕ್ಷಗಳು ಪ್ರಚಾರದ ವೇಳೆ ಕಾಂಗ್ರೆಸ್ ಪಕ್ಷದ ಬೆಂಬಲಿಗರ ಮೇಲೆ ಬಿಜೆಪಿ ಅಭ್ಯರ್ಥಿ ಮುನಿರತ್ನಂ ರವರ ಬೆಂಬಗಲಿಗರು ಹಲ್ಲೆಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇದನ್ನು ವಿರೋಧಿಸಿ ಬಿಜೆಪಿ ಅಭ್ಯರ್ಥಿ ಮುನಿರತ್ನಂ ನಾಯ್ಡು ವಿರುದ್ಧ ಕಾಂಗ್ರೆಸ್ ನಾಯಕರಿಂದ ನಂದಿನಿ ಲೇಔಟ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಘಟನೆಯ ವಿವರ : ಲಕ್ಷ್ಮೀದೇವಿ ನಗರ ಬೂತ್ ನಂಬರ್ 156 ಬಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮ ಅವರ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರಾದ ಜವರೇಗೌಡ, ಕಾರ್ಯಕರ್ತರಾದ  ಚಿಕ್ಕರಾಜು, ರಾಕೇಶ್, ವಿನೋದ್, ರೂಪೇಶ್, ಮಾಲಿಕ್ ಮತ್ತು ಇತರ ಮುಖಂಡರ ಮೇಲೆ ಬಿಜೆಪಿ ಅಭ್ಯರ್ಥಿ ಮುನಿರತ್ನಂ ನಾಯ್ಡು ಬೆಂಬಲಿಗ ವೇಲು ನಾಯ್ಕರ್ ಮತ್ತು 30 ಕ್ಕೂ ಹೆಚ್ಚು ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಬೂತ್ ಮಟ್ಟದಲ್ಲಿ ಮತದಾರರಿಗೆ ಗುರುತಿನ ಚೀಟಿ ವಿತರಣೆ ನಡೆಸಲು ಸಂಗ್ರಹಿಸಿದ್ದ ಮಾಹಿತಿಯ ಪುಸ್ತಕ ಹರಿದು ಹಾಕಿದ್ದಾರೆ ಎಂದು  ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಲು ಲಿಂಕ್ ಕ್ಲಿಕ್ ಮಾಡಿ : ಆರ್ ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನರನ್ನು ಅನರ್ಹಗೊಳಿಸಿ: ಕಾಂಗ್ರೆಸ್ ದೂರು

ಮಾಜಿ ಸಂಸದರಾದ ಧೃವನಾರಯಣ್ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರಚಾರ ಕಾರ್ಯದ ಬಳಿ ತೆರಳಿ ವೇಲು ನಾಯ್ಕರ್ ಮತ್ತು ಸಹಚರರು ಬೆದರಿಕೆ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ  ಹೆಚ್.ಎಂ.ರೇವಣ್ಣ, ಮಾಜಿ ಸಂಸದ ಧೃವ ನಾರಾಯಣ್, ಮಾಜಿ ಶಾಸಕ ಬಾಲರಾಜ್, ಮಾಜಿ ಬಿಬಿಎಂಪಿ ಸದಸ್ಯ ಶಿವರಾಜ್, ಕಾಂಗ್ರೆಸ್ ಮುಖಂಡ ಆರಾಧ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಕಾನೂನು ವಿಭಾಗದ ಸೂರ್ಯ ಮುಕುಂದರಾಜ್, ಚೇತನ್ ಶಂಕರಪ್ಪ ಸೇರಿದಂತೆ ಅನೇಕರಿದ್ದರು.

 

Donate Janashakthi Media

Leave a Reply

Your email address will not be published. Required fields are marked *