ಸಂಸದ ಮುನಿಸ್ವಾಮಿ ಬೇಜವಬ್ದಾರಿ ಹೇಳಿಕೆಗೆ ಎಸ್.ಎಫ್.ಐ ಆಕ್ರೋಶ

ಕೋಲಾರ: ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಸ್ಟ್ರಾನ್ ಐಫೋನ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕರು ವೇತನ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಶನಿವಾರದಂದು ಪ್ರತಿಭಟನೆ ನಡೆಸಿದ್ದರು. ಆ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡು, ಪೀಠೋಪಕರಣ ನಾಶ ಮಾಡುವ ಮೂಲಕ ಪ್ರತಿಭಟನೆಕಾರರು ಆಕ್ರೋಶವನ್ನು ಹೊರ ಹಾಕಿದ್ದರು.

ಸಂಸದ ಮುನಿಸ್ವಾಮಿ

ಈ ಘಟನೆಗೆ ಎಸ್.ಎಫ್ ಐ ಕಾರಣ ಎಂದು ಸಂಸದ ಎಸ್. ಮುನಿಸ್ವಾಮಿಯವರು ಕೆಲ ಪತ್ರಿಕೆಗಳಿಗೆ ಹೇಳಿಕೆ ನೀಡಿದ್ದರು. ಸಂಸದರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿ ಬರುತ್ತದೆ. ಸಂಸದರ ಈ ಆರೋಪ ಅಚ್ಚರಿ ತಂದಿದ್ದು, ಪ್ರಕರಣದ ದಿಕ್ಕು ತಪ್ಪಿಸುವ ಹುನ್ನಾರ ಎಂದು SFI ರಾಜ್ಯ ಕಾರ್ಯದರ್ಶಿ ವಾಸುದೇವರೆಡ್ಡಿ ತಿಳಿಸಿದ್ದಾರೆ.

ಎಸ್ಎಫ್ಐಗೆ ಸಂಬಂಧವಿಲ್ಲದಿದ್ದರೂ ” ಎಸ್ಎಫ್ಐ ಸಂಘಟನೆ ಹೊರ ರಾಜ್ಯದ ಜನರನ್ನು ಕರೆಸಿಕೊಂಡು ದಾಂಧಲೆಯನ್ನು ಸಂಘಟಿಸಿದೆ ” ಎಂದು ಕೋಲಾರದ ಸಂಸದ ಎಸ್. ಮುನಿಸ್ವಾಮಿ ರಾಜಕೀಯ ಪ್ರೇರಿತ ಆರೋಪ ಮಾಡಿ ನಿಷ್ಪಕ್ಷಪಾತ ತನಿಖೆ ಯನ್ನು ದಿಕ್ಕುತಪ್ಪಿಸುವ ಪ್ರಯತ್ನ ನಡೆಸಿರುವುದನ್ನು ಎಸ್ಎಫ್ಐ ತೀವ್ರವಾಗಿ ಖಂಡಿಸಿದೆ.

ಎಸ್ಎಫ್ಐ ಯಾವುದೇ ಪ್ರತಿಭಟನೆಯನ್ನು ಸಂಘಟಿಸಿಲ್ಲರಲಿಲ್ಲ. ಎಸ್ಎಫ್ಐ ಒಂದು ವಿದ್ಯಾರ್ಥಿ ಸಂಘಟನೆಯಾಗಿದ್ದು ಅದು ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಹೋರಾಡುತ್ತಿದೆ ಆದರೆ ಇಲ್ಲಿರುವುದು ಕಾರ್ಮಿಕರು ಮತ್ತು ಕೈಗಾರಿಕೆ ಪ್ರಶ್ನೆಯಾಗಿದ್ದರು ಅನಾವಶ್ಯಕವಾಗಿ ವಿದ್ಯಾರ್ಥಿ ಸಂಘಟನೆಯ ಹೆಸರನ್ನು ಎಳೆದು ತರುವ ಪ್ರಯತ್ನವನ್ನು ಸಂಸದರು ನಡೆಸಿರುವುದು ಅವರ ಬೇಜವಾಬ್ದಾರಿತನ ತೋರುತ್ತದೆ ಎಂದು ವಾಸುದೇವರೆಡ್ಡಿ ಆರೋಪಿಸಿದ್ದಾರೆ.

