ವರ್ತೂರು ಪ್ರಕಾಶ್ ಗೂ, ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ: ಡಿ.ಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ  ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ವರ್ತೂರು ಪ್ರಕಾಶ್ ಅವರು ಕಾಂಗ್ರೆಸ್ ಪಕ್ಷ ಸೇರಿದಲ್ಲಿ ಕೋಲಾರ ಭಾಗದಲ್ಲಿ ಗ್ರಾಮ ಪಂಚಾಯತ್ ಚುನಾವಣೆಯ ಉಸ್ತುವಾರಿ ನೀಡಲಾಗುವುದು ಎಂಬ ಊಹಾಪೂಹಗಳಿಗೆ ಈಗ ಡಿಕೆ ಶಿವಕುಮಾರ್ ಬ್ರೇಕ್ ಹಾಕಿದ್ದಾರೆ.

‘ಮಾಜಿ ಸಚಿವ ವರ್ತೂರು ಪ್ರಕಾಶ್ ಅವರಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಅವರು ನನ್ನನ್ನು ಭೇಟಿ ಮಾಡಿಲ್ಲ. ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಯಾವುದೇ ಆಲೋಚನೆಯೂ ಇಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

‘ವರ್ತೂರು ಪ್ರಕಾಶ್ ಅವರು ಈ ಕ್ಷಣದವರೆಗೂ ನನ್ನನ್ನು ಭೇಟಿ ಮಾಡಿಲ್ಲ. ಗ್ರಾಮ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ವರ್ತೂರು ಪ್ರಕಾಶ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ಸುಳ್ಳು ಪ್ರಚಾರ ಮಾಡುತ್ತಿದ್ದು, ನಮ್ಮ ಪಕ್ಷದ ಹಾಗೂ ಪಕ್ಷದ ನಾಯಕರ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿ : ವರ್ತೂರು ಪ್ರಕಾಶ್ ಅಪಹರಣ: 48 ಲಕ್ಷ ನೀಡಿ ಬಚಾವ್‍

ವರ್ತೂರು ಪ್ರಕಾಶ್ ಅವರು ಮುಂದಿನ ದಿನಗಳಲ್ಲಿ ಇದೇ ರೀತಿಯ ಕುತಂತ್ರ, ಅಪಪ್ರಚಾರ ಮುಂದುವರಿಸಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದು ಡಿ.ಕೆ ಶಿವಕುಮಾರ್ ಎಚ್ಚರಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *