ಬೆಂಗಳೂರು: ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
ಇವರು ಜೆ.ಎಚ್.ಪಟೇಲ್ ನೇತೃತ್ವದ ಜನತಾದಳ ಸರ್ಕಾರ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಕಳೆದ ವಿಧಾನಸಭಾ ಚುನಾವಣೆಗೂ ಮೊದಲು ಇವರು ಬಿಜೆಪಿಯನ್ನು ಸೇರಿದ್ದರು.