ತಿರುವನಂತಪುರಂ : ರೈತ ವಿರೋಧಿ ಕೃಷಿ ಕಾನೂನು ವಿರುದ್ಧ ನಿರ್ಣಯ ಅಂಗೀಕಾರಕ್ಕೆ ಕೇರಳ ಸರ್ಕಾರ ವಿಶೇಷ ಅಧಿವೇಶನ ನಡೆಸಲು ನಿರ್ಧಾರವನ್ನು ಕೈಗೊಂಡಿದೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನುಗಳ ವಿರುದ್ಧ ಇದೇ ಡಿಸೆಂಬರ್ 23 ರಂದು ನಿರ್ಣಯ ಅಂಗೀಕರಿಸಲು ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲಾಗುತ್ತದೆ ಎಂದು ತಿಳಿದುಬಂದಿದೆ.
ಈ ವಿಚಾರವಾಗಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಪ್ರತಿಪಕ್ಷದ ನಾಯಕ ರಮೇಶ್ ಚೆನ್ನಿಥಾಲಾ ಒಮ್ಮತ ಸಾಧಿಸಿದ್ದು, ಕ್ಯಾಬಿನೆಟ್ ಸಭೆಯ ನಂತರ ಕೇರಳ ಸರ್ಕಾರ ವಿಶೇಷ ವಿಧಾನಸಭೆ ಅಧಿವೇಶನ ಕರೆಯಲು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಸಂಪರ್ಕಿಸಲಿದೆ. ತದನಂತರ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.