ಮಹಾ ಸಿಎಂ ಮಾತನ್ನು ‘ಕಡೆಗಣಿಸಿ’ – ನಾಗಾಭರಣ

ಮಡಿಕೇರಿ ಜ 29 : ಬೆಳಗಾವಿಯಲ್ಲಿ ಅಧಿಕ ಸಂಖ್ಯೆಯಲ್ಲಿ ಮರಾಠಿಗರೇ ಇರುವುದರಿಂದ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರುತ್ತದೆ ಎನ್ನೋ ಮಹಾರಾಷ್ಟ್ರ ಸಿಎಂ ಉದ್ಭವ್ ಠಾಕ್ರೆ ಮಾತನ್ನು ನೆಗ್ಲೇಟ್ ಮಾಡೋದು ಒಳ್ಳೇಯದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ ಎಸ್ ನಾಗಾಭರಣ ಮಹಾರಾಷ್ಟ್ರ ಸಿಎಂಗೆ ತಿರುಗೇಟು ನೀಡಿದ್ದಾರೆ.

ಮಡಿಕೇರಿಯಲ್ಲಿ ಕನ್ನಡ ಜಾಗೃತಿ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಆ ಸಿಎಂ ಮಾತು ಸಾಂಧರ್ಭಿಕವಾಗಿಯೂ ಇರಲ್ಲ, ತಾತ್ವಿಕವಾಗಿಯೂ ಇರಲ್ಲ. ಅದಕ್ಕೆ ಉತ್ತರ ನೀಡದೇ ಇದ್ದರೆ ಒಳ್ಳೆಯದು ಎಂದು ನಾಗಾಭರಣ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿರುವ ಯಾವುದೇ ಭಾಷಿಕನಾದರೂ ಅವನು ಕನ್ನಡಿಗನೇ. ಕರ್ನಾಟಕದ ಒಂದಿಂಚು ಜಾಗವನ್ನೂ ಬಿಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *