ವಿದ್ಯುತ್ ದರ ಏರಿಸಿ ಜನರಿಗೆ ಶಾಕ್ ಕೊಟ್ಟ ಕೆಇಆರ್​ಸಿ; ನ.1ರಿಂದಲೇ ಹೊಸ ದರ ಜಾರಿ

  • ಪ್ರತಿ ಯೂನಿಟ್​ಗೆ 40 ಪೈಸೆ ವಿದ್ಯುತ್ ದರ ಹೆಚ್ಚಳ 

ಬೆಂಗಳೂರು; ಕೊರೋನಾ ಕಾರಣದಿಂದ ತಡೆಹಿಡಿಯಲಾಗಿದ್ದ ವಿದ್ಯುತ್ ದರ ಏರಿಕೆಯನ್ನು ಇದೀಗ ಏರಿಕೆ ಮಾಡಿರುವ ಕೆಇಆರ್ಸಿ (ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ) ರಾಜ್ಯದ ಜನರಿಗೆ ಶಾಕ್ ನೀಡಿದೆ. ಅದರಂತೆ ಹೊಸ ದರ ನವೆಂಬರ್ 1ರಿಂದಲೇ ಅನ್ವಯವಾಗಲಿದೆ.
ಮಾರ್ಚ್ ನಲ್ಲಿ ವಿದ್ಯುತ್ ದರ ಏರಿಕೆಯಾಗಬೇಕಿತ್ತು. ಆದರೆ ಕೊರೋನಾ ಕಾರಣದಿಂದ ದರ ಏರಿಕೆಯನ್ನು ತಡೆ ಹಿಡಿಯಲಾಗಿತ್ತು. ಈಗ ವಿದ್ಯುತ್ ದರವನ್ನು ಪ್ರತಿ ಯೂನಿಟ್​ಗೆ 40 ಪೈಸೆ ಹೆಚ್ಚಳ ಮಾಡಲಾಗಿದೆ. ನವೆಂಬರ್ 1ರಿಂದಲೇ ಹೊಸ ದರ ಜಾರಿಯಾಗಲಿದ್ದು, ಐದು ತಿಂಗಳ ಮಟ್ಟಿಗೆ ಹೊಸ ಪರಿಷ್ಕೃತ ದರ ಇರಲಿದೆ.
ಹೆಚ್ಚುವರಿ ವಿದ್ಯುತ್ ಬಳಕೆಯಾಗಿರುವ ಜೊತೆಗೆ ಥರ್ಮಲ್ ಪವರ್ ಪ್ಲಾಂಟ್ ಸ್ಥಾಪನೆಗೂ ಹೆಚ್ಚು ಖರ್ಚಾಗಿದೆ. ಇದನ್ನು ಸರಿದೂಗಿಸಲು ದರ ಏರಿಕೆ ಮಾಡಲಾಗಿದೆ. ಪ್ರತಿ ಯೂನಿಟ್​ಗೆ 40 ಪೈಸೆ ಹೆಚ್ಚಳ ಮಾಡಲಾಗಿದೆ.

Donate Janashakthi Media

Leave a Reply

Your email address will not be published. Required fields are marked *