ಕಾರ್ಮಿಕರ ಕಾನೂನುಗಳನ್ನು ಉಲ್ಲಂಘಿಸಿ ಯುವಜನರನ್ನು ಕಡಿಮೆ ಸಂಬಳ ನೀಡಿ 12 ಗಂಟೆಗಳ ಕಾಲ ದುಡಿಸಿಕೊಂಡು ನಾಲ್ಕೈದು ತಿಂಗಳಿಂದ ಸಂಬಳ ನೀಡದೆ ಸತಾಯಿಸಿ ಶೋಷಿಸುವುದರ ವಿರುದ್ಧ ಧ್ವನಿ ಎತ್ತಬೇಕಾಗಿದ್ದ ಕೋಲಾರದ ಸಂಸದ ಮುನಿಸ್ವಾಮಿ ಬಂಡವಾಳಶಾಹಿ ಕಂಪನಿಗಳ ಪ್ರಭಾವಕ್ಕೆ ಒಳಗಾಗಿ ಕಾರ್ಮಿಕರ ಹಿತವನ್ನು ಮರೆತಿದ್ದಾರೆ. ಕಾರ್ಮಿಕರ ಶೋಷಣೆಯ ಮೂಲಕ ಕಾರ್ಪೋರೇಟ್ ಹಣಕಾಸು ಬಂಡವಾಳಶಾಹಿಗಳ ಆಸ್ತಿ ಹೆಚ್ಚಳಕ್ಕೆ ಕೈಜೋಡಿಸಿದ್ದಾರೆ ಎಂದು SFI ಕೋಲಾರ ಜಿಲ್ಲಾಧ್ಯಕ್ಷ ಶಿವಪ್ಪ ತಿಳಿಸಿದ್ದಾರೆ.

ಈ ಘಟನೆ ನಡೆಯಲು ಕಾರಣ ಕಾರ್ಮಿಕರ ಗುತ್ತಿಗೆ ಏಜೆನ್ಸಿ ಮತ್ತು ಕಾರ್ಮಿಕರ ನಡುವಿನ ವೇತನ ಶೋಷಣೆ ಮತ್ತು ಈ ಸಮಸ್ಯೆಯನ್ನು ನಿರ್ವಹಿಸುವಲ್ಲಿನ ಕಾರ್ಮಿಕ ಅಧಿಕಾರಿಗಳ ನಿರ್ಲಕ್ಷ್ಯತೆಯ ಕಾರ್ಮಿಕರ ರೀತಿಯಾಗಿ ದಿಢೀರ್ ಪ್ರತಿಭಟನೆ ನಡೆಸಿ ದಾಂಧಲೆಗೆ ಇಳಿಯಲು ಕಾರಣ ಈ ಸಮಸ್ಯೆಯನ್ನು ಪರಿಹರಿಸುವಲ್ಲಿ ಸರ್ಕಾರ ಮತ್ತು ಜವಾಬ್ದಾರಿ ಸ್ಥಾನದಲ್ಲಿರುವ ಜವಾಬ್ದಾರಿ ಸ್ಥಾನದಲ್ಲಿರುವ ಜನಪ್ರತಿನಿಧಿಯಾಗಿ ಸಂಸದ ಮುನಿಸ್ವಾಮಿ ವಿಫಲರಾಗಿದ್ದಾರೆ ಆದ್ದರಿಂದ ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ವಿದ್ಯಾರ್ಥಿ ಸಂಘಟನೆಗಳ ವಿರುದ್ಧ ರಾಜಕೀಯ ಪ್ರೇರಿತ ಪಕ್ಷಪಾತಿ ಆರೋಪಗಳನ್ನು ಹೊರಿಸುತ್ತಿರುವುದು ಅವರ ಬೇಜವಾಬ್ದಾರಿತನವನ್ನು ತೋರಿಸುತ್ತದೆ. ಈ ಮೂಲಕ ಕಾರ್ಮಿಕರ ನಿಜವಾದ ಸಮಸ್ಯೆಗಳನ್ನು ಮರೆಮಾಚಲು ನಿಷ್ಪಕ್ಷಪಾತ ತನಿಖೆಯ ನಡೆಯುವ ಮುನ್ನವೇ ಸಂಸದ ಮುನಿಸ್ವಾಮಿ ರವರು ತನಿಖೆಯನ್ನು ದಿಕ್ಕು ತಪ್ಪಿಸಲು ಶತಪ್ರಯತ್ನ ಮಾಡುತ್ತಿದ್ದಾರೆ.

ಈ ರೀತಿಯ ದಾಂಧಲೆ ಹಾಗು ಕಾನೂನನ್ನು ಕೈಗೆತ್ತಿಕೊಳ್ಳುವುದನ್ನು ಎಸ್ಎಫ್ಐ ತೀವ್ರವಾಗಿ ವಿರೋಧಿಸುತ್ತದೆ. ಈ ದಾಂಧಲೆ ನಡೆಸಿದವರ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ಶಿವಪ್ಪ ಆಗ್ರಹಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *