ಬೆಂಗಳೂರು : ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಖಾಸಗಿ ಅನುದಾನರಹಿತ ಅಲ್ಪಸಂಖ್ಯಾತ ಮತ್ತು ಇತರೆ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಲು ಒತ್ತಾಯಿಸಿ ಖಾಸಗಿ ಶಾಲೆಗಳು ಮತ್ತು ಮಕ್ಕಳ ಕಲ್ಯಾಣ ಸಂಘದ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಇಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು.
ಈ ಉಪವಾಸ ಸತ್ಯಾಗ್ರಹವನ್ನು ಉದ್ದೇಶಿ ಮಾತನಾಡಿದ ಸಂಘದ ಮುಖಂಡರಾದ ಡಾ.ಅಷ್ಪದ್ ಅಹ್ಮದ್ ಕೋರೊನಾ ಹಿನ್ನಲೆಯಲ್ಲಿ ಖಾಸಗಿ ಅನುದಾನರಹಿತ ಅಲ್ಪಸಂಖ್ಯಾತ ಮತ್ತು ಇತರ ಶಾಲಾ ಶಿಕ್ಷಕರು ಸಂಕಷ್ಟದಲ್ಲಿದ್ದಾರೆ. ಈಗಾಗಿ ಅವರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಅವರು ದಿನಗಳನ್ನು ಸಾಗಿಸುವುದು ಕಷ್ಟಸಾಧ್ಯಗಿದೆ ಈಗಾಗಲೇ ಸರ್ಕಾರ ಘೋಷಿಸಿರುವ ರೇಷನ್ ಕಿಟ್ ಗಳನ್ನು ವಿತರಿಸಬೇಕು. ಪಿಎಫ್ ಇ ಎಸ್ ಐ ಪ್ರೊಪೆಷನಲ್ ಟ್ಯಾಕ್ಸ್ ಪ್ರಾಪರ್ಟಿ ಟ್ಯಾಕ್ಸ್ ಬ್ಯಾಂಕ್ ಸಾಲ ಮರುಪಾವತಿಗೆ ಸಮಯಾವಕಾಶ ಒದಗಿಸಬೇಕು. ಬಡ್ಡಿ ರಹಿತ ಸಾಲದ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳಿಗೆ ಕನಿಷ್ಠ ಶುಲ್ಕ ಪಾವತಿಸಲು ಮತ್ತು ವಿದ್ಯಾರ್ಥಿಗಳಿಗೆ ಶಾಲೆಗಳಿಗೆ ದಾಖಲಾತಿ ಮಾಡಲು ನಿರ್ದೇಶನ ನೀಡಬೇಕು. ಕನಿಷ್ಠ ಮಾನದಂಡದೊಂದಿಗೆ ಮಾನ್ಯತೆ ನವೀಕರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಈ ಉಪವಾಸ ಸತ್ಯಾಗ್ರಹದಲ್ಲಿ ರಾಷ್ಟ್ರೀಯ ಚಾಲಕರ ಒಕ್ಕೂಟದ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.