ಡೆಹ್ರಾಡೂನ್: ಬಿಜೆಪಿ ಸಂಸದ ತೀರಥ್ ಸಿಂಗ್ ರಾವತ್ ಅವರನ್ನು ಉತ್ತರಖಂಡ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಭಾರತೀಯ ಜನತಾ ಪಕ್ಷ(ಬಿಜೆಪಿ)ವು ಘೋಷಣೆ ಮಾಡಿರುವ ಬಗ್ಗೆ ಎಎನ್ಐ ಸುದ್ಧಿಸಂಸ್ಥೆ ವರದಿ ಮಾಡಿದೆ.
ಡೆಹ್ರಾಡೂನ್ ನಲ್ಲಿ ಬಿಜೆಪಿ ಪಕ್ಷದ ಶಾಸಕಾಂಗ ಸಭೆಯ ಬಳಿಕ ಅಧಿಕೃತವಾಗಿ ಪ್ರಕಟಿಸಿದರು. ಇಂದು ಸಂಜೆ 4 ಗಂಟೆಗೆ ರಾಜ್ಯಪಾಲೇ ಬೇಬಿ ರಾಣಿ ಮೈರ್ಯ ಅವರಿಂದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ತೀರಥ್ ಸಿಂಗ್ ರಾವತ್ ಬಿಜೆಪಿ ಸಂಸದರಾಗಿದ್ದು, ಉತ್ತರಾಖಂಡ ರಾಜ್ಯವಾಗಿ ರಚನೆಯಾದ ನಂತರ ಶಿಕ್ಷಣ ಸಚಿವರಾಗಿ ಕೆಲಸ ಮಾಡಿದ ರಾವತ್ ಅವರು, 2007ರಲ್ಲಿ ಉತ್ತರಾಖಂಡ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಯೂ ಆಯ್ಕೆಯಾಗಿದ್ದರು. 2013-15ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.
24 ಗಂಟೆ ಅವಧಿಯಲ್ಲಿ ನಡೆದ ಕ್ಷೀಪ್ರ ಬೆಳವಣಿಗೆಯಲ್ಲಿ ಬಿಜೆಪಿ ಆಡಳಿತವಿರುವ ಉತ್ತರಖಂಡ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತಿದ್ದ ತ್ರಿವೇಂದ್ರ ಸಿಂಗ್ ರಾವತ್ ರವರು ನೆನ್ನೆ ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ರಾಜ್ಯದಲ್ಲಿ ಚುನಾವಣೆಗೆ ಇನ್ನು ಒಂದು ವರ್ಷ ಮಾತ್ರ ಬಾಕಿ ಇದ್ದು, ತ್ರಿವೇಂದ್ರ ಸಿಂಗ್ ರಾವತ್ ಅವರ ಆಡಳಿತದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಪ್ರಮುಖರು. ಅವರನ್ನು ಬದಲಾವಣೆಗೆ ಪಟ್ಟು ಹಿಡಿದ್ದರು. ಈ ಬಗ್ಗೆ ಬಿಜೆಪಿ ಹೈಕಮಾಂಡ್ ಗೂ ದೂರು ಸಲ್ಲಿಸಿದ್ದರು. ದೆಹಲಿ ಭೇಟಿಯ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ನೆನ್ನೆ ರಾಜೀನಾಮೆ ಸಲ್ಲಿಸಿದರು.
ಬಿಜೆಪಿಯೊಳಗೆ ಹೆಚ್ಚಾಗುತ್ತಿರುವ ಅಸಮಾಧಾನದ ಬಗ್ಗೆ ಚರ್ಚಿಸಲು ಬಿಜೆಪಿ ಉಪಾಧ್ಯಕ್ಷ ರಮನ್ ಸಿಂಗ್ ಹಾಗೂ ರಾಜ್ಯಸಭಾ ದುಷ್ಯಂತ್ ಗೌತಮ್ ರವರು ಮಾರ್ಚ್ 7ರಂದು ರಾಜ್ಯ ಭೇಟಿ ನೀಡ ಸಭೆ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿ ಹಾಗೂ ರಾಜ್ಯದ ಬಿಜೆಪಿ ನಾಯಕರು, ಆರ್ಎಸ್ಎಸ್ ಮುಖಂಡರು ಭಾಗವಹಿಸಿದ್ದರು.
ಸಭೆಯ ಬಳಿಕ ನಾಯಕತ್ವ ಬದಲಾವಣೆಯ ಬಗ್ಗೆ ಬಿಜೆಪಿ ಮೂಲಗಳು ಸುಳಿವು ನೀಡಿತ್ತು. ಸಭೆಯಲ್ಲಿ ತ್ರಿವೇಂದ್ರ ಸಿಂಗ್ ರಾವತ್ ಅವರಿಗೆ ಸಾಮೂಹಿಕ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸೂಕ್ತ ಉತ್ತರಕ್ಕಾಗಿ ದೆಹಲಿಗೆ ಹೋಗಬೇಕೆಂದು ತಿಳಿಸಿದ್ದರು.