ಫೆ.26ರಿಂದ 86ನೇ ಕನ್ನಡ ಸಾಹಿತ್ಯ ಸಮ್ಮೇಳನ

 

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಹಾವೇರಿಯಲ್ಲಿ 2021ರ ಫೆ.26ರಿಂದ ಫೆ.28ರವರೆಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ನಿರ್ಧರಿಸಿದೆ.

ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ಮಂಗಳವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

‘ಕೋವಿಡ್ ಪ್ರಕರಣಗಳ ಸಂಖ್ಯೆಯು ಇಳಿಮುಖ ಕಾಣುತ್ತಿದೆ. ಹೀಗಾಗಿ ಮಾರ್ಗಸೂಚಿಗಳನ್ನು ಸಡಿಲಗೊಳಿಸಿ, ಅಕ್ಷರ ಜಾತ್ರೆ ನಡೆಸಲು ಅನುವುಮಾಡಿಕೊಡಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಬೇಕು’ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಕಾರ್ಯಕಾರಿ ಸಮಿತಿ ಸಭೆಯು ಸರ್ವಾನುಮತದಿಂದ ಇದಕ್ಕೆ ಒಪ್ಪಿಗೆ ಸೂಚಿಸಿತು.

ಇದಕ್ಕೂ ಮೊದಲು ದಿನಾಂಕ ನಿಗದಿ ಸಂಬಂಧ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವರಾಗಿರುವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ. ಪಾಟೀಲ ಹಾಗೂ ಹಾವೇರಿ ಶಾಸಕ ನೆಹರೂ ಓಲೇಕಾರ್ ಅವರೊಂದಿಗೆ ಚರ್ಚಿಸಲಾಯಿತು ಎಂದು ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *