ಬೆಂಗಳೂರು; ಉಪಚುನಾವಣೆ ತೀರ್ಪನ್ನು ಪಕ್ಷ ಸಮಚಿತ್ತದಿಂದ ಸ್ವೀಕರಿಸುತ್ತದೆ. ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ದುಡಿದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಸದಾ ಋಣಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಸೋಲಿನ ಹೊಣೆಯನ್ನು ನಾನೇ ಹೊರಲಿದ್ದೇನೆ; ಕೆಪಿಸಿಸಿ ಅಧ್ಯಕ್ಷ ಡಿಕೆಶಿ
ಹಿಂದೊಮ್ಮೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಚುನಾವಣೆಯಲ್ಲಿ ಜನತೆ ಮನ್ನಣೆ ನೀಡಿರಲಿಲ್ಲ. ಕೇವಲ 2 ಸೀಟು ಪಕ್ಷಕ್ಕೆ ಬಂದಿದ್ದ ಕಾಲವೊಂದಿತ್ತು. ಆನಂತರ ಇದೇ ಜನತೆ ಮುಖ್ಯಮಂತ್ರಿ ಮಾಡಿದರು, ಜನಾಶೀರ್ವಾದದಿಂದ ಪ್ರಧಾನಿಯಾದರು. ಉಪಚುನಾವಣೆ ಫಲಿತಾಂಶದಿಂದ ಕುಗ್ಗಿ ಹೋಗದೆ, ಪಕ್ಷವನ್ನು ಸಂಘಟಿಸಿ ಬಲಪಡಿಸುವತ್ತ ಗಮನಹರಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕಳೆದ 15 ತಿಂಗಳಲ್ಲಿ ಜನತೆಗೆ ಸ್ಪಂದಿಸಿದ ಕಾಳಜಿಗೆ ಉಪಚುನಾವಣೆ ಫಲಿತಾಂಶ ಗೆಲುವು ತಂದು ಕೊಟ್ಟಿರಬಹುದು ಎಂದಷ್ಟೇ ವ್ಯಾಖ್ಯಾನ ಮಾಡುತ್ತೇನೆ ಎಂದು ಹೇಳಿದರು.