ಮರಾಠ, ಲಿಂಗಾಯತ ಪ್ರಾಧಿಕಾರ ರಚನೆ ಬೆನ್ನಲ್ಲೆ ಒಕ್ಕಲಿಗ ಪ್ರಾಧಿಕಾರದ ಚರ್ಚೆ

ಬೆಂಗಳೂರು : ರಾಜ್ಯದಲ್ಲಿ ಮರಾಠ ಸಮುದಾಯದವರಿಗೆ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವಂತೆ ಆದೇಶ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕ್ರಮವನ್ನು ಕನ್ನಡಪರ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ.

ಈ ಕುರಿತು ಹೇಳಿಕೆ ನೀಡಿರುವ ಕನ್ನಡ ಪರ ಸಂಘಟನೆ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಈ ಮರಾಠ ಅಭಿವೃದ್ಧಿ ಪ್ರಾಧಿಕಾರ ಆದೇಶವನ್ನು ಹಿಂಪಡೆಯಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ  ಮನವಿಯನ್ನು ಮಾಡಿದ್ದಾರೆ.

ಇಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಕನ್ನಡ ಪರ ಒಕ್ಕೂಟ ಸೇರಿದಂತೆ ಇತರ ಕನ್ನಡ ಪರ ಸಂಘಟಗಳು ಭಾಗವಹಿಸಿ ಪ್ರತಿಭಟನೆಯನ್ನು ನಡೆಸಿದವು,  ಈ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪ್ರತಿಕೃತಿಯನ್ನು ದಹನ ಮಾಡುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಮಾಡಿರುವುದು ಕನ್ನಡಿಗರಿಗೆ ಮಾಡಿದ ಮೋಸ, ಈ ಒಂದು ಪ್ರಾಧಿಕಾರವನ್ನು ಹಿಂಪಡೆಯಬೇಕು ಇಲ್ಲವಾದರೆ ಯಡಿಯೂರಪ್ಪನವರು ರಾಜೀನಾಮೆ ನೀಡಬೇಕು.  ಡಿ. 5 ರಂದು ಕರ್ನಾಟಕ ಬಂದ್ ಗೆ ರೈತ ಸಂಘಟನೆಗಳು ಎಲ್ಲಾ ಕನ್ನಡ ಪರ ಸಂಘಟನೆಗಳು ಬೆಂಬಲಿಸಲು ವಾಟಾಳ್ ನಾಗರಾಜ‍ ಮನವಿ ಮಾಡಿದ್ದಾರೆ.

ಮರಾಠಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ  ಆಗುತ್ತಿದ್ದಂತೆ ಮಾಜಿ ಸಚಿವ ಎಂ.ಬಿ ಪಾಟೀಲ್, ಬಸವರಾಜ ಹೊರಟ್ಟಿ ಹಾಗೂ ಲಿಂಗಾಯಿತ ಮಠಾಧೀಶರು ಲಿಂಗಾಯಿತ ಅಭಿವೃದ್ಧಿ ಪ್ರಾಧಿಕಾರ ರಚಿಸಲು ಸರ್ಕಾರಕ್ಕೆ ಮನವಿ ಮಾಡಿದ್ದರು. ಇವರ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ಕರ್ನಾಟಕ ವೀರಶೈವ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವುದಕ್ಕಾಗಿ ಅಗತ್ಯ ಕ್ರಮಕ್ಕೆ ಮುಂದಾಗಿತ್ತು.

ಇದರ ಬೆನ್ನಲ್ಲೆ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ ಒಕ್ಕಲಿಗರ ಅಭಿವೃದ್ಧಿ ನಿಗಮವನ್ನು ರಚಿಸಲಿ ಎಂದು ಸರ್ಕಾರಕ್ಕೆ  ಆಗ್ರಹಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *