ವಾಷಿಂಗ್ಟನ್, ಜ, 9: ಟ್ರಂಪ್ ನ ಬೆಂಬಲಿಗರು ಬುಧವಾರ ಯುಎಸ್ ಕ್ಯಾಪಿಟಲ್ ಕಟ್ಟಡಕ್ಕೆ ನುಗ್ಗಿ ಗದ್ದಲ ಸೃಷ್ಟಿಸಿರುವ ಬೆನ್ನಲ್ಲೇ ಟ್ರಂಪ್ ನ ಟ್ವಿಟರ್ ಖಾತೆಯನ್ನು ಶಾಶ್ವತವಾಗಿ ರದ್ದುಗೊಳಿಸಲಾಗುವುದಾಗಿ ಟ್ವಿಟರ್ ಪ್ರಕಟಣೆಯಲ್ಲಿ ತಿಳಿಸಿದೆ.
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ ಡೊನಾಲ್ಡ್ ಟ್ರಂಪ್ ತನ್ನ ಸೋಲಿನ ಹಿನ್ನಲೆ ಹಿಂಸಾಚಾರ ಕೃತ್ಯೆಗಳು ಹೆಚ್ಚುತ್ತಲೇ ಇದ್ದು, ಟ್ರಂಪ್ ಅಧಿಕಾರ ತ್ಯಜಿಸಲು ನಿರಾಕರಣೆ ಮಾಡುತ್ತಿದ್ದಾರೆ. ತನ್ನ ಸೋಲನ್ನು ಒಪ್ಪಿಕೊಳ್ಳದೇ ತನ್ನ ಬೆಂಬಲಿಗರ ಮೂಲಕ ಬುಧವಾರ ಪ್ರತಿಭಟನೆ ಆರಂಭಿಸಿದ್ದು, ಕೋಲಾಹಲ ಸೃಷ್ಟಿಯಾಗಿದೆ. ಟ್ರಂಪ್ ಸೋಲಿಗೆ ಆಕ್ರೋಶ ವ್ಯಕ್ತಪಡಿಸಿ ಯುಎಸ್ ಕ್ಯಾಪಿಟಲ್ ಕಟ್ಟಡಕ್ಕೆ ನುಗ್ಗಿ ಗದ್ದಲ ಸೃಷ್ಟಿಸುವ ಸಂದರ್ಭದಲ್ಲಿ ಒಬ್ಬ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಎಲ್ಲಾ ಘಟನೆ ಹಿನ್ನಲ್ಲೆಯಲ್ಲಿ @ ರಿಯಲ್ಡೊನಾಲ್ಡ್ ಟ್ರಂಪ್ ಅವರ ಟ್ವಿಟರ್ ಖಾತೆಯನ್ನು ಟ್ವಿಟರ್ ಕೂಲಂಕುಷವಾಗಿ ಪರೀಶಿಲಿಸಿದ ಬಳಿಕ ಇನ್ನಷ್ಟು ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುವ ಸಾಧ್ಯತೆಗಳು ಹೆಚ್ಚಿದ್ದು, ಅವರ ಟ್ವಿಟರ್ ಖಾತೆಯನ್ನು ನಾವು ಶಾಶ್ವತವಾಗಿ ಮುಚ್ಚುತ್ತಿದ್ದೆವೆ ಎಂದು ಟ್ವಿಟರ್ ಹೇಳಿಕೆ ನೀಡಿದೆ.