ನವದೆಹಲಿ: ಚುನಾವಣಾ ವ್ಯಾಪ್ತಿಯ ರಾಜ್ಯಗಳಾದ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಗಳಲ್ಲಿ ಕೋವಿಡ್-19 ಲಸಿಕೆ ಪ್ರಮಾಣ ಪತ್ರಗಳಲ್ಲಿ ಪ್ರಧಾನಿ ಮೋದಿಯವ್ರ ಭಾವಚಿತ್ರವನ್ನ ತೆಗೆಯಲು ಆರೋಗ್ಯ ಸಚಿವಾಲಯ ನಿರ್ಧರಿಸಿದೆ.
ಚುನಾವಣಾ ಆಯೋಗಕ್ಕೆ ಲಸಿಕೆ ಪ್ರಮಾಣ ಪತ್ರಗಳ ಮೇಲೆ ಪಿಎಂ ಮೋದಿಯವರ ಫೋಟೋ ಹಾಕಿರುವುದು ‘ಮಾದರಿ ನೀತಿ ಸಂಹಿತೆಯ (ಎಂಸಿಸಿ) ಉಲ್ಲಂಘನೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಈ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.
ಅದರಂತೆ, ಕೇಂದ್ರ ಚುನಾವಣಾ ಆಯೋಗ (ಇಸಿಐ) ನಿರ್ದೇಶನದಂತೆ ಚುನಾವಣಾ ವ್ಯಾಪ್ತಿಯ ರಾಜ್ಯಗಳಾದ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಗಳಲ್ಲಿ ಪ್ರಧಾನ ಮಂತ್ರಿ ಮೋದಿಯವರ ಪೋಟೋ ತೆಗೆಯವಂತೆ ಕೇಂದ್ರಕ್ಕೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವಾಲಯ ಈ ನಿರ್ಧಾರ ತೆಗೆದುಕೊಂಡಿದೆ.