ನವದೆಹಲಿ.ಫೆ.02: ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ ಎರಡು ತಿಂಗಳಿನಿಂದ ದೆಹಲಿ ಗಡಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ಇಂಟರ್ ನೆಟ್ ನಿಷೇಧ, ಕೃಷಿ ಕಾಯ್ದೆ ರದ್ದಿಗಾಗಿ ಆಗ್ರಹಿಸಿ ಕೇಂದ್ರದ ವಿರುದ್ಧ ರೈತರು ಫೇಬ್ರವರಿ 6 ರಂದು ದೇಶಾದ್ಯಂತ ರಸ್ತೆ ಬಂದ್ ಗೆ ಕರೆ ಕೊಟ್ಟಿದೆ.
ವೃತ್ತಿ ಧರ್ಮ ಕಳೆದುಕೊಂಡು ಬೆತ್ತಲಾಗಿರುವ ಮಾಧ್ಯಮಗಳನ್ನು ಬಹಿಷ್ಕರಿಸುವ ನಿಟ್ಟಿನಲ್ಲಿ ಯೋಚಿಸಬೇಕಿದೆ
ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮತ್ತು ಪೋಲಿಸ್ ರು ರೈತರ ಮೇಲೆ ನಡೆಸುತ್ತಿರುವ ದಬ್ಬಾಳಿಕೆ ಖಂಡಿಸಿ ಮತ್ತು ಪ್ರತಿಭಟನಾ ಸ್ಥಳಗಳಲ್ಲಿ ನೀರು, ವಿದ್ಯುತ್ ಮತ್ತು ಇಂಟರ್ ನೆಟ್ ಸ್ಥಗಿತಿಗೊಳಿಸಿದ ಕೇಂದ್ರ ಸರ್ಕಾರದ ನಡೆಯನ್ನು ವಿರೋಧಿಸಿ ಫೆಬ್ರವರಿ 6 ರಂದು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು ಮೂರು ಗಂಟೆಗಳ ಕಾಲ ಬಂದ್ ಮಾಡುವುದಾಗಿ ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದೆ.
ಇನ್ನೂ ಕೇಂದ್ರ ಬಜೆಟ್ 2021-22ರಲ್ಲಿ ರೈತರನ್ನು ನಿರ್ಲಕ್ಷಿಸಲಾಗಿದೆ, ಅಲ್ಲದೆ ‘ಟ್ರ್ಯಾಕ್ಟರ್ 2 ಟ್ವಿಟರ್’ ಹೆಸರಿನ ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಲಾಗಿದೆ. ಶಾಂತಿಯುತವಾಗಿ ನಡೆಸುತ್ತಿರುವ ಪ್ರತಿಭಟನೆ ತಡೆಯೊಡ್ಡುತ್ತಿರುವ ಕೆಂದ್ರ ಸರ್ಕಾರದ ಈ ನಡೆಯನ್ನು ವಿರೋಧಿಸಿ ರಸ್ತೆ ಬಂದ್ ಗೆ ಕರೆ ನೀಡಿರುವುದಾಗಿ ತಿಳಿಸಿದೆ.